ಹುಬ್ಬಳ್ಳಿ 14: "ನನ್ನ ಸಕರ್ಾರದ ಯೋಜನೆಗಳು ಜನಪ್ರಿಯವಾಗಿಲ್ಲದಿದ್ದರೆ ಅಧಿಕಾರದಲ್ಲಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಪಶುಭಾಗ್ಯ, ಕೃಷಿ ಭಾಗ್ಯ ಯೋಜನೆಯನ್ನು ಸಕರ್ಾರ ನಿಲ್ಲಿಸಲಿ" ಎಂದು ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಮೈತ್ರಿ ಸಕರ್ಾರಕ್ಕೆ ಒಂದು ವರ್ಷ ಅವಧಿ ಪೂರ್ಣಗೊಳ್ಳುತ್ತಿರುವ ಸಮಯದಲ್ಲೇ ಉನ್ನತ ನಾಯಕರ ನಡುವೆ ಆರೋಪ, ಪ್ರತ್ಯಾರೋಪ ತಾರಕಕ್ಕೆ ಮುಟ್ಟುತ್ತಿದ್ದು ಸಕರ್ಾರದ ಭವಿಷ್ಯ ಡೋಲಾಯಮಾನ ಎನ್ನುವ ಸ್ಥಿತಿಗೆ ಮುಟ್ಟಿದೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಆಶೀವರ್ಾದ ಮಾಡಿದರೆ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದೇನೆ. ಇದರಲ್ಲಿ ಏನು ತಪ್ಪಿದೆ? ಯಾರೇ ಆದರೂ ಜನರ ಅಶೀರ್ವಾದ ಇಲ್ಲದೇ ಪದವಿಗೇರಲು ಸಾಧ್ಯವೇ? ನನ್ನ ಮೇಲಿನ ಅಭಿಮಾನದಿಂದ ಕೆಲವರು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಹೇಳುತ್ತಿ ದ್ದಾರೆ. ಜನರ ಬಾಯಿ ಮುಚ್ಚಿಸಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಯಾಗಬೇಕು ಎಂದು ಹಗಲು ಗನಸು ಕಾಣುತ್ತಿದ್ದಾರೆ. ಮೂರು ದಿನ ಮುಖ್ಯಮಂತ್ರಿಯಾಗಿದ್ದರೂ, ಸಿಕ್ಕಿದ ಅವಕಾಶವನ್ನು ಸದುಪಯೋಗ ಮಾಡಿಕೊ ಳ್ಳುವಲ್ಲಿ ವಿಫಲರಾದ ಅವರ ಆಸೆ ಎಂದಿಗೂ ಕೈಗೂಡುವುದಿಲ್ಲ ಎಂದರು.ಚಿಂಚೋಳಿ ಮತ್ತು ಕುಂದಗೋಳ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯಥರ್ಿಗಳು ಜಯ ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.