ಕಲ್ಲಹಳ್ಳಿ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ವಾರ್ಷಿಕ ಸಾಮಾನ್ಯ ಸಭೆ
Annual General Meeting of Kannada Sahitya Parishad in Kallahalli village
ಜಮಖಂಡಿ 22: ತಾಲೂಕಿನ ಕಲ್ಲಹಳ್ಳಿ ಗ್ರಾಮದ ಸತ್ಯಕಾಮರ ಸುಮ್ಮನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ವಾರ್ಷಿಕ ಸಾಮಾನ್ಯ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ,ಮಹೇಶ ಜೋಷಿ ಹೇಳಿದರು.
ನಗರದ ರಮಾನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರ ಭಿನ್ನಾಭಿಪ್ರಾಯದಿಂದ ಹಾಗೂ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿದ್ದರಿಂದ ಬಳ್ಳಾರಿ ಜೆಲ್ಲೆಯ ಸಂಡೂರಿನಲ್ಲಿ ನಡೆಯಬೇಕಿದ್ದ ಸಭೆಯನ್ನು ರದ್ದು ಮಾಡಲಾಗಿದೆ. ಸಂಡೂರಿನ ಸಭೆ ರದ್ದಾಗಲು ಕಸಾಪದ ಕೇಂದ್ರ ಸಮಿತಿಯಲ್ಲಿ 5 ವರ್ಷ ಕೆಲಸ ಮಾಡಿರುವ ವಸುಂಧರಾ ಭೂಪತಿಯವರು ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿರುವದು ವಿಷಾಧಕರ. ನಮ್ಮಲ್ಲಿ ಭಿನ್ನಾಭಿಪ್ರಾಯಗಳಿರಬಹುದು ಆದರೇ ವಯಕ್ತಿಕ ದ್ವೇಶ ಇಲ್ಲ. ವಾರ್ಷಿಕ ಸಾಮಾನ್ಯ ಸಭೆಗೆ ಲಕ್ಷಗಟ್ಟಲೇ ಜನರು ಬರುವದಿಲ್ಲ ಕೇವಲ 200 ರಿಂದ 300ರ ವರೆಗೆ ಜನ ಸೇರುತ್ತಾರೆ. ತಮ್ಮ ಅಧ್ಯಕ್ಷತೆಯಲ್ಲಿ ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ನಡೆದ ಅತಿ ಹೆಚ್ಚು ಅಂದರೆ 648 ಜನರು ಸೇರಿದ್ದರು ಎಂದರು.
ಕಸಾಪದ ಘನತೆ ಗೌರವಕ್ಕೆ ಧಕ್ಕೆ ತರುವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಎಸ್,ಟಿ,ಸಿದ್ಧರಾಮಯ್ಯ, ಜಯಪ್ರಕಾಶಗೌಡ, ನಾಗರಾಜ, ವೆಂಕಟರಮಣ, ನಿವೃತ್ತ ಅಧಿಕಾರಿ ಸಲೀಮ ಅವರ ವಿರುದ್ಧ ಮೊಕದ್ದಮೆ ದಾಖಲಿಸಿ ಕಾನೂನು ಹೋರಾಟ ನಡೆಸಲಾಗುತ್ತಿದೆ. ಯಾವುದೋ ವ್ಯಕ್ತಿಗಳ ಪ್ರಭಾವಕ್ಕೆ ಮಣಿದು, ಅಧಿಕಾರ ದುರುಪಯೋಗ ಪಡಿಸಿಕೊಂಡು ಕಸಾಪಕ್ಕೆ ಕಪ್ಪು ಚುಕ್ಕೆ ತರುವಂಥ ಕೆಲಸ ಮಾಡಿದ್ದಾರೆ. ಕಾರ್ಯಕಾರಿಣಿ ಸಭೆಯ ನಿರ್ಣಯದಂತೆ ಮೊಕದ್ದಮೆ ದಾಖಲಿಸಲಾಗಿದೆ. ಹಿಂದಿನ ಬಾಗಿಲಿನಿಂದ ಬಂದು ಕಸಾಪದ ಮೇಲೆ ಸವಾರಿ ಮಾಡಲು ಯತ್ನಿಸುತ್ತಿರುವದು ಖಂಡನೀಯವಾಗಿದ್ದು ಅದಕ್ಕೆ ಅವಕಾಶ ಕೊಡುವದಿಲ್ಲ ಎಂದರು.
ಮಂಡ್ಯ ಅಧಿವೇಶನದ ಲೆಕ್ಕ ಪತ್ರದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ ಅನುದಾನದ ಸಹಾಯದಿಂದ ಕಾರ್ಯಕ್ರಮ ಮಾಡುತ್ತೆವೆ ಅನುದಾನ ಆಯಾ ಪ್ರದೇಶದ ಜಿಲ್ಲಾ ಆಡಳಿತಕ್ಕೆ ಜಮಾ ಆಗುತ್ತದೆ. ಆಹ್ವಾನ ಪತ್ರಿಕೆಗಳ ಪ್ರಕಟನೆ, ಪುಸ್ತಕ ಪ್ರಕಟಣೆ ಮುಂತಾದವುಗಳು ನಮ್ಮ ಜವಾಬ್ದಾರಿ ಇರುತ್ತದೆ ಎಂದು ಉತ್ತರಿಸಿದರು.
ಕನ್ನಡ ಅನ್ನದ ಭಾಷೆಯಾಗಬೇಕು ಮದುವೆ ಹೊಟೇಲ್‌ಗಳಲ್ಲಿ ರೈಸ್ ಬದಲು ಅನ್ನ ಎಂಬ ಪದ ಉಪಯೋಗಿಸುಂತಾಗಬೇಕು, ಕನ್ನಡಭಾಷೆಯನ್ನು ಉಳಿಸುವ ಕೆಲಸ ಮಾಡುತ್ತಿದ್ದೇವೆ. ಕನ್ನಡಕ್ಕೆ ಉಳಿಗಾಲ ವಿಲ್ಲದಂತಾಗಿದೆ. ಕನ್ನಡ ಮಾಧ್ಯವ ಶಾಲೆಗಳು ಮುಚ್ಚುತ್ತಿವೆ. ಪಾಲಕರು ಕನ್ನಡ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಲು ಮುಂದಾಗ ಬೇಕು ಮನೆ-ಮನಗಳಲ್ಲಿ ಕನ್ನಡ ಉಳಿಯ ಬೇಕಾಗಿದೆ ಎಂದರು.
ಕಸಾಪದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಪಾಟೀಲ ಪಾಂಡು, ವಿಜಯಪುರ ಜಿಲ್ಲಾ ಕಸಾಪ ಅದ್ಯಕ್ಷ ಹಾಸೀಮಪೀರ ವಾಲೀಕಾರ, ಬಾಗಲಕೋಟೆ ಕಸಾಪ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ, ಕಸಾಪದ ಸಂಘ ಸಂಸ್ಥೆಗಳ ಅಧ್ಯಕ್ಷ ಪ,ಪಂಗಡಗಳ ಅಧ್ಯಕ್ಷ ಗುರುನಾಥ ತಳವಾರ, ತಾಲೂಕು ಅಧ್ಯಕ್ಷ ಸಂತೋಷ ತಳಕೇರಿ ಸುದ್ದಿಗೋಷ್ಠಿಯಲ್ಲಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 