ಅನಿಮಿಯಾ ತಡೆಗಟ್ಟುವ ಕಾರ್ಯಕ್ರಮ
Anemia prevention program
ತಾಳಿಕೋಟೆ 25: ದೇಹದಲ್ಲಿ ಕಬ್ಬಿಣಾಂಶ ಕೊರತೆಯಾದರೆ ರಕ್ತಹೀನತೆ(ಅನಿಮಿಯಾ) ಉಂಟಾಗಲು ಕಾರಣವಾಗಿದ್ದು ಇದನ್ನು ತಡೆಗಟ್ಟಲು. ನಾವು ದೇಹಕ್ಕೆ ಅತ್ಯಗತ್ಯವಾದ ಕಬ್ಬಿಣಾಂಶ ಇರುವ ಸತ್ವಯುತ ಆಹಾರವನ್ನು ನಿಯಮಿತವಾಗಿ ಸೇವನೆ ಮಾಡುವ ಮೂಲಕ ಇದನ್ನು ತಡೆಗಟ್ಟಬಹುದು ಎಂದು ವಿಜಯಪುರ ಐಆರಿ್ಡ ಸಂಸ್ಥೆಯ ಮುಖ್ಯಸ್ಥೆ ಶಾಂತಾ.ಎಂ ಬೇಲಾಳ ಹೇಳಿದರು.
ಅವರು ಪಟ್ಟಣದ ಶ್ರೀಖಾಸ್ಗತೇಶ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ, ಸಹಯೋಗದಲ್ಲಿ ಆಯೋಜಿಸಿದ್ದ ಅನಿಮಿಯಾ ತಡೆಗಟ್ಟುವ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು. ಕಬ್ಬಿಣಾಂಶದ ಕೊರತೆಯಾದರೆ ನಿಶ್ಯಕ್ತಿ, ಸುಸ್ತು, ಜೀರ್ಣಶಕ್ತಿ ಕಡಿಮೆಯಾಗುತ್ತದೆ. ಉಸಿರಾಟದಲ್ಲಿ ಕಷ್ಟವಾಗುತ್ತದೆ. ಇಚೇಗೆ ವಿದ್ಯಾರ್ಥಿಗಳಲ್ಲಿ ಇದು ಹೆಚ್ಚಾಗಿ ಕಂಡು ಬರುತ್ತಿದೆ. ಇದರ ನಿವಾರಣೆಗೆ ಬೇಕರಿ ತಿಂಡಿಗಳಿಂದ ದೂರವಿರಿ ಹಾಗೂ ಅಧಿಕ ಜೀವಸತ್ವ ಇರುವ ಸೊಪ್ಪು, ತರಕಾರಿಗಳನ್ನು ಸೇವನೆ ಮಾಡುವಂತೆ ಸಲಹೆ ನೀಡಿದರು. ಪ್ರಾಚಾರ್ಯ ದಯಾನಂದ ಡಿ ಮೂಗಡ್ಲಿಮಠ ರಕ್ತ ತಪಾಸಣೆ ಮಾಡಿಕೊಳ್ಳುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳಲ್ಲಿ ರಕ್ತಹೀನತೆ ಪತ್ತೆ ಮಾಡಿ, , ಜಾಗೃತಿ ಮೂಡಿಸಿ ಅನೇಮಿಯಾ ನಿವಾರಣೆಗೆ ಓಷಧಿಗಳನ್ನು ವಿತರಣೆ ಮಾಡಲಾಯಿತು.
ಎನ್.ಎಸ್.ಎಸ್. ಅಧಿಕಾರಿ ಅಜೇಯ ಅಬ್ಬಾರ, ಈರಮ್ಮ ಲಕ್ಕಪ್ಪಗೋಳ .ಅನೀಲಕುಮಾರ ಆಲಾಳಮಠ ದೇವಪ್ಪಯ್ಯ ಮಠ ಸಿದ್ದುಪಾಟೀಲ ಹಾಗೂ ಸಿಬ್ಬಂದಿಗಳಾದ ಸೋಮು ಸಜ್ಜನ ಪ್ರಶಾಂತ ಹಂದರಾಳ, ಧನಪಾಲ ಬಾಡರಟ್ಟಿ, ಸಮಾ ಮಠ, ಶಕುಂತಲಾ ಮಠ ಹಾಗೂ ಮಹಾವಿದ್ಯಾಲಯದ ಎಲ್ಲ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 300 ವಿದ್ಯಾರ್ಥಿಗಳಿಗೆ ತಪಾಸಣೆ ಮಾಡಲಾಯಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 