ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ

ಚಾಮರಾಜನಗರ, ಅ 9:  ಮೂರ್ಕಾಲು ಗುಡ್ಡದಲ್ಲಿ ಹುಲಿ ದಾಳಿಗೆ ಮತ್ತೋರ್ವ ರೈತ ಮೃತಪಟ್ಟಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯಲ್ಲಿ ಮಂಗಳವಾರ ನಡೆದಿದೆ. ಶಿವಲಿಂಗಪ್ಪ ಎಂಬುವವರು ನಿನ್ನೆ ತಮ್ಮ ಜಮೀನಿನಲ್ಲಿ ದನ ಮೇಯಿಸುತ್ತಿದ್ದಾಗ ಏಕಾಏಕಿ ಹುಲಿ ದಾಳಿ ಮಾಡಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ತಿಂಗಳು ಶಿವಮಾರಯ್ಯ ಎಂಬುವವರು ಹುಲಿ ದಾಳಿಗೆ ಬಲಿಯಾಗಿದ್ದರು. ಹಲವು ಜಾನುವಾರುಗಳು ಕೂಡ ಬಲಿಯಾಗಿದ್ದವು. ಆದರೂ, ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳದ ಪರಿಣಾಮ ಗ್ರಾಮಸ್ಥರು ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.