ಮಲೇರಿಯಾ ವಿರೋಧಿ ಮಾಸಾಚರಣೆ

ಗದಗ 29: ಡಂಬಳ ಹೋಬಳಿಯ ಜಂತ್ಲಿ ಶಿರೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ  ಮಲೇರಿಯಾ ವಿರೋಧಿ ಮಾಸಾಚರಣೆ ಕಾ0ುರ್ಕ್ರಮ ಹಮ್ಮಿಕೊಳ್ಳಲಾಯಿತು.  

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ  ಮಲೇರಿಯಾ  ರೋಗವನ್ನು ತಡೆಗಟ್ಟುವಲ್ಲಿ ವಿವಿಧ ಇಲಾಖೆಗಳ ಸಹಕಾರ ಹಾಗೂ ಸಾರ್ವಜನಿಕರ ಸಹಕಾರ ಮುಖ್ಯ ಎಂದರು, ಸೊಳ್ಳೆಗಳಿಂದ ಹರಡುವ ರೋಗಗಳನ್ನು ತಡೆಯುವಲ್ಲಿ ಆರೋಗ್ಯ ಇಲಾಖೆಯ ಕ್ಷೇತ್ರ ಸಿಬ್ಬಂದಿಯವರ ಮತ್ತು ಆಶಾ ಕಾರ್ಯಕರ್ತೆಯರ ಪಾತ್ರ ಬಹು ಮುಖ್ಯವಾಗಿದೆ, ಪ್ರತಿದಿನವೂ ಕ್ಷೇತ್ರ ಮಟ್ಟದಲ್ಲಿ ಲಾರ್ವಾ ಸಮೀಕ್ಷೆ ಉದ್ದೇಶವೇ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶಪಡಿಸುವದು ಹಾಗೂ ಜನಸಾಮಾನ್ಯರಿಗೆ ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ ನೀಡುವದು. ಸಾರ್ವಜನಿಕರು, ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯ್ತಿಯ ಸಿಬ್ಬಂದಿಯವರು ಕೈಜೋಡಿಸಿ ಈ ಸೊಳ್ಳೆಗಳಿಂದ ಹರಡುವ ರೋಗಗಳನ್ನು ದೂರ ಮಾಡಬೇಕು  ಎಂದರು. 

ಜಿಲ್ಲಾ  ಕೀಟ ಶಾಸ್ತ್ರಜ್ಣರಾದ ಅನ್ನಪೂರ್ಣ ಶೆಟ್ಟರ್ ರವರು ಪ್ರಾಸ್ತಾವಿಕವಾಗಿ  ಮಾತನಾಡಿದರು.   

ಕಾರ್ಯಕ್ರಮದಲ್ಲಿ ಜಂತ್ಲಿ ಶಿರೂರ ಗ್ರಾಮ ಪಂಚಾಯ್ತಿ ಅಧ್ಯಕ್ಷ ರತ್ನಮ್ಮ ಪೂಜಾರ, ಗ್ರಾ.ಪಂ.ಉಪಾಧ್ಯಕ್ಷ ರವಿ ದೊಡ್ಡಮನಿ, ಸದಸ್ಯ ಸಂಗನಗೌಡ ಪಾಟೀಲ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಮಲ್ಲಿಕಾರ್ಜುನ ಕಲಕಂಬಿ, ಜೈತುನಬಿ ಬಳ್ಳಾರಿ, ಈರಣ್ಣ ಕೊಪ್ಪದ, ಜಿಲ್ಲಾ ಆರೋಗ್ಯ ಕಾರ್ಯಕ್ರಮಗಳ ಕೋ ಆರ್ಡಿನೇಟರ್ ರವಿ ಕಡಗಾವಿ, ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.