ಮಾದಕ ವಸ್ತುಗಳ ಸೇವನೆ ವಿರೋಧಿ ಸಪ್ತಾಹ ಆಚರಣೆ

ಬಾಗಲಕೋಟೆ: ಮಾದಕ ವ್ಯಸನ ಒಂದು ಪಿಡುಗಾಗಿ ಪರಿಣಮಿಸಿದೆ. ನಮ್ಮ ದೇಶದಲ್ಲಿ ಕೂಡಾ ಸಾಕಷ್ಟು ಜನ ಇದಕ್ಕೆ ಬಲಿಯಾಗುತ್ತಿದ್ದಾರೆ. ಮಾದಕ ವ್ಯಸನಿಂದ ದೇಹದ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಇದರಿಂದ ಮುಕ್ತಿಹೊಂದಲು ಜನರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಉಪನ್ಯಾಸಕರಾಗಿ ಆಗಮಿಸಿದ್ದ ಮನೋರೋಗ ತಜ್ಞರಾದ ಡಾ.ರವಿ ಸಿ.ಎ ಅವರು ಮಾತನಾಡಿದರು.

ಜಿಲ್ಲಾ ಕುಷ್ಠರೋಗ ನಿಯಂತ್ರಣ ಕಾಯರ್ಾಲಯದ ವತಿಯಿಂದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ಸಪ್ತಾಹ ಕಾರ್ಯಕ್ರಮವನ್ನು ನವನಗರದ ಕಾಳಿದಾದ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಜರುಗಿತು.

ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಹೇಮಲತಾ ಹುಲ್ಲೂರ ಉದ್ಘಾಟಿಸಿ ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರವಾಗಿ ತಿಳಿಸಿದರು. 

  ಅಧ್ಯಕ್ಷತೆಯನ್ನು ಜಿ.ಆರ್.ಹೊಸಮನಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಳಿದಾಸ ಶಿಕ್ಷಣ ಸಂಸ್ಥೆಯ ಸಿದ್ದನಗೌಡ ಪಾಟೀಲ ಸೇರಿದಂತೆ ಜಿಲ್ಲಾ ಮಾನಸಿಕ ಕಾರ್ಯಕ್ರಮದ ಸಿಬ್ಬಂದಿವರ್ಗದವರು ಇದ್ದರು.