ಮಹಾನಗರದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಲು ಆಗ್ರಹಿಸಿ ಮನವಿ
Appeal demanding priority for Kannada language in the metropolis
ಬೆಳಗಾವಿ 16: ಬೆಳಗಾವಿ ಮಹಾನಗರ ಪಾಲಿಕೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ 2022ರನ್ನು ಜಾರಿಗೊಳಿಸುತ್ತಿರುವುದನ್ನು ಸಹಿಸದ ಇಲ್ಲಿ ಕೆಲಸ ಮಾಡುತ್ತಿರುವ ಕೆಲ ಸಿಬ್ಬಂದಿ ಮಹಾರಾಷ್ಟ್ರ ಏಕಿಕರಣ ಸಮಿತಿಯವರಿಗೆ ಮಾಹಿತಿ ನೀಡುತ್ತಿದ್ದಾರೆ. ಅಂತಹ ದ್ರೋಹಿಗಳನ್ನು ಕಂಡು ಹಿಡಿದು ಬೇರೆ ಪಾಲಿಕೆಗೆ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿ ದಿ. 16ರಂದು ಕಿತ್ತೂರು ಕರ್ನಾಟಕ ಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ, ಮಹಾನಗರ ಪಾಲಿಕೆ ಮೇಯರ-ಉಪಮೇಯರ ಮತ್ತು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಮನವಿಯಲ್ಲಿ ಬೆಳಗಾವಿಯಲ್ಲಿ ಶೇ. 60ರಷ್ಟು ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೂಚಿಸಿದಂತೆ ಮಹಾನಗರ ಪಾಲಿಕೆಯ ಆಯುಕ್ತರು ಮೇಯರ ಹಾಗೂ ಉಪ ಮೇಯರ ವಾಹನಗಳಿಗೆ ಕನ್ನಡ ನಾಮಫಲಕ ಅಳವಡಿಸಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕನ್ನಡದಲ್ಲಿ ನಾಮಫಲಕ ಹಾಗೂ ಅಂಕಿಸಂಖ್ಯೆಗಳನ್ನು ಬಳಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಸೇನೆಯ ಅಧ್ಯಕ್ಷ ಮಹಾದೇವ ತಳವಾರ ಮಾತನಾಡಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದವರು ಇತ್ತೀಚೆಗೆ ಬೆಳಗಾವಿಗೆ ಆಗಮಿಸಿ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯಲ್ಲಿ ಸಭೆ ನಡೆಸಿ ಬೆಳಗಾವಿಯಲ್ಲಿ ಶೇ. 60 ರಷ್ಟು ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಸೂಚಿಸಿದ್ದರು. ಅದರಂತೆ ಮಹಾನಗರ ಪಾಲಿಕೆಯ ಆಯುಕ್ತರು ಮೇಯರ ಹಾಗೂ ಉಪ ಮೇಯರ ವಾಹನಗಳಿಗೆ ಕನ್ನಡ ನಾಮಫಲಕ ಅಳವಡಿಸಿದ್ದಾರೆ ಅದನ್ನು ವಿರೋಧಿಸಿ ಕೆಲವೊಂದು ಎಂಇಎಸ್ ನವರು ಹೋಗಿ ಕನ್ನಡ ಕಡ್ಡಾಯಗೊಳಿಸುವುದನ್ನು ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಮರಾಠಿ ಭಾಷೆಗೆ ಆದ್ಯತೆ ನೀಡಬಾರದು ಎಂದು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಳ್ಳಲಾಗಿದೆ ಎಂದರು.
ಸಂತೋಷ ಕಳ್ಳಿಮನಿ, ಮಾರುತಿ ದೊಡ್ಡಲಕ್ಕಾಪ್ಪಗೋಳ ದೇವೇಂದ್ರ ತಳವಾರ, ವಾಸು ಬಸನಾಯ್ಕರ, ಭರಮಪ್ಪಾ ಕಾಂಬಳೆ, ಶಶಿಕಾಂತ ಅಷ್ಟೇಕರ, ಸಿದ್ರಾಯಿ ನಾಯಿಕ ಸೇರಿದಂತೆ ಅನೇಕರು ಹಾಜರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 