ದಲಿತ ಕುಟುಂಬದ ಮೇಲೆ ಮಾರಣಾಂತಿಕ ಹಲ್ಯೆ ಖಂಡಿಸಿ ಮನವಿ
Appeal condemning deadly attack on Dalit family
ಲೋಕದರ್ಶನ ವರದಿ
ಹುಬ್ಬಳ್ಳಿ 24: ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಗರ್ಭೀಣಿ ಯುವತಿ ಮಾನ್ಯಳ ಮರ್ಯಾದೆಗೇಡು ಹತ್ಯೆ ದಲಿತ ಕುಟುಂಬದ ಮೇಲೆ ಮಾರಣಾಂತಿಕ ಹಲ್ಯೆ ಖಂಡಿಸಿ, ಎಲ್ಲಾ ತಪ್ಪತಸ್ಥರನ್ನು ಬಂದಿಸಿ ಕಠಿಣ ಶಿಕ್ಷೆ ನೀಡಲು ಆಗ್ರಹಿಸಿ ಹಾಗೂ ಮರ್ಯಾದೆಗೇಡು ಹತ್ಯೆ ನಿಷೇಧ ಕಠಿಣ ಕಾನೂನು ತರಲು ಒತ್ತಾಯಿಸಿ ಇಂದು ಧಾರವಾಡದ ವಿವಿದ ಜನಪರ ಸಂಘಟನೆಗಳಿಂದ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ, ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ಪ್ರಭಾವತಿ ದೇಸಾಯಿ, ಸಾಧನಾ ಮಾನವ ಹಕ್ಕುಗಳ ವೇದಿಕೆಯ ಮುಖ್ಯಸ್ಥೆ ಡಾ. ಇಸಾಬೆಲ್ಲಾ ಝೇವಿಯರ್, ಖ್ಯಾತ ಕಲಾವಿದೆ ವಿಶ್ವೇಶ್ವರಿ ಹಿರೇಮಠ, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ನಾಗರಾಜ ಚಲವಾದಿ, ರೈತ ಮುಖಂಡ ರವಿರಾಜ ಕಂಬಳಿ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಾತನಾಡಿದರು.
ಪ್ರತಿಭಟನೆಯಲ್ಲಿ ಒಂಟಿ ಮಹಿಳೆಯರ ಸಂಘದ ಜಿಲ್ಲಾಧ್ಯಕ್ಷೆ ಮಂಜುಳಾ ಪವಾರ, ಪ್ರಮಿಳಾ ಜಕ್ಕಣ್ಣವರ, ಬಿ.ಎನ್. ಪೂಜಾರಿ, ಲಿನೆಟ್ ಡಿಸೇಲ್ವ, ಸುಹಾಸಿನಿ, ಎ.ಎಂ. ಖಾನ್, ಎಚ್.ಜಿ. ದೇಸಾಯಿ, ಸಂಗೀತಾ ಗೌಡ, ಗುರುಸಿದ್ದಪ್ಪ ಅಂಬಿಗೇರ, ರಾಘವೇಂದ್ರ ಪಾಟೀಲ, ಪರಶುರಾಮ ಮಂದಾರ, ಶ್ರೀನಿವಾಸ ನಾಯಕ, ಸರ್ವೇಶ ಕಂಬದಾಳ ಮುಂತಾದವರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 