ಆಂಧ್ರ ಪ್ರದೇಶ: ಯುಗಾದಿ ಹಬ್ಬದಿಂದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಸುಳಿವು

Andhra Pradesh: Free bus travel for women from Ugadi festival

ಹೈದರಾಬಾದ್‌ 31: ಕಳೆದ ಮೇ ತಿಂಗಳಲ್ಲಿ ನಡೆದ ಆಂಧ್ರ ಪ್ರದೇಶದ ವಿಧಾನಸಭಾ ಚುನಾವಣೆಗೂ ಪೂರ್ವದಲ್ಲಿ ತೆಲುಗು ದೇಶಂ– ಜನ ಸೇನಾದ ಜಂಟಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ‘ಸೂಪರ್‌ ಸಿಕ್ಸ್‌’ ಭರವಸೆಗಳಲ್ಲಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯೂ ಒಂದು.

ಮುಖ್ಯಮಂತ್ರಿಯು ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸೋಮವಾರ ನಡೆಸಿದ ಸಭೆಯಲ್ಲಿ ಈ ವಿಷಯ ಪ್ರಸ್ತಾಪಗೊಂಡಿದೆ.

ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಯೋಜನೆ ಇನ್ನೂ ಜಾರಿಗೊಂಡಿಲ್ಲ. ಸಂಕ್ರಾಂತಿ ಹಬ್ಬದಿಂದ ಜಾರಿಗೊಳ್ಳಲಿದೆ ಎಂದು ನಿರೀಕ್ಷಿಸಿದ್ದ ಈ ಯೋಜನೆಯನ್ನು ಮತ್ತೆ ಮುಂದೂಡಲಾಗಿದೆ. 

ಆಂಧ್ರ ಪ್ರದೇಶದ ಸರ್ಕಾರಿ ಬಸ್‌ಗಳಲ್ಲಿ ಯುಗಾದಿ ಹಬ್ಬದಿಂದ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ  ಸುಳಿವನ್ನು ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ನೀಡಿದ್ದಾರೆ.

ಯೋಜನೆ ಅನುಷ್ಠಾನದ ಬಗ್ಗೆ ಅಧ್ಯಯನ ನಡೆಸಲಿಕ್ಕಾಗಿ ಎಪಿಆರ್‌ಟಿಸಿ ಅಧಿಕಾರಿಗಳು ವಿವಿಧ ರಾಜ್ಯಗಳಿಗೆ ಈಗಾಗಲೇ ಭೇಟಿ ನೀಡಿದ್ದಾರೆ. ಕ್ಯಾಬಿನೆಟ್‌ ಉಪಸಮಿತಿಯು ಸಹ ಜ. 2ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.