ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಒತ್ತಾಯಿಸಿ ಮನವಿ
Appeal demanding a ban on the sale of illegal liquor
ವಿಜಯಪುರ 16: ದಾಬಾಗಳಲ್ಲಿ ಮತ್ತು ಹಳ್ಳಿಗಳಲ್ಲಿ ತಾಂಡಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟುವಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾಧ್ಯಕ್ಷರಾದ ಕೃಷ್ಣಾ ಭೋಸಲೆ ಮಾತನಾಡಿ, ಸಿಂದಗಿ ರಸ್ತೆ ಇಂಡಿ ರಸ್ತೆ ಅಥಣಿ ರಸ್ತೆ ಬೆಂಗಳೂರು ರಸ್ತೆ ಹಾಗೂ ಕೋಲಾರ ರಸ್ತೆ ಅಕ್ಕ ಪಕ್ಕದಲ್ಲಿ ಇರುವ ದಾಬಾಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದಲೇ ರಸ್ತೆ ಅಪಘಾತ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಲೇ ಇದೇ ಇದರಿಂದ ಕುಡಿದ ಅಮಲಿನಲ್ಲಿ ಗಲಭೆಗಳು ತುಂಬಾನೆ ನಡೆಯುತ್ತಾ ಇರುತ್ತವೆ. ಸಾಮಾನ್ಯ ಜನರಿಗೆ ತುಂಬಾನೆ ತೊಂದರೆ ಆಗುತ್ತಿದೆ ಹಾಗೂ ವಿಜಯಪುರ ತಾಲ್ಲೂಕಿನಲ್ಲಿ ಸುತ್ತಲಿನ ಗ್ರಾಮದಲ್ಲಿ ಸರ್ಕಾರಿ ಶಾಲೆಗಳ ಪಕ್ಕ ಹಾಗೂ ದೇವಾಲಯಗಳ ಹತ್ತಿರ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾರುತಿದ್ದಾರೆ. ಸಣ್ಣ ವಯಸ್ಸಿನ ಮಕ್ಕಳ ಭವಿಷದ ಮೇಲೆ ಬಹಳಷ್ಟು ಕೆಟ್ಟ ಪರಿಣಾಮ ಬೀರುತ್ತಿದೆ. ಇದರ ಪರಿಣಾಮ ಬಡವರ ಮಕ್ಕಳ ರೈತರ ಮಕ್ಕಳ ಜೀವನ ಬೀದಿಗೆ ಬಂದು ನಿಲ್ಲುವ ವಾತಾವರಣ ಸೃಷ್ಟಿ ಆಗಿದೆ ಹಾಗೂ ತಾಂಡಗಳಿನ್ನು ಸದ್ದು ಇಲ್ಲದೆ ಮಧ್ಯ ಮಾರಾಟ ನಡೆಯುತ್ತವೆ. ಇದರಲ್ಲಿ ಗ್ರಾಮದ ಸಂಬಂಧಿಸಿದ ಅಧಿಕಾರಿಗಳು ಆಗಲಿ ಅಬಕಾರಿ ಅಧಿಕಾರಿಗಳು ಆಗಲ್ಲಿ ಕಣ್ಣಿಗೆ ಕಂಡರೂ ಕಾಣದಂತೆ ಇರುವುದು ಯಾಕೆ ಅಂತ ಗೊತ್ತಾಗುತ್ತಿಲ್ಲ. ಪ್ರತಿ ದಿನ ರಾತ್ರಿ ಹಗಲು ದಾಬಾಗಳ ಮೇಲೆ ಕಣ್ಣಿಡಬೇಕು. ದಾಬಾಗಳ ಜೊತೆ ಕೆಲ ಪೊಲೀಸ್ ಬೀಟಗಳು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಇದರಿಂದ ದಾಬಾದವರ ರಾಜಾರೋಶವಾಗಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಅಬಕಾರಿ ಇಲಾಖೆಯವರಿಗೆ ಸಾಕಷ್ಟುಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಲ್ಲಿ ಅಬಕಾರಿ ಇಲಾಖೆಯವರು ಶ್ಯಾಮೀಲಾಗಿದ್ದಾರೆ. ಇದನ್ನು ಗಂಭೀರ ಪರಿಗಣಿಸಿಬೇಕು. ಕೂಡಲೇ ದಾಬಾಗಳ ಮೇಲೆ ದಾಳಿ ಮಾಡಲು ವಿಶೇಷ ತಂಡವನ್ನು ರಚಿಸಿ ಇದಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಮಂಜುಳಾ ವಾಲಿ, ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ ಗಳವೆ, ಜಿಲ್ಲಾ ಅಧ್ಯಕ್ಷರಾದ ಸುಮಿತ್ರಾ ಪಟ್ಟಣಶೆಟ್ಟಿ, ಎಸ್ಸಿ ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಯಮನಪ್ಪ ಬೂದಿಹಾಳ, ಬಸವನ ಬಾಗೇವಾಡಿ ತಾಲೂಕಾ ಅಧ್ಯಕ್ಷರಾದ ಸಿದ್ದಮ್ಮ ಹಿರೂರ, ತಾ ಉಪಾಧ್ಯಕ್ಷರಾದ ಶಶಿಕಲಾ ಹಡಪದ, ಅಟೋ ಘಟಕದ ಜಿಲ್ಲಾ ಅಧ್ಯಕ್ಷ ಉಮೇಶ ರುದ್ರಮಣಿ, ಯುವ ಘಟಕ ಜಿಲ್ಲಾಧ್ಯಕ್ಷ ರಾಜು ಬಿಸೆ, ಜಿಲ್ಲಾ ಮುಖಂಡರಾದ ಮಾದೇವ ಢಗೆ, ಜಿಲ್ಲಾ ಮುಖಂಡರಾದ ರಾಜು ಕೋಟ್ಯಾಳ, ತಾಲೂಕಾ ಅಧ್ಯಕ್ಷರಾದ ವಿಠ್ಠಲ ತಳವಾರ, ಜಿಲ್ಲಾ ಮುಖಂಡರಾದ ಸಕಾರಾಮ ಪವಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 