ಕಾರವಾರ 17: ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಕಾರವಾರ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಮಂಗಳವಾರ ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಎರಡು ದಿನಗಳ ಧರಣಿ ಆರಂಭಿಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ತಾರಾ ನಾಯ್ಕಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಐಸಿಡಿಎಸ್ ಪ್ರತ್ಯಕ ನಿರ್ದೇಶಾನಾಲಯವನ್ನು ರಚಿಸಬೇಕು. ಪೂರಕ ಪೌಷ್ಠಿಕ ಆಹಾರದ ಬದಲು ಸಂಪೂರ್ಣ ಆಹಾರ ನೀಡಬೇಕು. ಗ್ರಾಜ್ಯುಟಿ ಅನುದಾನದ ಬಿಡುಗಡೆ ಮಾಡಬೇಕು ಮತ್ತು ಬಜೆಟ್ನಲ್ಲಿ ಅನುದಾನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.ಗೀತಾ ನಾಯ್ಕ ಮಾತನಾಡಿ ಗುಜರಾತ್ ಹೈಕೊರ್ಟ್ ತೀರ್ಿನಂತೆ ಕಾರ್ಯಕರ್ತೆ, ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂ ಮಾಡಬೇಕು. 2018ರಿಂದ ಕೇಂದ್ರ ಸರಕಾರ ಯಾವುದೇ ಗೌರವಧನ ಹೆಚ್ಚಳ ಮಾಡದೇ ಇರುವುದರಿಂದ ಕೂಡಲೇ 26,000ರೂ.ಗಳಿಗೆ ಗೌರವಧನ ಹೆಚ್ಚಿಸಬೇಕು. 2023ರ ವಿಧಾನಸಭಾ ಚುನಾವಣೆ ಸಂದರ್ಭ ಘೋಷಿಸಿದಂತೆ 15 ಸಾವಿರ ರೂ.ಗಳಿಗೆ ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.ನಿವೃತ್ತಿಯಾದವರಿಗೆ ಇಡಿಗಂಟು ಅಥವಾ ಎನ್ಪಿಎಸ್ ಹಣವನ್ನು ಹಾಗೂ 10 ಸಾವಿರ ಮಾಸಿಕ ಪಿಂಚಣಿಯನ್ನು ನೀಡಬೇಕು. ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್ಕೆಜಿ ಯುಕೆಜಿ ಪ್ರಾರಂಭಿಸಬೇಕು. ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು. ಅಂಗನ ವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿಯಾಗಬೇಕು ಎಂದು ಧರಣಿನಿರತರು ಸರಕಾರವನ್ನುಆಗ್ರಹಿಸಿದರು.
ಸಿಐಟಿಯು ಸಂಘಟನೆ ಯಮುನಾ, ಲಲಿತಾ ಹೆಗಡೆ, ಗೀತಾ ನಾಯ್ಕ, ವಿದ್ಯಾ ವೈದ್ಯ ಮುಂತಾದವರು ಇದ್ದರು.