ತುಮಕೂರು/ಬೆಂಗಳೂರು, ಮೇ 25,ತುಮಕೂರು ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ.ನೆಲಮಂಗಲ ತಾಲ್ಲೂಕಿನ ವೀರಸಾಗರದ 60 ವರ್ಷದ ಮಹಿಳೆ ನಿಗದಿತ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಇವರು ಮೇ 19ರಂದು ಶ್ವಾಸಕೋಶದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲು ದ್ರವ ಮತ್ತು ಕಫದ ಮಾದರಿಯನ್ನು ಪರೀಕ್ಷೆ ಮಾಡಿದಾಗ ಸೋಂಕು ದೃಢಪಟ್ಟಿತ್ತು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಕಾರಣಕ್ಕೆ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ.