ಲೋಕದರ್ಶನವರದಿ
ಶಿಗ್ಗಾವಿ : ತಾಲೂಕಾ ಆಡಳಿತ ಹಾಗೂ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಇದೇ ಅ.3ರಂದು ಶನಿವಾರ ಶಿವಶರಣ ಹಡಪದ ಅಪ್ಪಣ್ಣನವರ 885 ನೇ ಜಯಂತ್ಯೋತ್ಸವ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾಥರ್ಿಗಳಿಗೆ ಪ್ರತಿಭಾ ಪುರಸ್ಕಾರ ವೀರ ಸೈನಿಕರಿಗೆ ಹಾಗೂ ಪ್ರಗತಿಪರ ರೈತರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9 ಘಂಟೆಗೆ ಹುಲಗೂರ ರಸ್ತೆಯಲ್ಲಿನ ದ್ಯಾಮವ್ವನ ಪಾದಗಟ್ಟಿಯಿಂದ ಸಂಗನಬಸವ ಮಂಗಲ ಭವನದ ವರೆಗೆ ನಡೆಯುವ ಶರಣ ಹಡಪದ ಅಪ್ಪಣ್ಣನವರ ಭಾವಚಿತ್ರದ ಭವ್ಯ ಮೆರವಣಿಗೆಗೆ ತಂಗಡಗಿಯ ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳು ಚಾಲನೆ ನೀಡುವರು, ವೇದಿಕೆಯ ಕಾರ್ಯಕ್ರಮದ ಸವಿರಕ್ತಮಠದ ಸಂಗನಬಸವ ಶ್ರೀಗಳು ವಹಿಸಲಿದ್ದು ಉದ್ಘಾಟನೆಯಯನ್ನು ಶಾಸಕ ಬಸವರಾಜ ಬೊಮ್ಮಾಯಿ ನೆರವೇರಿಸುವರು ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷ ಶಂಕರಪ್ಪ ಮಡ್ಲಿಕರ ವಹಿಸುವರು, ಗಣ್ಯವಕ್ತಿ ಶಂಕ್ರಗೌಡ್ರ ಪಾಟೀಲ, ಮಾಜಿ ಸಂಸದ ಮಂಜುನಾಥ ಕುನ್ನೂರ, ಮಾಜಿ ಶಾಸಕ ಸಯ್ಯದ್ ಅಜ್ಜಂಪೀರ್ ಎಸ್ ಖಾದ್ರಿ, ಭಾರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ, ಮಾಜಿ ವಿ.ಪ ಸದಸ್ಯ ಸೊಮಣ್ಣ ಬೇವಿನಮರದ ಸೇರಿದಂತೆ ತಾಲೂಕಿನ ಜನಪ್ರತಿನಿಧಿಗಳು, ಹಡಪದ ಸಮಾಜದ ರಾಜ್ಯ ಹಾಗೂ ಜಿಲ್ಲಾ ಮತ್ತು ವಿವಿಧ ತಾಲೂಕಿನ ಅದ್ಯಕ್ಷರುಗಳು, ಮುಖಂಡರು, ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದು ಸಮಾಜದ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಪ್ರಧಾನ ಕಾರ್ಯದಶರ್ಿ ಮಲ್ಲಿಕಾಜರ್ುನ ಹಡಪದ ಪ್ರಕಟಣೆಗೆ ತಿಳಿಸಿದ್ದಾರೆ.