ಜಾನುವಾರು ಸಂರಕ್ಷಣಾ ಕಾಯಿದೆ ಉಲ್ಲಂಘಿಸಿದ್ದಲ್ಲಿ ಕಠಿಣ ಶಿಕ್ಷೆ : ಪ್ರಭು ಚೌವ್ಹಾಣ್

ಪಶು ಸಂಗೋಪನಾ ಸಚಿವ

ಜಾನುವಾರು ಸಂರಕ್ಷಣಾ ಕಾಯಿದೆ  ಉಲ್ಲಂಘಿಸಿದ್ದಲ್ಲಿ ಕಠಿಣ ಶಿಕ್ಷೆ : ಪ್ರಭು ಚೌವ್ಹಾಣ್


ಕಾರವಾರ ಜ. 18 : ಜಾನುವಾರು ಹತ್ಯೆ ಪ್ರತಿಭಂದಕ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ ೨೦೨೦ ಇಂದಿನಿಂದ ಜಾರಿಗೆ ಬರುತ್ತಿದ್ದು ಕಾಯ್ದೆಯನ್ನು ಉಲ್ಲಂಘಿಸಿದವರಿಗೆ ಶಿಕ್ಷೆಯ ಹಾಗೂ ದಂಡದ ಪ್ರಮಾಣದಲ್ಲಿ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕೆಂದು ಪಶು ಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌವ್ಹಾಣ್ ತಿಳಿಸಿದರು. 

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಗೋಹತ್ಯೆ ನಿಷೇದ ಕಾಯ್ದೆ ಅನುಷ್ಠಾನ ಕುರಿತು ಜಿಲ್ಲಾಧಿಕಾರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಈ ಕಾಯ್ದೆಯ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಗ್ರಾಮಸಭೆ ಸೇರಿದಂತೆ ಜಿಲ್ಲೆಯ ಎಲ್ಲ ಕಡೆಗಳಲ್ಲಿ ಸಭೆ ಕೈಗೊಳ್ಳಬೇಕು ಯಾವುದೇ ಕಾರಣಕ್ಕೂ ಕೂಡಾ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಕಾಯ್ದೆಯನ್ನು ಉಲ್ಲಂಘಿಸಿದವರಿಗೆ ಶಿಕ್ಷೆಯ ಪ್ರಮಾಣವನ್ನು ೩ ವರ್ಷದಿಂದ ೬ ವರ್ಷದವರೆಗೆ ಮತ್ತು ಮೋದನೆ ಸಾರಿಗೆ ೫೦,೦೦೦ ರಿಂದ ೫ ಲಕ್ಷದವರೆಗೆ, ಎರಡನೇ ಸಾರಿ ಮಾಡಿದರೆ ೧೦ಲಕ್ಷದವರೆಗೆ ದಂಡ ವಿಧಿಸಬೇಕೆಂದು ತಿಳಿಸಿದರು. 

 ಯಾವುದೇ ಗೋವುಗಳು ಖಸಾಯಿ ಖಾನೆಗೆ ಹೊಗಬಾರದು. ಪಶು ವೈದ್ಯಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಿಡಿಒ ಗಳು ರೈತರಲ್ಲಿ ಗೋ ಹತ್ಯೆಯ ಶಿಕ್ಷೆಯ ಬಗ್ಗೆ  ಜಾಗೃತಿ ಮೂಡಿಸಬೇಕು. ಕಾಯಿದೆಯಲ್ಲಿ  ಜಾನುವಾರು ಎಂದರೆ ಹಸು ಕರು, ಎತ್ತು, ಹೋರಿಗಳು ಹಾಗೂ ೧೩ ವರ್ಷದೊಳಗಿನ ಎಮ್ಮೆ ಮತ್ತು ಕೋಣಗಳು ಆಗಿವೆ. ಇಂತಹ.  ಜಾನುವರುಗಳ ಸಾಗಾಣಿಕೆ ಮೇಲೆ ನಿರ್ಭಂಧವಿರುವದರಿಂದ  ಕೃಷಿ ಮತ್ತು ಪಶುಪಾಲನಾ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿ ಅನುಮತಿ ನೀಡುವ ವ್ಯವಸ್ಥೆ ಮಾಡಬೇಕು.  ಅವುಗಳನ್ನು  ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಗಾಣಿಕೆ ಮಾಡಬೇಕಾಗಿ ಬಂದಲ್ಲಿ ಪಶು ವೈಧ್ಯರ ಪ್ರಮಾಣ ಪತ್ರ ಮತ್ತು ಮಾಲಿಕತ್ವದ ಹಾಗೂ ಎನಿಮಲ್ ಟ್ಯಾಗ್ ಹೊಂದಿರುವಂತೆ ನೊಡಿಕೊಳ್ಳಬೇಕು. ಅಲ್ಲದೇ ವಾಹನದಲ್ಲಿ ೫ ರಿಂದ ೬ ಜಾನುವಾರುಗಳಿಗೆ ಮಾತ್ರ ಸಾಗಾಣಿಕೆಗೆ ಅವಕಾಶ ನೀಡಬೇಕು ಮತ್ತು ಅಗತ್ಯ ಆಹಾರ ಮತ್ತು ನಿರು ವಾಹನದಲ್ಲಿ ಇರುವಂತೆ ಸೂಚಿಸಬೇಕು.  ಗರ್ಭಧಾರಿತ ಜಾನುವರುಗಳಿಗೆ ಸಾಗಣಿಕೆ ಮಾಡಲು ಅವಕಾಶ ನಿಡಬಾರದು ಮತ್ತು ರಾತ್ರಿ ೮ ರಿಂದ ಬೆಳಗ್ಗೆ ೬ ವರೆಗಿನ ಅವಧಿಯಲ್ಲಿ ಕೂಡ ಸಾಗಾಣಿಕೆ ಅವಕಾಶ ನಿಡಬಾರದೆಂದರು.   

  ಜಿಲ್ಲೆಯಲ್ಲಿ ಈಗಾಗಲೇ ಕೆಲವು ಗೊ ಶಾಲೆಗಳಿದ್ದು ಅಲ್ಲಿರುವ ಗೋವುಗಳಿಗೆ ಮೇವು ಹಾಗೂ ಅಗತ್ಯ ಸೌಕರ್ಯಗಳನ್ನು ಅಧಿಕಾರಿಗಳು ಒದಗಿಸಬೇಕು. ಮುಂದಿನ ದಿನಗಳಲ್ಲಿ ಪ್ರತಿ ತಾಲೂಕಿಗೆ ಎರಡರಂತೆ ಗೋ ಶಾಲೆ ಸ್ಥಾಪನೆಗೆ ಚಿಂತನೆ ನಡೆದಿದೆ. ಇದು ಗೋ ಹತ್ಯೆ ನಿಷೇದ ಕಾಯಿದೆ ಪರಿಣಾಮಕಾರಿಯಾಗಿ ಜಾರಿಯಾಗಲು ಸಹಕಾರಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾದಿಕಾರಿ ಡಾ. ಹರೀಶ ಕುಮಾರ ಕೆ., ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಶಿವಪ್ರಕಾಶ ದೇವರಾಜು, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್. ಕೆ., ಎಸಿ ವಿದ್ಯಾಶ್ರಿ ಚಂದರಗಿ ಹಾಗೂ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಹಾಜರಿದ್ದರು.