ಬೆಂಗಳೂರು 27: : ಈಗಾಗಲೇ ಹಲವು ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಏರಿಕೆ ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಗುರುವಾರ (ಮಾ.27) ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆ ಬಗ್ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಒಂದು ವರ್ಷದ ಅಂತರದಲ್ಲಿ ಎರಡು ಬಾರಿ ಹಾಲಿನ ದರ ಹೆಚ್ಚಳವಾಗಿದೆ.
ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ.
ಇದೀಗ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಗ್ರಾಹಕರಿಗೆ ಹಾಲು ಬಿಸಿತುಪ್ಪವಾಗಿದೆ.