ಆಕ್ಸಫರ್ಡ ಶಾಲೆಯ ವಾರ್ಷಿಕೋತ್ಸವ

ಗೋಕಾಕ: ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಅವರಲ್ಲಿ ಮಾನವೀಯ ಮೌಲ್ಯಗಳನ್ನು ಬೆಳಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಪಾಲಕರ ಮೇಲಿದೆ ಎಂದು ಜಾನಪದ ತಜ್ಞ ಡಾ. ಸಿ ಕೆ ನಾವಲಗಿ ಹೇಳಿದರು. ಶುಕ್ರವಾರದಂದು ನಗರದ ಆಕ್ಸಫರ್ಡ ಶಾಲೆಯ ವಾಷರ್ಿಕೋತ್ಸವ ಸಮಾರಂಭದಲ್ಲಿ ಮುಖ್ಯತಿಥಿಗಳಾಗಿ ಮಾತನಾಡುತ್ತಿದ್ದರು. ಮಕ್ಕಳನ್ನು ಹಣಗಳಿಸುವ ಯಂತ್ರಗಳನ್ನಾಗಿಸದೆ ಅವರಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಪಾಲಕರು ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕು. ಅವರಲ್ಲಿಯ ಪ್ರತಿಭೆಯನ್ನು ಗುರುತಿಸಿ ಅದನ್ನು ಪ್ರೋತ್ಸಾಹಿಸಿ ಅವರ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸುವಂತೆ ಕರೆ ನೀಡಿದರು. ಸಮಾರಂಭವನ್ನು ಯುವ ಧುರೀಣ ಅಮರನಾಥ ಜಾರಕಿಹೊಳಿ ಉದ್ಘಾಟಿಸಿದರು.