ಲೋಕದರ್ಶನ ವರದಿ
ತಾಳ್ಮೆ, ಸಹನೆಗೆ ಇನ್ನೊಂದು ಹೆಸರೇ ಸ್ತ್ರೀ: ಡಾ.ವಿಶ್ವಪ್ರಭುದೇವಶ್ರೀ
ಸಿಂದಗಿ 20: ನಮ್ಮ ದೇಶದ ಹೆಸರಿನಲ್ಲಿಯೇ ಭಾರತ ಮಾತಾ ಎಂಬ ನಾಮಾಂಕಿತವಾಗಿದ್ದು, ತಾಳ್ಮೆ ಮತ್ತು ಸಹನೆಗೆ ಇನ್ನೊಂದು ಹೆಸರೇ ಸ್ತ್ರೀ. ಅಂತಹ ಸ್ತ್ರೀ ಮನೆಯಲ್ಲಿ ಯಾವಾಗಲೂ ನಗುತಾ ಇರಬೇಕು ಎಂದು ಸಾರಂಗಮಠದ ನಿಯೋಜಿತ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಹೇಳಿದರು.
ಪಟ್ಟಣದ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಾಂಸ್ಕೃತಿಕ ಸಿರಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜದ ಕಟ್ಟುಪಾಡುಗಳ ಹೊರತಾಗಿಯೂ ಕೂಡ ಇಂದಿನ ಆಧುನಿಕ ದಿನಗಳಲ್ಲಿ ಆಕೆ ಸಾಧನೆಯ ಶೀಖರವನ್ನು ಮುಟ್ಟುತ್ತಿದ್ದಾಳೆ. ಹಾಗಾಗಿ ವಿಶ್ವದಾದ್ಯಂತ ಮಹಿಳೆಯರಿಗಾಗಿ ಈ ಒಂದು ದಿನವನ್ನು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನಾಗಿ ಆಚರಿಸುವ ಮೂಲಕ ಮೀಸಲಿಡಲಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಆರ್.ಡಿ.ಪಾಟೀಲ ಪಪೂ ಕಾಲೇಜಿನ ಉಪನ್ಯಾಸಕಿ ವಿಜಯಲಕ್ಷ್ಮೀ ಹಿರೇಮಠ ಮಾತನಾಡಿ, ಕಡು ಬಡತನದಲ್ಲಿರುವ ಮಹಿಳೆಯರು ಸಮಾಜದಲ್ಲಿ ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಬೇಕು. ಮಹಿಳೆಯರು ಸ್ವಾವಂಬಿಗಳಾಗಲು ವಿವಿಧ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಬೇಕು. ಮಹಿಳೆಯರಿಗಾಗಿಯೇ ಶ್ರೀಮಠವು ಪ್ರತ್ಯೇಕ ಮಹಿಳಾ ಕಾಲೇಜನ್ನು ಪ್ರಾರಂಭಿಸಿ ಸಬಲೀಕರಣಗೊಳಿಸುವ ಮೂಲಕ ಪ್ರಮುಖ ಪಾತ್ರ ವಹಿಸುತ್ತಿದೆ. ಇದರಿಂದ ಮಹಿಳೆಯರು ವಿದ್ಯಾಭ್ಯಾಸ ಪಡೆಯಲು ಸಾಧ್ಯವಾಗುತ್ತಿದೆ ಎಂದರು.
ಅತಿಥಿ ಸ್ಥಾನವನ್ನು ಅಲಂಕರಿಸಿದ ಸಂಸ್ಥೆಯ ಆಡಳಿತಾಧಿಕಾರಿ ಡಾ.ಬಿ.ಜಿ.ಮಠ, ಅಧ್ಯಕ್ಷತೆಯನ್ನು ವಹಿಸಿದ ಪ್ರಾಚಾರ್ಯ ಎಸ್.ಎಂ.ಪೂಜಾರಿ ಮಾತನಾಡಿದರು. ಪಾವನ ಸಾನಿಧ್ಯವನ್ನು ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು.
ಸಾರಂಗಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ನೇಮಕಗೊಂಡ ನಿಯೋಜಿತ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಮಹಾವಿದ್ಯಾಲಯದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಲರವ ಮೆರುಗು ತಂದಿತು.
ಮಹಿಳಾ ಪಪೂ ಕಾಲೇಜು ಪ್ರಾಚಾರ್ಯ ಎಮ್.ಎಸ್.ಹೈಯಾಳಕರ, ಉಪನ್ಯಾಸಕರಾದ ಮಹಾಂತೇಶ ನೂಲಾನವರ, ಜಿ.ಎ.ನಂದಿಮಠ, ಜಿ.ಎಸ್.ಕುಲಕರ್ಣಿ, ಅನೀಲಕುಮಾರ ರಜಪೂತ, ಶಿವರಾಜ ಕುಂದಗೊಳ, ಭಾಗ್ಯಶ್ರೀ ನಂದಿಮಠ, ಎಮ್.ಕೆ.ಬಿರಾದಾರ, ಎಸ್.ಸಿ.ದುದ್ದಗಿ, ಜಿ.ವಿ.ಪಾಟೀಲ್, ಹೇಮಾ ಹಿರೇಮಠ, ನೀಲಮ್ಮ ಬಿರಾದಾರ, ಮಂಗಳಾ ಈಳಗೇರ, ಡಿ.ಎಂ.ಪಾಟೀಲ, ಶಂಕರ ಕುಂಬಾರ, ಮಮತಾ ಹರನಾಳ, ವಿಜಯಲಕ್ಷ್ಮೀ ಭಜಂತ್ರಿ ಸೇರಿದಂತೆ ಮಾಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ವಿದ್ಯಾರ್ಥಿನಿ ಪೂಜಾ ಸಾರಂಗಮಠ ಹಾಗೂ ನಾಗಮ್ಮ ದೊಡಮನಿ ನಿರೂಪಿಸಿದರು. ಐಶ್ವರ್ಯ ಬಿರಾದಾರ ಪ್ರಾರ್ಥಿಸಿದರು. ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಯು.ಸಿ.ಪೂಜೇರಿ ಸ್ವಾಗತಿಸಿದರು. ಕಾರ್ಯದರ್ಶಿ ಅಕ್ಷತಾ ಕತ್ನಳ್ಳಿ ವಂದಿಸಿದರು.