ಕಾಳಿದಾಸ ಪ್ರೌಢಶಾಲೆಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ
Anti-Malaria Month Celebration Program at Kalidasa High School
ಕೊಪ್ಪಳ 20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 18 ಕೊಪ್ಪಳ ನಗರದ ಕಾಳಿದಾಸ ಪ್ರೌಢಶಾಲೆಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವ್ಹಿ.ಪಿ ಅವರು ಮಾತನಾಡಿ, ಪ್ರತಿ ವರ್ಷ ಜೂನ್ ತಿಂಗಳಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರವನ್ನು ಆಚರಿಸಲಾಗುತ್ತದೆ. ಇದರ ಉದ್ದೇಶ ಜೂನ್ ತಿಂಗಳಲ್ಲಿ ಮಳೆಗಾಲ ಪ್ರಾರಂಭವಾಗುವುದರಿಂದ ನಿಂತ ನೀರಿನಲ್ಲಿ ಸೋಂಕಿತ ಸೊಳ್ಳೆಗಳು ಹೆಚ್ಚಾಗಿ ಮನುಷ್ಯರಿಗೆ ಒಬ್ಬರಿಂದ ಇನ್ನೊಬ್ಬರಿಗೆ ಕಚ್ಚುವುದರಿಂದ ಮಲೇರಿಯಾ ರೋಗ ಹರಡುತ್ತದೆ. ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಜಾಗೃತಿ ಕಾರ್ಯಕ್ರಮ ಆಚರಿಸಲಾಗುತ್ತದೆ. ಸೋಂಕಿತ ಅನಾಫಿಲಿಸ್ ಹೆಣ್ಣು ಸೊಳ್ಳೆಗಳು ನೀರಿನಲ್ಲಿ ಮೊಟ್ಟೆಗಳನ್ನಿಟ್ಟು ಸಂತಾನಾಭಿವೃದ್ಧಿ ಮಾಡುತ್ತ್ತವೆ. ತಲೆನೋವು, ವಾಂತಿ, ವಿಪರೀತ ಚಳಿಜ್ವರ, ಮೈನಡುಕ ಲಕ್ಷಣಗಳಿದ್ದರೆ ತಕ್ಷಣ ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಥವಾ ಆರೋಗ್ಯ ಸಿಬ್ಬಂದಿಗಳ ಜೊತೆ ರಕ್ತ ಪರೀಕ್ಷೆ ಮಾಡಿಸಿ, ಖಚಿತ ಪಟ್ಟರೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಜ್ವರದ ಬಗ್ಗೆ ನಿರ್ಲಕ್ಷ ಮಾಡಬಾರದೆಂದು ತಿಳಿಸಿದರು.
ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತ್ತದೆ. ಮರುಹೂಡಿಕೆ, ಮರುಕಲ್ಪನೆ, ಮರುಉತ್ತೇಜನ ನೀಡೋಣ ಎಂಬ ಘೋಷ್ಯವಾಕ್ಯದೊಂದಿಗೆ ಈ ವರ್ಷ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಇದರ ನಿಯಂತ್ರಣಕ್ಕಾಗಿ ತಮ್ಮ ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಸಾಯಂಕಾಲದ ವೇಳೆ ಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಸೊಳ್ಳೆ ಕಡಿತದಿಂದ ದೂರವಿರಲು ವೈಯಕ್ತಿಕ ರಕ್ಷಣೆ ಮಾಡಿಕೊಳ್ಳಬೇಕು. ಮಲೇರಿಯಾ ನಿಯಂತ್ತ್ರಣ ಪ್ರತಿಯೊಬ್ಬರ ಜವಾಬ್ದಾರಿ. ಮನೆಯಲ್ಲಿ ನೀರು ಶೇಖರಣಾ ತೊಟ್ಟಿಗಳಲ್ಲಿ ಸೊಳ್ಳೆಗಳು ಮೊಟ್ಟೆಗಳನ್ನಿಟ್ಟು ಸಂತಾನಾಭಿವೃದ್ಧಿ ಮಾಡುತ್ತ್ತವೆ. ಲಾರ್ವಾ ನಾಶಕ್ಕಾಗಿ ಸ್ವಚ್ಚಗೊಳಿಸತ್ತಿರಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಮನೆ ಭೇಟಿ ನೀಡಿದಾಗ ಸಹಕರಿಸಿ, ರಕ್ತಲೇಪನ ನೀಡಿ ಮಲೇರಿಯಾ ಮುಕ್ತ ಕೊಪ್ಪಳ ಜಿಲ್ಲೆಯನ್ನಾಗಿ ಮಾಡಲು ಕೈಜೋಡಿಸುವಂತೆ ಮನವಿ ಮಾಡಿದರು.
ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಕಾಂತ ಹೆಚ್.ಹೆಚ್. ಮಾತನಾಡಿ, ಖಾಯಿಲೆಗಳ ನಿಯಂತ್ರಣ ಮತ್ತು ಅದರ ಮುಂಜಾಗ್ರತ ಕ್ರಮಗಳು, ಮಕ್ಕಳಲ್ಲಿ ಕಂಡುಬರುವ ಅತಿಸಾರಭೇದಿ ನಿಯಂತ್ರಣ, ಮುಂಜಾಗ್ರತ ಕ್ರಮಗಳ ಕುರಿತು ಮತ್ತು ಹದಿ-ಹರೆಯದವರ ಆರೋಗ್ಯ ರಕ್ಷಣೆ ಕುರಿತು ವಿವರವಾಗಿ ಮಾತನಾಡಿದರು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಲಿಂಕ್‌ವರ್ಕರ್ ಉದಯ ಅವರು ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ, ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಬಾಲ್ಯವಿವಾಹ ನಿಷೇಧ ಕುರಿತು ಮಾತನಾಡಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಡಾ. ರಾಮಪ್ಪ ಅವರು ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಗಿವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ತಮ್ಮ ತಮ್ಮ ಗ್ರಾಮಗಳಲ್ಲಿ ಹಾಗೂ ಸುತ್ತ್ತ ಮುತ್ತ್ತಲಿನ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಹೇಳಿದರು.
ಸಹ ಶಿಕ್ಷಕರಾದ ಎಸ್.ಡಿ ಕುಲಕರ್ಣಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಹ ಶಿಕ್ಷಕರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 