ಕೊಪ್ಪಳ: ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವಲ್ಲಿ ಯಾರೇ ನಿರ್ಲಕ್ಷ್ಯ ವಹಿಸಿದರೂ ಸಹಿಸುವುದಿಲ್ಲ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ವಿಳಂಬಕ್ಕೆ ಕಾರಣರಾದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಶಿಸ್ತು ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಕೆ.ಎಸ್. ಈಶ್ವರಪ್ಪರವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯತನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಗ್ರಾಮೀಣ ಭಾಗದ ಜನರಿಗೆ ನೀರನ್ನು ಒದಗಿಸುವ ಮಹತ್ತರ ಯೋಜನೆಯಾಗಿದ್ದು, ಜಿಲ್ಲೆಯಲ್ಲಿ ಇದುವರೆಗೂ ಯೋಜನೆಯ ಅನುಷ್ಠಾನ ಸಮರ್ಪಕವಾಗಿ ಆಗಿಲ್ಲ. ಇದಕ್ಕೆ ಸೂಕ್ತ ಕಾರಣಗಳೊಂದಿಗೆ ವರದಿ ಸಲ್ಲಿಸಿ. ಯೋಜನೆಯ ವಿನ್ಯಾಸವೇ ಅಸಮರ್ಪಕವಾಗಿದ್ದು, ಇದರಲ್ಲಿ ಅಧಿಕಾರಿಗಳ ಲೋಪವೂ ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಯೋಜನೆಯ ಅನುಷ್ಠಾನಕ್ಕೆ ಶೀಘ್ರ ಕ್ರಮ ಕೈಗೊಳ್ಳಿ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸ್ಥಾಪಿಸಿರುವ 204 ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ 118 ಘಟಕಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, ಉಳಿದ ಘಟಕಗಳು ಸ್ಥಗಿತಗೊಂಡಿರುವ ಕುರಿತು ಜಿಲ್ಲಾ ಪಂಚಾಯತ ಸದಸ್ಯರು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳ ಪ್ರಸ್ತುತ ಕಾರ್ಯನಿರ್ವಣೆಯ ವಾಸ್ತವಾಂಶವುಳ್ಳ ಮಾಹಿತಿಯನ್ನು 15 ದಿನಗಳಲ್ಲಿ ಸಲ್ಲಿಸಬೇಕು. ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳು ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಪರಿಶೀಲಿಸಬೇಕು. ಮಾತ್ರವಲ್ಲದೆ ಜಿಲ್ಲಾ ಪಂಚಾಯತ್ ಸದಸ್ಯರು ತಮ್ಮ ಕ್ಷೇತ್ರದಲ್ಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಕುಡಿಯುವ ನೀರನ್ನು ಒದಗಿಸುವಲ್ಲಿ ವಿಫಲರಾದ ಅಧಿಕಾರಿ ಹಾಗೂ ಗುತ್ತಿಗೆದಾರರು ಯಾರೇ ಆದರೂ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಸರ್ಕಾರದಿಂದ ಅನುಮೋದನೆಗೊಂಡ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಕೆಲ ಕಾಮಗಾರಿಗಳು ಇನ್ನೂ ಆರಂಭವಾಗಿಲ್ಲ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಮತ್ತು ಗ್ರಾಮೀಣ ನೀರು ಸರಬರಾಜು ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆಯೂ ಕಾಮಗಾರಿ ವಿಳಂಬಕ್ಕೆ ಕಾರಣವಾಗಿರಬಹುದು. ಆದ್ದರಿಂದ ಈ ಎರಡೂ ಇಲಾಖೆಗಳನ್ನು ವಿಲೀನಗೊಳಿಸಿ ಕಾರ್ಯಗಳನ್ನು ಹಂಚಿಕೆ ಮಾಡಲಾಗುತ್ತದೆ. ಈ ಕುರಿತು ಶೀಘ್ರದಲ್ಲಿಯೇ ಸಕರ್ಾರದಿಂದ ಸುತ್ತೋಲೆ ಹೊರಡಿಸಲು ಕ್ರಮಕೈಗೊಳ್ಳಲಾಗುವುದು. ಆದರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಈಗಾಗಲೇ ವಹಿಸಿಕೊಂಡಿರುವ ಹೆಚ್ಚುವರಿ ಜವಾಬ್ದಾರಿಯನ್ನು ಮುಂದುವರೆಸಿ ಮತ್ತು ನಿಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸಿ ಎಂದು ಅವರು ತಿಳಿಸಿದರು.
ಅಧಿಕಾರಿಗಳು ಚುನಾಯಿತ ಪ್ರತಿನಿಧಿಗಳಿಗೆ ಸರಿಯಾದ ಮಾಹಿತಿಯನ್ನು ನೀಡಬೇಕು. ಕೇವಲ ಸಚಿವರ ಸಭೆ ಎಂದು ಅಂದಾಜು ಮಾಹಿತಿ ಸಿದ್ಧಪಡಿಸದೆ, ವಾಸ್ತವಾಂಶಗಳನ್ನು ಪರಿಶೀಲಿಸಿ ವರದಿ ನೀಡಬೇಕು. ಹಾಗೆಯೇ ಎಲ್ಲ ಚುನಾಯಿತ ಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡುವ ವೇಳೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ. ಆ ಸ್ಥಳದಲ್ಲಿಯೇ ಸಂಬಂಧಿಸಿದ ಕಾಮಗಾರಿಯ ಕುರಿತು ಮಾಹಿತಿ ಪಡೆದು ಅದನ್ನು ಸಂಬಂಧಿಸಿದ ಇಲಾಖೆಯ ಮೇಲಾಧಿಕಾರಿಗೆ ತಿಳಿಸಿ ಎಂದು ಅವರು ಹೇಳಿದರು.
ನರೇಗಾದಡಿ ನೂರು ದಿನಗಳ ಕಾಲ ನೀಡುತ್ತಿದ್ದ ಉದ್ಯೋಗವನ್ನು 150 ದಿನಗಳಿಗೆ ಹೆಚ್ಚಿಸಲಾಗಿದ್ದು, ಆದ್ದರಿಂದ ನಾವು ಕೆಂದ್ರ ಸಕಾರಕ್ಕೆ ಧನ್ಯವಾದವನ್ನು ಸಲ್ಲಿಸಬೇಕು. ನರೇಗಾದಲ್ಲಿ ಗಂಗಾವತಿ ಮತ್ತು ಕುಷ್ಟಗಿ ತಾಲ್ಲೂಕುಗಳಲ್ಲಿ ಹೆಚ್ಚಿನ ಗುರಿ ಸಾಧಿಸಿದ್ದು ಕೊಪ್ಪಳ ತಾಲ್ಲೂಕಿನಲ್ಲಿ ಯಾಕೆ ಕಡಿಮೆಯಾಗಿದೆ. ಅಧಿಕಾರಿಗಳು ತಾವೇ ನಿಗದಿ ಪಡಿಸಿದ ಗುರಿಯನ್ನು ನಿಗದಿತ ಅವಧಿಯಲ್ಲಿ ಮುಗಿಸದಿದ್ದರೆ ಹೇಗೆ ಎಂದು ಸಚಿವರು ಅಧಿಕಾರಿಗಳನ್ನು ಪ್ರಶ್ನಿಸಿದರು. ಸ್ವಚ್ಛ ಭಾರತ ಮಿಷನ್ ಯೋಜನೆ ಕೇಂದ್ರ ಸಕರ್ಾರದ ಯೋಜನೆಯಾಗಿದ್ದು, ಇದರಡಿ ಶೌಚಾಲಯಗಳ ನಿಮರ್ಾಣ ಹಾಗೂ ಸ್ವಚ್ಛತೆಯ ಕಡೆಗೆ ಗಮನ ಹರಿಸುವುದರ ಜೊತೆಗೆ ಕೆಲವೊಂದು ಶಾಲೆಗಳಲ್ಲಿ ಶೌಚಾಲಯಗಳಿಲ್ಲ ಎಂಬ ದೂರುಗಳಿದ್ದು, ಅವುಗಳನ್ನು ಪಿಡಿಒಗಳು ಪಟ್ಟಿ ಮಾಡಿ ನರೇಗಾದಲ್ಲಿ ಅವುಗಳ ನಿಮರ್ಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.
ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಕೊಪ್ಪಳ ತಾಲ್ಲೂಕಿನ ಹುಲಿಗಿಯಲ್ಲಿ ನಿಮರ್ಿಸಿರುವುದು ರಾಜ್ಯದಲ್ಲಿಯೇ ಮಾದರಿಯಾಗಿದೆ. ಇದು ಯಾವ ರೀತಿಯಲ್ಲಿ ಮಾಡಲಾಗಿದೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದಾಗ ಒಂಭತ್ತು ಗ್ರಾಮ ಪಂಚಾಯತಗಳು ಸೇರಿ ಈ ಘಟಕವನ್ನು ನಿಮರ್ಿಸಲಾಗಿದೆ. ಇದಕ್ಕೆ ಒಂಭತ್ತು ಗ್ರಾ.ಪಂ. ಗಳ ಅಧ್ಯಕ್ಷರು ಹಾಗೂ ಸದಸ್ಯರ ಸಮಿತಿ ಇದ್ದು, ಇದಕ್ಕೆ ವಿವಿಧ ಯೋಜನೆಗಳ ಮೂಲಕ ಹಾಗೂ ಜಿಲ್ಲೆಯಲ್ಲಿರುವ ಉದ್ದಿಮೆಗಳಿಂದಲೂ ಧನ ಸಹಾಯವನ್ನು ಪಡೆಯಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ತಿಳಿಸಿದರು.
ಕೊಪ್ಪಳ ಜಿಲ್ಲೆಯು ಸ್ವಚ್ಛ ಭಾರತ್ ಮಿಷನ್ ಯೋಜನೆಯಲ್ಲಿ ಮಾದರಿ ಕೆಲಸ ಮಾಡುತ್ತಿದ್ದು, ಅಧಿಕಾರಿಗಳು ಮುಂದಿನ ಸಭೆಗೆ ಬರುವಾಗ ಇನ್ನೂ ಹೆಚ್ಚಿನ ಪ್ರಗತಿ ತೋರಿಸಬೇಕು. ಯಾವುದೇ ಕಾರಣಕ್ಕೂ ಸಭೆಗೆ ಬರುವಾಗ ತಪ್ಪು ಮಾಹಿತಿ ನೀಡುವುದಾಗಲೀ, ವಿನಾಕಾರಣ ನೆಪ ಹೇಳಿದರೆ ಅಂತವರ ವಿರುದ್ಧ ನಿದರ್ಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಚ್. ವಿಶ್ವನಾಥರೆಡ್ಡಿ, ಜಿಲ್ಲಾ ಪಂಚಾಯತ್ ಮಖ್ಯಕಾರ್ಯನಿವರ್ಾಹಕ ಅಧಿಕಾರಿ ರಘುನಂದನ್ ಮೂತರ್ಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ನೇಹಾ ಜೈನ್, ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾ. ಇಲಾಖೆಯ ಆಯುಕ್ತರಾದ ಅನಿರುದ್ಧ ಶ್ರವಣ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಮುಖ್ಯ ಇಂಜಿನಿಯರ್ ಪ್ರಕಾಶ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಜಯರಾಂ, ಶಾಸಕರಾದ ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ ಹಾಗೂ ಬಸವರಾಜ ದಢೇಸೂಗೂರು, ಜಿಲ್ಲಾ ಪಂಚಾಯತ್ ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.