ಪ್ರಧಾನಿ ಸಲಹೆಯಂತೆ ಉಚಿತ ವಿದ್ಯುತ್ ಘೋಷಣೆ: ನಿತೀಶ್ ಕುಮಾರ್
Announcement of free electricity as suggested by PM: Nitish Kumar
ಬಿಹಾರ 18: ಪ್ರಧಾನಿ ನರೇಂದ್ರ ಮೋದಿಯವರ ಸಲಹೆಯಂತೆ ರಾಜ್ಯದಲ್ಲಿ ತಿಂಗಳಿಗೆ 125 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರ ಹೇಳಿದ್ದಾರೆ.
ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿ ಪಟ್ಟಣದಲ್ಲಿ ನಡೆದ ರ್ಯಾಲಿಯಲ್ಲಿ ಜೆಡಿಯು ಮುಖ್ಯಸ್ಥರು ಈ ಹೇಳಿಕೆ ನೀಡಿದರು. ಅಲ್ಲಿ ಅವರು ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಆ ವೇಳೆ 7,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದರು.
ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದ ಎಲ್ಲ ಗೃಹಬಳಕೆದಾರರಿಗೆ ಆಗಸ್ಟ್ 1 ರಿಂದ ತಿಂಗಳಿಗೆ 125 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಗುರುವಾರ ನಿತೀಶ್ ಕುಮಾರ್ ಘೋಷಿಸಿದ್ದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಸತತ ಐದನೇ ಅವಧಿಗೆ ಅಧಿಕಾರ ವಹಿಸಿಕೊಳ್ಳಲು ಮೋದಿ ಅವರ ವರ್ಚಸ್ಸನ್ನು ಅವಲಂಬಿಸಿರುವ ನಿತೀಶ್ ಕುಮಾರ್, 'ನಾವು ಅವರನ್ನು ತುಂಬಾ ಗೌರವಿಸುತ್ತೇವೆ ಮತ್ತು ಅವರ ಸಲಹೆಗೆ ಅನುಗುಣವಾಗಿ ನಾವು ಕೆಲಸ ಮಾಡುತ್ತಿದ್ದೇವೆ' ಎಂದು ಹೇಳಿದರು.
ಉಚಿತ ಕೊಡುಗೆಗಳನ್ನು ವಿರೋಧಿಸುವುದಾಗಿ ಎನ್‌ಡಿಎ ಹೇಳಿಕೊಂಡಿದ್ದರೂ, ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ '200 ಯೂನಿಟ್ಸ್ ಉಚಿತ ವಿದ್ಯುತ್' ಘೋಷಣೆಗೆ ಸೆಡ್ಡು ಹೊಡೆಯಲು ಈ ಕ್ರಮವನ್ನು ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 