ಬ್ರೆಜಿಲ್ ನಲ್ಲಿ ಮತ್ತೆ 1274 ಜನ ಕೊರೊನಾ ಸೋಂಕಿಗೆ ಬಲಿ

ರಿಯೋ ಡಿ ಜನೈರೋ, ಜೂನ್ 11,ಬ್ರೆಜಿಲ್ ನಲ್ಲಿ ಕಳೆದ 24 ಗಂಟೆಗಳಲ್ಲಿ ಮತ್ತೆ 1,274 ಜನರು ಕೊರೊನಾ ವೈರಾಣು ಸೋಂಕಿನಿಂದ ಮೃತಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 39,680 ಕ್ಕೆ ಏರಿಕೆಯಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಸಚಿವಾಲಯ ತಿಳಿಸಿದೆ.ಇದೇ ಅವಧಿಯಲ್ಲಿ 32,913 ಜನರಲ್ಲಿ ಸೋಂಕು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 7,72,416 ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯದ ವರದಿ ತಿಳಿಸಿದೆ.

ಇದಕ್ಕೂ ಒಂದು ದಿನ ಮೊದಲು ಬ್ರೆಜಿಲ್ ನಲ್ಲಿ 32,091 ಹೊಸ ಸೋಂಕು ಪ್ರಕರಣಗಳು ಹಾಗೂ 1,272 ಸಾವಿನ ಪ್ರಕರಣಗಳು ವರದಿಯಾಗಿತ್ತು.ಅಮೆರಿಕದ ನಂತರ ಸೋಂಕಿತರ ಸಂಖ್ಯೆಯಲ್ಲಿ ಬ್ರೆಜಿಲ್ ಎರಡನೇ ಸ್ಥಾನದಲ್ಲಿದೆ. ಅಮೆರಿದಲ್ಲಿ 20 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ.ಮಾರ್ಚ್ 11 ರಂದು ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ಸೋಂಕನ್ನು ಸಾಂಕ್ರಾಮಿಕ ಎಂದು ಘೋಷಿತ್ತು. ಈವರೆಗೆ ಜಗತ್ತಿನಾದ್ಯಂತ 73 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು 4,15,000 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.