ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭ
Annual Friendship Conference Ceremony
ರಾಯಬಾಗ, 10 : ವಿದ್ಯಾರ್ಥಿಗಳು ಯಾವದೇ ಒತ್ತಡಕ್ಕೆ ಒಳಗಾಗದೇ ಧೈರ್ಯ ಮತ್ತು ದಿಟ್ಟತನದಿಂದ ಪರೀಕ್ಷೆಯನ್ನು ಎದುರಿಸಿ ಯಶಸ್ವಿಯಾಗಬೇಕೆಂದು ಮೂಡಲಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಪ್ರೊ.ಎಸ್.ಎಮ್.ಐಹೊಳೆ ಕರೆ ನೀಡಿದರು.
ಮಂಗಳವಾರ ಪಟ್ಟಣದ ಶಿಕ್ಷಣ ಪ್ರಸಾರಕ ಮಂಡಳದ ಆನಂದಿಬಾಯಿ ಬಾಲಕಿಯರ ಪ್ರೌಢ ಮತ್ತು ಸಂಯುಕ್ತ ಪದವಿಪೂರ್ವ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾಧಕರು ನಮಗೆ ಆದರ್ಶವಾಗಬೇಕು, ಆಗ ಮಾತ್ರ ನಾವು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.
ನಮ್ಮ ಜೀವನದ ಶಿಲ್ಪಿಗಳು ನಾವೇ ಆಗಿದ್ದು, ನಮಗೆ ದೊರೆಯುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಸ್ಥಾನ ಪಡೆಯಬೇಕೆಂದರು. ಸಂಸ್ಥೆ ಕಾರ್ಯದರ್ಶಿ ಎಸ್.ಎಸ್.ಶಿಂಗಾಡಿ ಮಾತನಾಡಿ, ಅಂದು ಅಭಾಜಿಯವರು ಕಟ್ಟಿ ಬೆಳೆಸಿದ ಸಂಸ್ಥೆ ಹೆಮ್ಮರವಾಗಿ ಬೆಳೆದು ನಿಂತಿದೆ. ಅಂದು ಅಭಾಜಿ ಯವರು ಶಿಕ್ಷಣ ಸಂಸ್ಥೆ ಪ್ರಾರಂಭಿಸುವುದರ ಜೊತೆಗೆ, ಅಂದಿನ ದಲಿತ, ಬಡ ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಉಚಿತ ಪ್ರಸಾದ ನಿಲಯ ಪ್ರಾರಂಭಿಸಿದ್ದರಿಂದ, ಅನೇಕ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉನ್ನತ ಹುದ್ದೆ ಅಲಂಕರಿಸಿದ್ದಾರೆ ಎಂದು ಹೇಳಿದರು.ಅಧ್ಯಕ್ಷತೆಯನ್ನು ಮಾಜಿ ಸಂಸದ, ಸಂಸ್ಥೆ ಅಧ್ಯಕ್ಷ ಅಮರಸಿಂಹ ಪಾಟೀಲ ವಹಿಸಿದ್ದರು. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ,
ಸಾಂಸ್ಕೃತಿಕ ಮತ್ತು ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಬಿ.ಎಸ್.ಶಿಂಗೆ, ಆರ್.ಎಸ್.ಗುಡೋಡಗಿ, ಅಕ್ಷಯ ಬನಾಜ, ಎಸ್.ಎಸ್.ಕಾಂಬಳೆ, ಕೀರ್ತಿ ತೇಲಿ, ಸರಿತಾ ಪುಟಾಣಿ, ಸಂತೋಷ ಐಹೊಳೆ ಹಾಗೂ ವಿದ್ಯಾರ್ಥಿನಿಯರು ಸೇರಿ ಅನೇಕರು ಇದ್ದರು.ಬಿ.ಎಸ್.ಶಿಂಗೆ ಸ್ವಾಗತಿಸಿದರು, ಸುರೇಶ ಐಹೊಳೆ ನಿರೂಪಿಸಿ, ವಂದಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 