ಕೊಪ್ಪಳ ೦೯: ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕ್ಷೇತ್ರವಾದ ಗಂಗಾವತಿ ತಾಲ್ಲೂಕಿನ ಆನೆಗೊಂದಿ ಉತ್ಸವ-2020ರ ನಿಮಿತ್ತ ಇಂದು (ಜ.9) ಹಮ್ಮಿಕೊಳ್ಳಲಾದ ಗಂಗಾವತಿ ಬಸ್ ನಿಲ್ದಾಣದಿಂದ ಸಾಣಾಪುರ, ಆನೆಗೊಂದಿ ವರೆಗಿನ ಪುರುಷರ ಮತ್ತು ಮಹಿಳಾ ಮ್ಯಾರಾಥಾನ್ಗೆ ಶಾಸಕ ಪರಣ್ಣ ಈ. ಮುನವಳ್ಳಿ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಚ್. ವಿಸ್ವನಾಥರೆಡ್ಡಿ, ಗಂಗಾವತಿ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಮಲ್ಲಿಕಾಜರ್ುನಗೌಡ ಪೊ. ಪಾಟೀಲ್, ಕಾರ್ಯನಿರ್ವಾಹಕ ಅಧಿಕಾರಿ ಡಾ. ಡಿ.ಮೋಹನ, ಕನಕಗಿರಿ ತಹಶೀಲ್ದಾರ್ ರವಿ ಅಂಗಡಿ, ಕಾರಟಗಿ ತಹಶೀಲ್ದಾರ್ ಕವಿತಾ, ಗಂಗಾವತಿ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ರಾಥೋಡ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮ್ಯಾರಾಥಾನ್ :
ಗಂಗಾವತಿ ಬಸ್ ನಿಲ್ದಾಣದಿಂದ ಆನೆಗೊಂದಿಯ ಶ್ರೀ ಕೃಷ್ಣದೇವರಾಯ ವೇದಿಕೆಯವರೆಗೆ ಪುರುಷರ ಮ್ಯಾರಾಥಾನ್ ಮತ್ತು ಗಂಗಾವತಿ ಬಸ್ ನಿಲ್ದಾಣದಿಂದ ಸಂಗಾಪುರ ಗ್ರಾಮದವರೆಗೆ ಮಹಿಳೆಯರ ಮ್ಯಾರಾಥಾನ್ ಹಮ್ಮಿಕೊಂಡಿದ್ದು, ಶಾಲಾ ಕಾಲೇಜು ವಿದ್ಯಾಥರ್ಿಗಳು ಹಾಗೂ ಸಾರ್ವಜನಿಕರು ಈ ಮ್ಯಾರಾಥಾನ್ದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು.