ಕೇಂದ್ರದಿಂದ ಮುಂದಿನವಾರ ಮತ್ತೊಂದು ಕರೋನ ಪ್ಯಾಕೇಜ್ ?
ನವದೆಹಲಿ, ಮೇ 10, ಕೊರೊನಾ ಸಂಕಷ್ಟ ಮತ್ತು ಲಾಕ್ ಡೌನ್ ನಿಂದ ತೊಂದರೆಗೆ ಸಿಲುಕಿದ ದೇಶದ ಬಡವರ ಕಷ್ಟ ನಿವಾರಣೆಗಾಗಿ ಕೇಂದ್ರ ಶೀಘ್ರದಲ್ಲೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಜನತೆಗೆ ಈಗಾಗಲೇ ಕೇಂದ್ರ ಸರ್ಕಾರವು 1.7 ಲಕ್ಷ ಕೋಟಿ ರೂ. ಮೊತ್ತದ ಪ್ಯಾಕೇಜ್ ಘೋಷಣೆ ಮಾಡಿತ್ತು . ಇದರ ಬೆನ್ನಲ್ಲೇ ಆರ್ಥಿಕತೆಯ ಸುಧಾರಣೆಗೆ ಸರ್ಕಾರ ಮುಂದಿನ ವಾರ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಮತ್ತೊಂದು ಪ್ಯಾಕೇಜ್ ಘೋಷಣೆ ಸಂಬಂಧ ಕಳೆದ ಶನಿವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದ್ದು, ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ಪ್ರಧಾನಿ ಕಾರ್ಯಾಲಯ ಸಿದ್ಧತೆ ನಡೆಸುತ್ತಿದೆ ಎಂದೂ ಹೇಳಲಾಗಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 