ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಸಂಕಷ್ಟಕ್ಕೆ ಸ್ಪಂದಿಸಿದ ಅಪ್ಪಾಜಿ ನಾಡಗೌಡ
Appaji Nad Gowda responded to the distress by receiving the complaints of the villagers
ಮುದ್ದೇಬಿಹಾಳ 25 : "ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಸರ್ಕಾರ. ಅಧಿಕಾರಕ್ಕೆ ಬಂದು ಕೇವಲ 11 ದಿನಗಳಲ್ಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನಸಾಮಾನ್ಯರ ಆರ್ಥಿಕ ಸಬಲೀಕರಣಕ್ಕೆ ಶ್ರಮಿಸುತ್ತಿದೆ," ಎಂದು . ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಭುನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ(ಅಪ್ಪಾಜಿ) ಹೇಳಿದರು.ತಾಲ್ಲೂಕಿನ ಅಡವಿ ಸೋಮನಾಳ ಗ್ರಾ ಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಾದ ಚವನಭಾವಿ,ಅಡವಿ ಸೋಮನಾಳ, ಅಡವಿ ಹುಲಗಬಾಳ, ಡೊಂಕಮಡು ಗ್ರಾಮದಲ್ಲಿ ಬುಧವಾರ ಆಯೋಜಿಸಲಾಗಿದ್ದ ಜನಸಂಪರ್ಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಸಭೆಗೂ ಮುನ್ನ ಶಾಸಕರು ಗ್ರಾಮದ ಪ್ರತಿ ಮನೆಗೆ ಭೇಟಿ ನೀಡಿ, ಗ್ಯಾರಂಟಿ ಯೋಜನೆಗಳ ಲಾಭ ತಲುಪುತ್ತಿದೆಯೇ ಎಂದು ಖುದ್ದು ವಿಚಾರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು ರಂಗೋಲಿ ಬಿಡಿಸುವ ಮೂಲಕ ಶಾಸಕರನ್ನು ಬರಮಾಡಿಕೊಂಡಿದ್ದು ವಿಶೇಷವಾಗಿತ್ತು. ಸಿದ್ದರಾಮಯ್ಯ ನವರ ನೇತೃತ್ವದ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, "ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಬಡವರ ಪರವಾಗಿವೆ ಜನರ ಆಶಿರ್ವಾದ ಸಹಕಾರದಿಂದ ಯಶಸ್ವಿಯಾಗಿ ನಡೆಯುತ್ತಿವೆ. ಈ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ವಾರ್ಷಿಕ ಸುಮಾರು 70 ಸಾವಿರದಿಂದ 1 ಲಕ್ಷ ರೂಪಾಯಿವರೆಗೆ ನೇರ ಆರ್ಥಿಕ ನೆರವು ಸಿಗುತ್ತಿದೆ.
ಇದು ಜನರ ಜೀವನ ಮಟ್ಟವನ್ನು ಸುಧಾರಿಸಿದೆ," ಎಂದರು. ಜನ ಸಂಪರ್ಕ ಸಭೆಯಲ್ಲಿ ಗ್ರಾಮಸ್ಥರು ಸಲ್ಲಿಸಿದ ಅಹವಾಲುಗಳಿಗೆ ಶಾಸಕರು ತಕ್ಷಣವೇ ಸ್ಪಂದಿಸಿದರು: ನೀರಾವರಿ ಸಮಸ್ಯೆ: ಎಲ್.ಬಿ.ಸಿ ಕಾಲುವೆ ನೀರು ಸರಿಯಾಗಿ ತಲುಪುತ್ತಿಲ್ಲ ಎಂಬ ರೈತರ ದೂರಿಗೆ ಸ್ಪಂದಿಸಿದ ಶಾಸಕರು, ಸ್ಥಳದಲ್ಲೇ ಕೆ.ಬಿ.ಜೆ.ಎನ್.ಎಲ್. ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಸರಿಪಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರಲ್ಲದೆ ಸಾರ್ವಜನಿಕರ ಆರೋಪದಂತೆ ಈ ಭಾಗದಲ್ಲಿ ಸುಮಾರು 30 ಮನೆಗಳ ಮೇಲೆ ಹಾದುಹೋಗಿರುವ ಅಪಾಯಕಾರಿ ವಿದ್ಯುತ್ ತಂತಿಗಳು ಹಾಗೂ ಹಳೆಯ ಟಿಸಿ ಕಂಬಗಳನ್ನು ತೆರವುಗೊಳಿಸಲು ಹೆಸ್ಕಾಂ ಅಧಿಕಾರಿ ಪಿ.ಡಿ. ಗುರಡ್ಡಿ ಅವರಿಗೆ ಆದೇಶಿಸಿದರು.
ಚವನಭಾವಿಯಿಂದ ಬಂಡೇಶ್ವರ ಮಠದವರೆಗೆ ರಸ್ತೆ ಹಾಗೂ ಸೇತುವೆ ನಿರ್ಮಾಣದ ಬೇಡಿಕೆಗೆ ಉತ್ತರಿಸಿದ ಅವರು, "ಸೇತುವೆ ಈಗಾಗಲೇ ಮಂಜೂರಾಗಿದೆ, ಶೀಘ್ರದಲ್ಲೇ ರಸ್ತೆ ಕಾಮಗಾರಿ ಆರಂಭಿಸಲಾಗುವುದು," ಎಂದು ಭರವಸೆ ನೀಡಿದರು.ಈ ವೇಳೆ ಪಂಚ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ ಮಾತನಾಡಿ, "ಗ್ರಾಮಗಳಲ್ಲಿ ರಂಗೋಲಿ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಒಂದು ವೇಳೆ ಯಾರಿಗಾದರೂ ಯೋಜನೆಗಳ ಲಾಭ ದೊರೆಯದಿದ್ದರೆ ಕೂಡಲೇ ಮುದ್ದೇಬಿಹಾಳದ ತಾ.ಪಂ. ಕಚೇರಿಯನ್ನು ಸಂಪರ್ಕಿಸಬೇಕು," ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಉಪಾಧ್ಯಕ್ಷ ಲಕ್ಷ್ಮಣ ಚವ್ಹಾಣ, ಸದಸ್ಯರಾದ ಸಂಗು ಚಲವಾದಿ,ಸ್ವರಸ್ವತಿ ಪೀರಾಪೂರ, ಸುಜಾತಾ ಸಿಂದೆ,ಹಣಮಂತ ಕುರಿ, ಬಸವರಾಜ ಚೀನಿವಾರ, ರಾಮಣ್ಣ ರಾಜನಾಳ,ಬಿಇಓ ಬಿ ಎಸ್ ಸಾವಳಗಿ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ ಎಂ ಬೆಳಗಲ್ಲ, ತಾ ಪಂ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಕೋರಿ,ಆರ್ ಎಸ್ ಹಿರೇಗೌಡರ, ಸಮಾಜ ಕಲ್ಯಾಣ ಅಧಿಕಾರಿ ಬಸಂತಿ ಮಠ,ಶಿವಾನಂದ ಮೇಟಿ, ಎಸ್ ಬಿ ತಿವಾರಿ,ಕೆ ಬಿಜೆಎನ್ ಎಲ್ ಆಲಮಟ್ಟಿ ಅಧಿಕಾರಿ ಎ ಯು ಬಾಗವಾನ, ಬಿ ಎಂ ಸಾತಿಹಾಳ,ಎಸಿಡಿಪಿಒ ಶರಣಮ್ಮ ದೇಸಾಯಿ, ಅಂಗನವಾಡಿ ಮೇಲ್ವಿಚಾರಕಿ ಶಾರದಾ ಪೂಜಾರಿ,ಪಿಡಿಓ ನಿರ್ಮಲಾ ತೋಟದ, ಕಾರ್ಯದರ್ಶಿ ಬಸನಗೌಡ ಬಿರಾದಾರ, ನಾಲತವಾಡ ಶಾಖಾ ಹೆಸ್ಕಾಂ ಅಧಿಕಾರಿ ಪಿ ಡಿ ಗುರಡ್ಡಿ, ಕಂದಾಯ ನೀರೀಕ್ಷೆಕ ವೆಂಕಟೇಶ್ ಅಂಬಿಗೇರ, ಗ್ರಾಮಾಡಳಿತಾಧಿಕಾರಿ ಶಿವಶರಣ ಕುಂಬಾರ,ಗ್ರಾ ಪಂ ಸಿಬ್ಬಂದಿಗಳು,ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಸೇರಿದಂತೆ ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 