ಆನಂದ ಮಾಮನಿ ವಿಧಾನಸಭೆ ಉಪ ಸಭಾಧ್ಯಕ್ಷರಾಗಿ ಆಯ್ಕೆ
ಬೆಂಗಳೂರು, ಮಾ 24,ವಿಧಾನಸಭೆಯ ಉಪ ಸಭಾಧ್ಯಕ್ಷರಾಗಿ ಬಿಜೆಪಿಯ ಆನಂದ ಮಾಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಕೃಷ್ಣಾ ರೆಡ್ಡಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಆನಂದ ಮಾಮನಿ ಅವಿರೋಧವಾಗಿ ಆಯ್ಕೆಯಾದರು. ಈ ಹುದ್ದೆಗೆ ಬಿಜೆಪಿಯ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಅರಗ ಜ್ಞಾನೇಂದ್ರ ಅವರ ಹೆಸರು ಕೇಳಿ ಬಂದಿತ್ತು. ಆದರೆ ಕೊನೆ ಸಮಯದಲ್ಲಿ ಆನಂದ ಮಾಮನಿ ಅವರಿಗೆ ಈ ಹುದ್ದೆ ಒಲಿದು ಬಂತು. ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾದ ಆನಂದ ಮಾಮನಿ 3ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1997-98ರಲ್ಲಿ ಇವರ ತಂದೆ ಚಂದ್ರಶೇಖರ ಮಾಮನಿ ಅವರು ಸಹ ವಿಧಾನಸಭೆಯ ಉಪಸಭಾಧ್ಯಕ್ಷರಾಗಿದ್ದರು. ಇದೀಗ ಅವರ ಪುತ್ರನಿಗೂ ಸಹ ಇದೇ ಹುದ್ದೆ ಒಲಿದು ಬಂದಿದೆ. ಆನಂದ ಮಾಮನಿ ಅವರನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಪ್ರಕಟಿಸಿದರು. ಸಭಾನಾಯಕರೂ ಆದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತಿತರರು ಆನಂದ ಮಾಮನಿ ಅವರನ್ನು ಅಭಿನಂದಿಸಿದರು. ಆನಂದ ಮಾಮನಿ ಅವರು ಉಪಸಭಾಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ಅಭಿನಂದಿಸಿದ್ದಾರೆ. ತಮ್ಮ ಜಿಲ್ಲೆಯವರೇ ಆದ ಮಾಮನಿ ಅವರಿಗೆ ಈ ಹುದ್ದೆ ದೊರೆತರಿವುದು ತಮಗೆ ಅತೀವ ಸಂತಸ ತಂದಿದೆ ಎಂದು ಹೇಳಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 