ಮಾನವ ಕಳ್ಳಸಾಗಣೆ ವಿರೋಧಿ ದಿನಾಚರಣೆ

ಮಾನವ ಕಳ್ಳಸಾಗಣೆ ವಿರೋಧಿ ದಿನಾಚರಣೆ Anti-Human Trafficking Day Observance

ಲೋಕದರ್ಶನ ವರದಿ  

 ಹೂವಿನಹಡಗಲಿ  02- ಮಾನವ ಕಳ್ಳಸಾಗಣೆ ಚಟುವಟಿಕೆಗಳಲ್ಲಿ ಆರ್ಥಿಕ ದುರ್ಬಲವರ್ಗದವರು, ಅಮಾಯಕ ಮಹಿಳೆಯರು, ಮಕ್ಕಳು ಬಲಿಪಶುಗಳಾಗುತ್ತಿದ್ದಾರೆ. ಇಂತಹ ಕೃತ್ಯವನ್ನು ತಡೆಗಟ್ಟಲು ಸಾರ್ವಜನಿಕರಿಗೆ ಅರಿವು ಅಗತ್ಯವಿದೆ ಎಂದು ಸರ್ಕಾರಿ ಸಹಾಯಕ ಅಭಿಯೋಜಕ ಕೆ.ಅಜ್ಜಯ್ಯ ಹೇಳಿದರು. ಇಲ್ಲಿನ ಸೊಪ್ಪಿನ ಕಾಳಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾನವ ಕಳ್ಳ ಸಾಗಣೆ ವಿರೋಧಿ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಂಗಳಾ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಶಾಲಾ ವಿದ್ಯಾರ್ಥಿಗಳು ಪಠ್ಯದ ಜತೆಗೆ ಕಾನೂನಿನ ಅರಿವು ಬೆಳೆಸಿಕೊಳ್ಳುವ ಮೂಲಕ ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕಿದೆ ಎಂದರು. ವಕೀಲರಾದ ಅಟವಾಳಗಿ ಕೊಟ್ರೇಶ, ಗದುಗಿನ ಹನುಮಂತಪ್ಪ ಉಪನ್ಯಾಸ ನೀಡಿದರು. ಹಿರಿಯ ಸಂಧಾನಕಾರ ಡಿ.ಕೆ.ಎಂ.ಚನ್ನಬಸಯ್ಯ, ವಕೀಲ ರಾಜಭಕ್ಷಿ, ಕ್ಷೇತ್ರ ಸಮನ್ವಯಾಧಿಕಾರಿ ಎ. ಕೋಟೆಪ್ಪ, ಉಪ ಪ್ರಾಚಾರ್ಯ ಬಿ.ರವೀಂದ್ರನಾಥ ಇದ್ದರು.