ಇಂದು ಡೆಂಗ್ಯೂ ವಿರೋಧಿ ಮಾಸಾಚರಣೆ ಫೋನ್‌-ಇನ್ ಕಾರ್ಯಕ್ರಮ

ಇಂದು ಡೆಂಗ್ಯೂ ವಿರೋಧಿ ಮಾಸಾಚರಣೆ ಫೋನ್‌-ಇನ್ ಕಾರ್ಯಕ್ರಮ  Anti-Dengue Month Phone-in Programme Today

ಲೋಕದರ್ಶನ ವರದಿ 

ಬೆಳಗಾವಿ: ಕೆಎಲ್‌ಇ ವೇಣುಧ್ವನಿ 90.4 ಎಫ್‌ಎಂ ಕೇಂದ್ರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಅಂಗವಾಗಿ ಫೋನ್‌-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.  

ಜುಲೈ 8, 2026ರಂದು ಬೆಳಿಗ್ಗೆ 10ರಿಂದ 11 ಗಂಟೆಯವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಜಗದೀಶ್ ಕೆ. ಜಿ. ಭಾಗವಹಿಸಿ, ಸಾರ್ವಜನಿಕರ ಆರೋಗ್ಯ ಸಂಬಂಧಿತ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.  

ಸಾರ್ವಜನಿಕರು 90199 04904 ಸಂಖ್ಯೆಗೆ ಕರೆ ಮಾಡಿ, ಡೆಂಗ್ಯೂ ತಡೆ, ನಿಯಂತ್ರಣ ಹಾಗೂ ಇತರ ಆರೋಗ್ಯ ಸಂಬಂಧಿತ ವಿಷಯಗಳ ಕುರಿತು ತಜ್ಞರಿಂದ ಮಾಹಿತಿ ಮತ್ತು ಸಲಹೆ ಪಡೆಯಬಹುದಾಗಿದೆ.  ಕೆಎಲ್‌ಇ ವೇಣುಧ್ವನಿ 90.4 ಎಫ್‌ಎಂ ರೇಡಿಯೋ ಈಗ ಮೊಬೈಲ್ ಆ್ಯಪ್ನಲ್ಲಿಯೂ ಲಭ್ಯವಿದೆ ಎಂದು ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.