ಕೊಡಗಿನಲ್ಲಿ ಮತ್ತೊಂದು ಸೋಂಕಿತ ಪ್ರಕರಣ ಪತ್ತೆ, ಉಡುಪಿಯಲ್ಲಿ 18 ಮಂದಿಗೆ ಸೋಂಕು ದೃಢ

ಉಡುಪಿ/ಬೆಂಗಳೂರು, ಮಾ 24, ಉಡುಪಿ ಜಿಲ್ಲೆಯಲ್ಲಿ ಒಂದು ವರ್ಷದ ಮಗು, ನಾಲ್ಕು ವರ್ಷದ ಇಬ್ಬರು ಬಾಲಕರು ಸೇರಿ ಭಾನುವಾರ 18 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಂಟೈನ್‌ಮೆಂಟ್ ವಲಯಕ್ಕೆ ಭೇಟಿ ನೀಡಿದ್ದ ಇಬ್ಬರಲ್ಲಿ ಹಾಗೂ ಮಹಾರಾಷ್ಟ್ರದಿಂದ ಬಂದ 14 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಬ್ಬರು ಸೋಂಕಿತರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದು  ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೊಂದೆಡೆ ಕೊಡಗು ಜಿಲ್ಲೆಯಲ್ಲಿ ಈಗ ಮತ್ತೊಂದು ಪ್ರಕರಣ ವರದಿಯಾಗಿದೆ. ಸೋಮವಾರಪೇಟೆ ತಾಲ್ಲೂಕಿನ 26 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಇದು ಜಿಲ್ಲೆಯಲ್ಲಿ ಕಂಡುಬಂದ ಮೂರನೇ ಪ್ರಕರಣವಾಗಿದೆ.ಮುಂಬೈನಲ್ಲಿ ಬ್ಯಾಂಕ್ ಉದ್ಯೋಗಿ ಇವರು ಮೇ 20ರಂದು ಜಿಲ್ಲೆಯ ಸಂಪಾಜೆ ಚೆಕ್‌ಪೋಸ್ಟ್‌ಗೆ ಬಂದಿದ್ದರು. ಅಲ್ಲಿಂದ ಅವರನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಯಾವುದೇ ಸ್ಥಳಗಳಿಗೆ ಭೇಟಿ ಮಾಡಿಲ್ಲ. ಯಾರನ್ನೂ ಸಂಪರ್ಕಿಸಿಲ್ಲ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.