ಗದಗ 16 : ಜಿಲ್ಲೆಯಾದ್ಯಂತ ಇದೇ ಭಾನುವಾರ ಜನೇವರಿ 19ರಿಂದ 22ರ ವರೆಗೆ ಮೊದಲನೇ ಸುತ್ತಿನ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಜನೇವರಿ-2011ರಿಂದ ಯಾವುದೇ ಹೊಸ ಪೋಲಿಯೋ ಪ್ರಕರಣ ಕಂಡು ಬಂದಿರುವುದಿಲ್ಲಾ. ಹಾಗೂ ಭಾರತ ದೇಶವು ಈಗ ವಿಶ್ವ ಆರೋಗ್ಯ ಸಂಸ್ಥೆಯ ವತಿಯಿಂದ "ಪೋಲಿಯೋ ಮುಕ್ತ ರಾಷ್ಟ್ರವೆಂದು" 2014ರಲ್ಲಿ ಘೋಷಿಸಲ್ಪಟ್ಟಿರುತ್ತದೆ. ಆದರೂ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಅಫಘಾನಿಸ್ಥಾನ, ರಾಷ್ಟ್ರಗಳಲ್ಲಿ ಇನ್ನೂ ಪೋಲಿಯೋ ಪ್ರಕರಣಗಳು ಇರುವುದರಿಂದ, ಮುಂಜಾಗ್ರತೆ ಕ್ರಮವಾಗಿ ನಮ್ಮ ದೇಶದಲ್ಲಿ ಪೋಲಿಯೋ ಅಭಿಯಾನವನ್ನು ದಿ. 19ರಿಂದ 22ರ ವರೆಗೆ ಪೋಲಿಯೋ ಹನಿ ಹಾಕಲಾಗುತ್ತದೆ. ದಿ. 19ರಂದು ಬೂತ್ನಲ್ಲಿ ಮತ್ತು ದಿ. 20ರಿಂದ 22ರ ವರೆಗೆ ಮನೆ-ಮನೆ ಭೇಟಿ ಕಾರ್ಯಕ್ರಮವಿದ್ದು, ನವಜಾತ ಶಿಶುವಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಮರೆಯದೇ ಪೋಲಿಯೋ ಹನಿ ಹಾಕಿಸಿ. ಹೆಚ್ಚಿನ ಮಾಹಿತಿಗಾಗಿ ತಮ್ಮ ಸಮೀಪದ ವೈದ್ಯಾಧಿಕಾರಿಗಳು, ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯನ್ನು ಸಂಪರ್ಕಿಸಬಹುದಾಗಿದೆ ಎಂದು ರಾಜ್ಯದ ಭೂ ವಿಜ್ಞಾನ, ಅರಣ್ಯ , ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.