ಒಳಮೀಸಲಾತಿ ಘೋಷಣೆ ಸರ್ಕಾರದ ಐತಿಹಾಸಿಕ ನಿರ್ಧಾರ: ಸಚಿವ ಸತೀಶ್ ಜಾರಕಿಹೊಳಿ
Announcement of internal reservation is a historic decision of the government: Minister Satish Jarki
ಬೆಳಗಾವಿ 26: ದಶಕಗಳ ಕಾಲದ ಬೇಡಿಕೆಯಾಗಿದ್ದ ಒಳಮೀಸಲಾತಿಯನ್ನು ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಘೋಷಿಸಿದ್ದು ಇದೊಂದು ಐತಿಹಾಸಿಕ ನಿರ್ಧಾರ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರ, ಸಮುದಾಯದ ಸಚಿವರ ಸಮ್ಮುಖದಲ್ಲಿಯೇ ಒಳ ಮೀಸಲಾತಿಯನ್ನು ಘೋಷಿಸಿದ್ದೇವೆ.
ಎಲ್ಲಾ ಸಮುದಾಯದವರು ಖುಷಿ ಇದ್ದಾರೆ. ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಸರ್ವಾನುಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.ಒಳಮೀಸಲಾತಿ ಹಂಚಿಕೆ ಬಗ್ಗೆ ಬಿಜೆಪಿಯವರು ವಿರೋಧಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ವಿರೋಧ ಪಕ್ಷಗಳು ಸರ್ಕಾರದ ಪ್ರತಿಯೊಂದು ನಿರ್ಧಾರದಲ್ಲೂ ಲೋಪದೋಷ ಹುಡುಕುವುದು ಸಹಜ. ಆದರೆ, ಜನಹಿತಕ್ಕಾಗಿ ತೆಗೆದುಕೊಂಡ ಈ ’ಐತಿಹಾಸಿಕ’ ನಿರ್ಧಾರಕ್ಕೆ ಜನರ ಬೆಂಬಲವಿದೆ ಎಂಬುದು ಸರ್ಕಾರದ ನಿಲುವು.
ಆದರೆ ವಿರೋಧ ಪಕ್ಷದವರು ತಮ್ಮ ಅಸ್ತಿತ್ವಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಾರೆಂದು ತಿರುಗೇಟು ನೀಡಿದರು.ಕಾಂಗ್ರೆಸ್ ಪಕ್ಷದ ಒಳಗಿನ ನಾಯಕತ್ವ ಗೊಂದಲ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ಸತೀಶ್ ಜಾರಕಿಹೊಳಿ, ಪಕ್ಷದ ಒಳಗಿನ ಗೊಂದಲಗಳಿಗೆ ಹೈಕಮಾಂಡ್ ಶೀಘ್ರದಲ್ಲೇ ತೆರೆ ಎಳೆಯಲಿದೆ. ಹೈಕಮಾಂಡ್ ಈಗಾಗಲೇ ಒಂದು ತೀರ್ಮಾನಕ್ಕೆ ಬಂದಿದ್ದು, ಸೂಕ್ತ ಸಮಯದಲ್ಲಿ ಅದನ್ನು ಜಾರಿಗೊಳಿಸಲಿದೆ ಎಂದು ಅವರು ಹೇಳಿದ್ದಾರೆ.
ಡಿಕೆಶಿ ದೆಹಲಿಗೆ ಹೋಗುವುದು ಹೊಸದಲ್ಲ: ಡಿ.ಕೆ. ಶಿವಕುಮಾರ್ ಅವರು ಎರಡು ಪ್ರಮುಖ ಖಾತೆಗಳನ್ನು ಹೊಂದಿದ್ದಾರೆ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿದ್ದಾರೆ. ರಾಜ್ಯದ ಅಭಿವೃದ್ಧಿ ಕೆಲಸಗಳು, ಕೇಂದ್ರ ಸಚಿವರ ಭೇಟಿಗಾಗಿ ದೆಹಲಿಗೆ ಹೋಗುವುದು ಸಹಜ. ದೆಹಲಿ ಭೇಟಿಯನ್ನೇ ನಾಯಕತ್ವ ಬದಲಾವಣೆಯ ಸೂಚನೆ ಎಂದು ಅರ್ಥೈಸುವುದು ಸರಿಯಲ್ಲ. ಪ್ರತಿ ಭೇಟಿಗೂ ರಾಜಕೀಯ ಉದ್ದೇಶ ಕಲ್ಪಿಸಬಾರದು ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 