ಅಪ್ಪಣ್ಣ ಹಂಜೆ ಅವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ
Appanna Hanje receives Sahitya Siri Award
ಗದಗ 14: ಕರ್ನಾಟಕದ ಇತಿಹಾಸ, ಧರ್ಮ, ಸಾಹಿತ್ಯ, ವಾಸ್ತುಕಲೆ, ಶಿಲ್ಪಕಲೆ, ಶಾಸನ, ಸಂಸ್ಕೃತಿ ಮುಂತಾದ ಕ್ಷೇತ್ರಗಳಲ್ಲಿ ಸಂಶೋಧನೆ, ಅಧ್ಯಯನ, ಪ್ರಕಟಣೆಯಲ್ಲಿ ತೊಡಗಿರುವ ಹುಲಕೋಟಿಯ ಶ್ರೀ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪ್ರಾಧ್ಯಾಪಕರಾದ ಡಾ. ಅಪ್ಪಣ್ಣ ಹಂಜೆ ಅವರು ರಾಜ್ಯಮಟ್ಟದ ‘ಸಾಹಿತ್ಯ ಸಿರಿ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಳಸ ಶ್ರೀ 1008 ಭಗವಾನ ಚಂದ್ರನಾಥಸ್ವಾಮಿ ಬಸದಿ ಜೀರ್ಣೋದ್ಧಾರ ಸಮಿತಿ ಸಂಯುಕ್ತಾಶ್ರಯದಲ್ಲಿ ಮೇ 18ರಂದು ಕಳಸದ ಕೆಳಂಗಡಿಯಲ್ಲಿರುವ ಶ್ರೀ ಚಂದ್ರನಾಥಸ್ವಾಮಿ ಬಸದಿಯ ಪಂಚಕಲ್ಯಾಣ ಹಾಗೂ ನೂತನ ಬಸದಿಯ ಲೋಕಾರೆ್ಣ ಮತ್ತು ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ ರಾಜ್ಯ ್ರ್ರಥಮ ಜೈನ ಸಾಹಿತ್ಯ ಸಮ್ಮೇಳನದಲ್ಲಿ ಡಾ. ಅಪ್ಪಣ್ಣ ಹಂಜೆ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ ತಿಳಿಸಿದ್ದಾರೆ.
ಪ್ರಶಸ್ತಿಗೆ ಭಾಜನರಾದ ಡಾ. ಅಪ್ಪಣ್ಣ ಹಂಜೆ ಅವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಪ್ರಾಚಾರ್ಯರು, ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಗದಗ ಜಿಲ್ಲೆಯ ಸಾಹಿತಿಗಳು, ಸಂಶೋಧಕರು, ಗದಗ ಜಿಲ್ಲಾ ದಿಗಂಬರ ಜೈನ ಸಂಘದ ಪದಾಧಿಕಾರಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 