ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿಯಲ್ಲಿ ಸೋಂಕು ದೃಢ: ಸೋಂಕಿತರ ಸಂಖ್ಯೆ 13ಕ್ಕೇರಿಕೆ
ಮಂಗಳೂರು, ಎ.17, ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ವ್ಯಕ್ತಿಯೊಬ್ಬರಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ. ಇದರೊಂದಿಗೆ 12 ದಿನಗಳ ಬಳಿಕ ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಪ್ರಕರಣ ಪತ್ತೆಯಾದಂತಾಗಿದೆ. ಜಿಲ್ಲೆಯಲ್ಲಿ ಕೊರೋನ ದೃಢಪಟ್ಟ 13ನೇ ಪ್ರಕರಣ ಇದಾಗಿದೆ. 39 ವರ್ಷದ ಈ ವ್ಯಕ್ತಿ ಮಾರ್ಚ್ ತಿಂಗಳಲ್ಲಿ ದಿಲ್ಲಿಗೆ ಪ್ರಯಾಣ ಮಾಡಿರುವ ಇತಿಹಾಸ ಹೊಂದಿದ್ದಾರೆ. ಈ ವ್ಯಕ್ತಿ ಈಗಾಗಲೇ ಹೋಂ ಕ್ವಾರಂಟೈನ್‌ನಲ್ಲಿದ್ದು, ಅವರ ಗಂಟಲ ದ್ರವದ ಪರೀಕ್ಷಾ ವರದಿ ಬಂದಿದ್ದು, ಪಾಸಿಟಿವ್ ಆಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಇದೀಗ ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನ ದೃಢಪಟ್ಟು ಚಿಕಿತ್ಸೆಯಲ್ಲಿದ್ದ 13 ಮಂದಿಯ ಪೈಕಿ ಒಂಬತ್ತು ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳ ಶೋಧ ಕಾರ್ಯ ಆರಂಭಗೊಂಡಿದೆ.ಈ ಮಧ್ಯೆ, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 353ಕ್ಕೆ ಏರಿಕೆಯಾಗಿದೆ. ಗುರುವಾರ ಸಂಜೆಯಿಂದ ಶುಕ್ರವಾರ ಮಧ್ಯಾಹ್ನದ ವರೆಗೆ ರಾಜ್ಯದಲ್ಲಿ 38 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಒಂದೇ ದಿನದಲ್ಲಿ ಅತಿಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ 7, ಬೆಂಗಳೂರಿನಲ್ಲಿ 8, ಮೈಸೂರು ಜಿಲ್ಲೆ ನಂಜನಗೂಡು 10, ಮೈಸೂರು 2, ಮಂಡ್ಯ ಜಿಲ್ಲೆ ಮಳವಳ್ಳಿ 3, ಚಿಕ್ಕಬಳ್ಳಾಪುರ 3, ವಿಜಯಪುರ 2, ಬೀದರ್ 1, ದ.ಕ. ಜಿಲ್ಲೆ ಉಪ್ಪಿನಂಗಡಿಯಲ್ಲಿ 1 ಪ್ರಕರಣ ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 