ಮೇ 31ರಿಂದ ಜೂನ್ 30ರವರೆಗೆ ತಂಬಾಕು ವಿರೋಧಿ ಜಾಗೃತಿ ಅಭಿಯಾನ
Anti-tobacco awareness campaign from May 31 to June 30
ಲೋಕದರ್ಶನ ವರದಿ
ಗದಗ 27: ಶ್ರೀಧರ್.ಸಿ.ಎನ್. ಮಾನ್ಯ ಜಿಲ್ಲಾಧಿಕಾರಿಗಳು ಗದಗ ಜಿಲ್ಲೆ-ಗದಗ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ತಂಬಾಕು ನಿಷೇಧ ಕೋಶ ಗದಗದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆ ಹಮ್ಮಿಕೊಳ್ಳಲಾಯಿತು. ಸಭೆಯಲ್ಲಿ ಮೊದಲಿಗೆ ಡಾ.ಎಸ್.ಎಸ್.ನೀಲಗುಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಗದಗರವರು ಸಭೆಗೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡುತ್ತ ವಿಶ್ವ ಆರೋಗ್ಯ ಸಂಸ್ಥೆಯು ಪ್ರತಿ ವರ್ಷ ಮೇ 31 ವಿಶ್ವ ತಂಬಾಕು ರಹಿತ ದಿನವೆಂದು ಘೋಷಿಸಿದ ಈ ವರ್ಷ ವಿಶ್ವ ತಂಬಾಕು ರಹಿತ ದಿನದ ಘೋಷ ವಾಕ್ಯ “ ಆಕರ್ಷಣೆಯನ್ನು ಬಹಿರಂಗ ಪಡಿಸುವದು, ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಎದರಿಸುವದು” ಈ ಹಿನ್ನೆಲಿಯಲ್ಲಿ ಮೇ 31 ರಿಂದ ಜೂನ 30 ರವರೆಗೆ ಜಿಲ್ಲೆಯ್ಯಾದಂತ ಗ್ರಾಮ,ತಾಲೂಕ ಹಾಗೂ ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಯ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಸೇವನೆಗಳ ದುಷ್ಟರಿಣಾಮ ಬಗ್ಗೆ ಜನಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಿರುವುದಾಗಿ ಸಭೆಗೆ ತಿಳಿಸಿದರು.
ಈ ನಿಟ್ಟಿನಲ್ಲಿ ಜಿಲ್ಲೆಯ್ಯಾದಂತ ತಂಬಾಕು ನಿಯಂತ್ರಣ ಕಾಯ್ದೆ (ಕೋಟ್ಪಾ-2003) ಕುರಿತ ವಿಷಶೆ ದಾಳಿಗಳನ್ನು ಹಮ್ಮಿಕೊಳ್ಳುವುದು, ವಿಷೇಶವಾಗಿ ಶಿಕ್ಷಣ ಸಂಸ್ಥೆಗಳ ಸುತ್ತ-ಮುತ್ತ ತಂಬಾಕು ನಿಷೇಧ, ಜಾಹೀರಾತು ವಿರುದ್ದ, ಉತ್ಪನ್ನಗಳ ಮೇಲಿನ ಆರೋಗ್ಯ ಎಚ್ಚರಿಕೆ ಚಿಹ್ನೆ ಮುದ್ರಣ, ಹಾಗೂ ಇತರೆ ಸೆಕ್ಷನ್ಗಳ ವಿರುದ್ದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕ್ರಮ ಕೈಗೊಳ್ಳಲು, ಜಿಲ್ಲೆಯ ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತ ಘೋಷಣೆ ಮಾಡಲು, ತಂಬಾಕು ಮಾರಾಟ ಪರವಾನಿಗೆಯನ್ನು ಎಲ್ಲಾ ತಂಬಾಕು ಮಾರಾಟಗಾರರು ಸ್ಥಳೀಯ ಸಂಸ್ಥೆಗಳ ಮೂಲಕ ಕಡ್ಡಾಯವಾಗಿ ಪಡೆಯಲು, ಬಾಯಿ ಕ್ಯಾನ್ಸ್ರ್ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲು, ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳುವುದು, ಹಾಗೂ ಜಿಲ್ಲೆಯ ಎಲ್ಲಾ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಜೂನ ತಿಂಗಳಿನಲ್ಲಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ತಂಬಾಕು ವ್ಯಸನದಿಂದಾಗುವ ದುಷ್ಟರಿಣಾಮಗಳ ಕುರಿತು ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು, ತಂಬಾಕು ನಿಷೇಧ ಕಾಯ್ದೆ ಕುರಿತು ಜಾಗೃತಿ ಹಾಗೂ ಕ್ರಮವಹಿಸುವುದು, ತಂಬಾಕು ವ್ಯಸನಗಳಿಗೆ ಆಪ್ತ ಸಮಾಲೋಚನ ಓಷಧೋಪಚಾರಗಳ ಮೂಲಕ ವ್ಯಸನ ಮುಕ್ತಗೊಳಿಸಲು ಮತ್ತು ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈ ಜೋಡಿಸಲು ಮಾನ್ಯ ಜಿಲ್ಲಾಧಿಕಾರಿಗಳು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು ಜಿಲ್ಲಾ ಆಸ್ವತ್ರೆ ಗದಗ, ಜಿಲ್ಲಾ ಸಮೀಕ್ಷಣಾಧಿಕಾರಿಗಳು, ಜಿಲ್ಲಾ ಅಸಾಂಕ್ರಮಿಕ ರೋಗಗಳ ನಿಯಂತ್ರಣ ಅಧಿಕಾರಿಗಳು, ಜಿಲ್ಲಾ ಕ್ಷಯರೋಗ ಕಮ್ ಕುಷ್ಠರೋಗ ನಿಯಂತ್ರಣ ಅಧಿಕಾರಿಗಳು, ಜಿಲ್ಲಾ ಆರ್.ಸಿ.ಹೆಚ್ ಕಮ್ ಡಿ.ಎಫ್.ಡ್ಲೂ ಅಧಿಕಾರಿಗಳು, ಜಿಲ್ಲಾ ಯೋಜನಾ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿಗಳು, ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಿಬ್ಬಂದಿ, ನಗರಸಭೆ ಗದಗ-ಬೆಟಗೇರಿ ಸಿಬ್ಬಂದಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕ ವೈದ್ಯಾಧಿಕಾರಿಗಳು ಹಾಗೂ ಜಿಲ್ಲಾ ಸಲಹೆಗಾರರು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಗದಗ ಉಪಸ್ಥಿತರಿದ್ದರು.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 