ಬಜೆಟ್ನಲ್ಲಿ ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆ ಮತ್ತು ಹಣಕಾಸು ಮೀಸಲು ಬೇಡಿಕೆ
Announcement of a government medical college for Vijayapura in the budget and demand for financial r
ವಿಜಯಪುರ 14 : ಜಿಲ್ಲೆಯ ಜನತೆಯ ದೀರ್ಘಕಾಲದ ಬೇಡಿಕೆಯಾದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಡುತ್ತಿರುವ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯ ನಿಯೋಗವು ಇಂದು ಹಾವೇರಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದೆ.ನಿಯೋಗದಲ್ಲಿ ಹೋರಾಟ ಸಮಿತಿಯ ಸದಸ್ಯರು ಮನವಿ ಪತ್ರದ ಮೂಲಕ ಸಮಿತಿಯು ಈ ಕೆಳಗಿನ ಮುಖ್ಯ ಬೇಡಿಕೆಗಳನ್ನು ಇಟ್ಟಿದೆ:- ಮುಂಬರುವ ರಾಜ್ಯ ಬಜೆಟ್ ಮಂಡನೆಯ ಸಂದರ್ಭದಲ್ಲಿ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಬರುವ ಬಜೆಟ್ ನಲ್ಲಿ ಅಧಿಕೃತ ಘೋಷಣೆ ಮಾಡಬೇಕು.- ಈ ಕಾಲೇಜಿನ ಸ್ಥಾಪನೆಗೆ ಅಗತ್ಯವಾದ ಹಣಕಾಸು ನಿಧಿಯನ್ನು ಬಜೆಟ್ನಲ್ಲಿ ಮೀಸಲಿಡಬೇಕು.
ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದಿರುವುದರಿಂದ ಸ್ಥಳೀಯ ಜನತೆಗೆ ಉನ್ನತ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ದೊರೆಯುತ್ತಿಲ್ಲ. ಈ ಹೋರಾಟವು ಜಿಲ್ಲೆಯ ಶಿಕ್ಷಣ ಮತ್ತು ಆರೋಗ್ಯ ಹಕ್ಕಿನ ಬಗ್ಗೆಯಾಗಿದ್ದು, ದೀರ್ಘಕಾಲದಿಂದ ನಡೆಯುತ್ತಿರುವ ಜನರ ಆಕಾಂಕ್ಷೆಯನ್ನು ಪ್ರತಿಬಿಂಬಿಸುತ್ತದೆ.ಮಾನ್ಯ ಮುಖ್ಯಮಂತ್ರಿಗಳು ಈ ಬೇಡಿಕೆಯನ್ನು ಪರಿಗಣಿಸಿ, ಬಜೆಟ್ನಲ್ಲಿ ಸಕಾರಾತ್ಮಕ ಘೋಷಣೆ ಮಾಡುವರೆಂದು ಹೋರಾಟ ಸಮಿತಿ ಭರವಸೆ ವ್ಯಕ್ತಪಡಿಸಿದೆ. ಇದರಿಂದ ಉತ್ತರ ಕರ್ನಾಟಕದ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೊಸ ಆಯಾಮ ಸಿಗಲಿದೆ.ನಿಯೋಗದಲ್ಲಿ ಹಿರಿಯ ಹೋರಾಟಗಾರರಾದ ಭಗವಾನ್ ರೆಡ್ಡಿ, ಅರವಿಂದ್ ಕುಲಕರ್ಣಿ, ಲಲಿತಾ ಬಿಜ್ಜರಗಿ, ಅಕ್ರಮ ಮಾಶಾಲ್ಕರ್, ಮಲ್ಲಿಕಾರ್ಜುನ್ ಎಚ್.ಟಿ, ಸುರೇಶ್ ಜೇಬಿ, ಭೋಗೇಶ್ ಸೋಲಾಪುರ್, ಸಿದ್ದರಾಮ್ ಹಳ್ಳೂರ ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 