ಯುಗಾದಿ ಪಾಡ್ಯದಂದು ವಿಜೃಂಭಣೆಯಿಂದ ಆಂಜನೇಯ್ಯಸ್ವಾಮಿ ಮಹಾರಥೋತ್ಸವ
Anjaneya Swamy Maharathotsava celebrated with great pomp and show on Ugadi Padya
ಲೋಕದರ್ಶನ ವರದಿ
ಕಂಪ್ಲಿ 20: ತಾಲೂಕಿನ ದೇವಲಾಪುರ ಗ್ರಾಮದ ಸಾವಿರಾರು ಭಕ್ತರ ಆರಾಧ್ಯ ದೈವ ಶ್ರೀ ಆಂಜನೇಯ್ಯಸ್ವಾಮಿ ಮಹಾರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಯುಗಾದಿ ಪಾಡ್ಯದ ದಿನವಾದ ಗುರುವಾರ ಸಂಜೆ ಜರುಗಿತು. ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ ಬಳಿಯಿಂದ ಆರಂಭಗೊಂಡ ರಥೋತ್ಸವ ಗ್ರಾಮದ ಪ್ರಮುಖ ರಸ್ತೆಗಳ ಮುಖಾಂತರ ಎದುರು ಬಸವಣ್ಣವರೆಗೆ ಸಂಚರಿಸಿ ಪುನಃ ದೇವಸ್ಥಾನ ಬಳಿ ಬಂದು ಸಂಪನ್ನಗೊಂಡಿತು. ರಥೋತ್ಸವಕ್ಕೆ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಬಾಳೆಹಣ್ಣು, ಉತ್ತುತ್ತಿ, ಬಿಲ್ವಪತ್ರೆ ಎಸೆಯುವ ಮೂಲಕ ಭಕ್ತಿ ಮೆರೆದರು.
ಈ ಮೆರವಣಿಗೆಯಲ್ಲಿ ಸುಮಂಗಲಿಯರ ಕಳಸ, ತಾಷಾರಾಂಡೋಲ್, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾಪ್ರಕಾರಗಳು ಪಾಲ್ಗೊಂಡಿದ್ದವು. ರಥೋತ್ಸವ ಹಿನ್ನೆಲೆ ಗ್ರಾಮ ಹಾಗೂ ಸುತ್ತಮುತ್ತಲಿನ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಕಾಯಿ ಕರ್ೂರ ಅರ್ಿಸಿ ಭಕ್ತಿ ಮೆರೆದರು. ಈ ರಥೋತ್ಸವದಲ್ಲಿ ಆಂಜನೇಯ್ಯ ದೇವಸ್ಥಾನದ ಆಡಳಿತ ಮಂಡಳಿಯ ಸರ್ವ ಸದಸ್ಯರು, ಸಕಲ ಭಕ್ತರು ಪಾಲ್ಗೊಂಡಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 