ಕೃಷ್ಣ ಮೇಲ್ದಂಡೆ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ಘೋಷಣೆ: ಅಭಿನಂದನೆ
Announcement of adequate compensation for the victims of the upper Krishna: Congratulations
ವಿಜಯಪುರ 23: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಸಂತ್ರಸ್ತರಿಗೆ ಸರಕಾರ ಒಪ್ಪಿಗೆ ಸೂತ್ರದಡಿ ಸಮರ್ಕ ಪರಿಹಾರ ಘೋಷಣೆ ಮಾಡಿದ್ದು, ಇದರಿಂದ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸಿ ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತೀತರ ಜಿಲ್ಲೆಗಳ ಬಾಕಿ ಭೂಮಿಗೆ ನೀರಾವರಿ ಕಲ್ಪಿಸಲು ಅನುಕೂಲವಾಗಲಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಸೋಮವಾರ ಮುಸ್ಸಂಜೆ ಬಬಲೇಶ್ವರ ತಾಲೂಕಿನ ದೇವರ ಗಣ್ಣೂರಿನಲ್ಲಿ ಕೃಷ್ಣ ಮೇಲ್ದಂಡೆ ಹಂತ-3ರ ಯೋಜನಾ ಸಂತ್ರಸ್ತರಿಗೆ ಯೋಗ್ಯ ದರ ನಿಗದಿ ಪಡಿಸಿದ ಅಂಗವಾಗಿ ಯೋಜನಾ ಸಂತ್ರಸ್ತರು ಏರಿ್ಡಸಿದ್ದ ಅಭಿನಂದನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹಿಂದೆ ಬೊಮ್ಮಾಯಿ ನೇತೃತ್ವದ ಸರಕಾರ ಅಧಿಕಾರದಲ್ಲಿದ್ದಾಗ ಭೂಸ್ವಾಧೀನದಡಿ ಭೂಮಿ ಕಳೆದುಕೊಳ್ಳುವ ರೈತರಿಗೆ ಹಕ್ಕಿನಂತೆ ಸಿಗಬೇಕಾದ ಪರಿಹಾರವನ್ನು ಕನ್ಸೆಂಟ್(ಒಪ್ಪಿಗೆ) ಅನ್ವಯ ನೀಡುವುದಾಗಿ ರೈತರನ್ನು ದಾರಿ ತಪ್ಪಿಸಲಾಗಿತ್ತು. ಆದರೇ, ಅಂದೇ ನಾನು ರೈತರಿಗೆ ಹಕ್ಕಿನಂತೆ ದೊರೆಯುವ ಪರಿಹಾರ ಮತ್ತು ಒಪ್ಪಂದದಂತೆ ಸಿಗುವ ಪರಿಹಾರದ ಮೊತ್ತದ ನಡುವಿನ ವ್ಯತ್ಯಾಸವನ್ನು ಬಿಡಿಸಿ ಹೇಳಿದ್ದೆ. ಅಲ್ಲದೇ, ಬೊಮ್ಮಾಯಿ ಸಮ್ಮುಖದಲ್ಲಿಯೇ ವೇದಿಕೆಯ ಮೇಲೆ ರೈತರು ಈ ಸೂತ್ರವನ್ನು ಒಪ್ಪಬೇಡಿ. ಮುಂದಿನ ಬಾರಿ ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಈ ಅನ್ಯಾಯ ಸರಿಪಡಿಸುವುದಾಗಿ ನಾನು ಭರವಸೆ ನೀಡಿದ್ದೆ. ಇಂದು ನುಡಿದಂತೆ ನಡೆಯುತ್ತಿದ್ದೇವೆ. ಈಗ ಒಪ್ಪಂದದಂತೆ ಪರಿಹಾರ ನೀಡುತ್ತಿದ್ದೇವೆ ಎಂದು ಅವರು ಹೇಳಿದರು.
ಈ ಯೋಜನೆಗೆ ಒಟ್ಟು ರೂ. 2 ಲಕ್ಷ ಕೋ. ಹಣ ಬೇಕು ಎಂದು ಕೆಲವರು ಬಿಂಬಿಸಿದ್ದರು. ಆದರೆ, ನಾನು ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ಎಳೆಎಳೆಯಾಗಿ ಹೇಳಿದ್ದೆ. ಇದನ್ನು ಮುಂದೆ ಹಾಕಿದರೆ ಭವಿಷ್ಯದಲ್ಲಿ ಈ ಯೋಜನೆ ಮತ್ತೆ ನನೆಗುದಿಗೆ ಬೀಳಲಿದೆ ಎಂದು ಸಿಎಂ ಮತ್ತು ಡಿಸಿಎಂ ಅವರಿಗೆ ಇತ್ತೀಚೆಗೆ ಮನವರಿಕೆ ಮಾಡಿದ್ದೆ. ಇದನ್ನು ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳ ಸಚಿವರೂ ಬೆಂಬಲಿಸಿದ್ದರು. ಈಗ ಮೂರು ಹಂತಗಳಲ್ಲಿ ಪ್ರತಿ ಎಕರೆ ನೀರಾವರಿ ಜಮೀನಿಗ ರೂ. 40 ಲಕ್ಷ ಮತ್ತು ಒಣಬೇಸಾಯ ಜಮೀನಿಗೆ ರೂ. 30 ಲಕ್ಷ ದರ ಪರಿಹಾರ ನಿಗದಿ ಪಡಿಸಲಾಗಿದೆ. ಈ ಯೋಜನೆ ಒಂದು ಹಂತಕ್ಕೆ ಬಂದಿದ್ದು, ಎಲ್ಲ ರೈತರೂ ಇದಕ್ಕೆ ಸಂಪೂರ್ಣ ಬೆಂಬಲ ನೀಡಬೇಕು. ಇದೊಂದು ಐತಿಹಾಸಿಕ ನಿರ್ಣಯವಾಗಿದೆ ಎಂದು ಅವರು ಹೇಳಿದರು.
ರೈತರು ಮಾಡುವ ತ್ಯಾಗದಿಂದ ಆಲಮಟ್ಟಿ ಜಲಾಶಯದ ಎತ್ತರವನ್ನು 519.60 ಮೀ. ನಿಂದ 524.256 ಮೀ. ಹೆಚ್ಚಿಸಲು ಸಾಧ್ಯವಾಗಲಿದೆ. ಜಿಲ್ಲೆಯ ಬಾಕಿ ಜಮೀನಿಗೆ ನೀರಾವರಿ ಸೌಲಭ್ಯ ಸಿಗಲಿದೆ. ರೈತರಿಗೆ ಕನ್ಸೆಂಟ್(ಒಪ್ಪಿಗೆ) ಸೂತ್ರದಡಿ ಸೂಕ್ತ ಪರಿಹಾರ ನೀಡಲು ಸಿಎಂ ಮತ್ತು ಡಿಸಿಎ? ನೇತೃತ್ವದಲ್ಲಿ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ ಸಚಿವರು ತಾವು ಜಲಸಂಪನ್ಮೂಲ ಸಚಿವರಾಗಿದ್ದಾಗ ಈ ಭಾಗದಲ್ಲಿ ಕೈಗೊಂಡ ನೀರಾವರಿ ಯೋಜನೆಗಳಿಗೆ ಎದುರಾದ ಅಡ್ಡಿ, ಆತಂಕಗಳು, ಅವುಗಳನ್ನು ಸಮರ್ಥವಾಗಿ ಎದುರಿಸಿದ ಘಟನೆಗಳನ್ನೆ ಎಳೆಎಳೆಯಾಗಿ ವಿವರಿಸಿದರು.
ನಂದಿ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಕಳುಹಿಸಲಾಗಿದ್ದ ಪ್ರಸ್ತಾವನೆಯನ್ನು ಎನ್.ಸಿ.ಡಿ.ಸಿಯಿಂದ ಮತ್ತೆ ರಾಜ್ಯಕ್ಕೆ ವಾಪಸ್ ಕಳುಹಿಸಿದೆ. ಈ ಕಾರ್ಖಾನೆ ಈ ಭಾಗದ ರೈತರಿಗೆ ಅಸ್ಮಿತೆಯಾಗಿದ್ದು, ರೈತರಿಗೆ ನೆರವಾಗಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇವೆ. ಕಾರ್ಖಾನೆಯ ಉಳಿವಿಗೆ ಎಲ್ಲರೂ ಕೈಜೋಡಿಸಿ ಉಳಿಸೋಣ ಎಂದು ಅವರು ಹೇಳಿದರು. ಯೋಜನಾ ಸಂತ್ರಸ್ತ ನಾನಾ ಗ್ರಾಮಗಳ ರೈತರು ಸಚಿವ ಎಂ. ಬಿ. ಪಾಟೀಲ ಅವರನ್ನು ಸನ್ಮಾನಿಸಿ ಗೌರವಿಸಿದರು.
ಮುಖಂಡರಾದ ಬಬಲಾದಿಯ ಅಪ್ಪಯ್ಯ ಹಿರೇಮಠ, ಅದೃಷ್ಯಪ್ಪ ವಾಸಣ್ಣ ದೇಸಾಯಿ, ವಿ. ವಿ. ಅರಕೇರಿ, ಕುಮಾರ ದೇಸಾಯಿ, ಬಸವರಾಜ ದೇಸಾಯಿ, ಡಾ. ಕೆ. ಎಚ್. ಮುಂಬಾತಡ್ಡಿ, ಉಮೇಶ ಮಲ್ಲಣ್ಣವರ, ಬಿ. ಡಿ. ಪಾಟೀಲ, ಎಚ್. ಬಿ. ಹರನಟ್ಟಿ, ರಮೇಶ ಯರಗಟ್ಟಿ, ಶಂಕರಗೌಡ ಪಾಟೀಲ, ಲಕ್ಷ್ಮಣ ಚಿಕದಾನಿ, ಕೆ. ಪಿ. ಶಿರಬೂರ, ಅಪ್ಪುಗೌಡ ಪಾಟೀಲ ಶೇಗುಣಸಿ, ವಿಠ್ಠಲ ಶೇಬಾನಿ, ಶಂಕ್ರೆಪ್ಪ ಜನವಾಡ, ದುಂಡಪ್ಪ ಹಂಗರಗಿ, ಸುಬ್ಬನಗೌಡ ಪಾಟೀಲ, ಭೀಮನಗೌಡ ಪಾಟೀಲ, ಪ್ರಶಾಂತ ದೇಸಾಯಿ, ವಾಸು ಗಿರೆವ್ವಗೋಳ, ರವಿ ಬಿರಾದಾರ, ಅಶೋಕ ಕಬಾಡೆ, ನಾಗಪ್ಪ ದೇಸಾಯಿ, ರಾಮಸ್ವಾಮಿ ವಾಲಿಕಾರ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 