ಕೊಳಗೇರಿ ಪ್ರದೇಶಗಳ ವಸತಿ ಮತ್ತು ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಲು ಒತ್ತಾಯಿಸಿ ಮನವಿ
Appeal demanding priority for housing and basic facilities in slum areas
ಗದಗ 5: ಗದಗ-ಬೆಟಗೇರಿ ನಗರದಲ್ಲಿಯ ಕೊಳಗೇರಿ ಪ್ರದೇಶಗಳು ಸ್ಲಂ ಘೋಷಣೆಯಾಗಿ ದಶಕಗಳು ಕಳೆದರು ಸಹ ಈ ವರೆಗೊ ಅಭಿವೃದ್ಧಿಯಾಗದೇ ಸೌಲಭ್ಯ ವಂಚಿತ ಪ್ರದೇಶಗಳಾಗಿವೆ.
ನಗರದ ಕೊಳಗೇರಿ ಪ್ರದೇಶಗಳ ಅಭಿವೃದ್ಧಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಆದ ಕಾರಣ ತಕ್ಷಣ ಗದಗ-ಬೆಟಗೇರಿ ನಗರದ ಕೊಳಗೇರಿ ಪ್ರದೇಶಗಳ ವಸತಿ ಮತ್ತು ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಬೇಕೆಂದು ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು ಕರ್ನಾಟಕ ಕೊಳಗೇರಿ ಅಭಿವೃಧ್ದಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಮನವಿ ನೀಡಿ ಒತ್ತಾಯಿಸಿದ್ದಾರೆ. ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ.ಆರ್.ಮಾನ್ವಿ ಮಾತನಾಡಿ ಗದಗ-ಬೆಟಗೇರಿ ನಗರದಲ್ಲಿ ಸುಮಾರು 48 ಕೊಳಚೆ ಪ್ರದೇಶಗಳನ್ನು ಸ್ಲಂ ಕಾಯ್ದೆಡಿಯಲ್ಲಿ ಘೋಷಣೆ ಮಾಡಲಾಗಿದೆ, ಇನ್ನು ಸುಮಾರು 20 ಕ್ಕೊ ಹೆಚ್ಚು ಗುಡಿಸಲು ಪ್ರದೇಶಗಳನ್ನು ಘೋಷಣೆ ಮಾಡಬೇಕಾಗಿದೆ, ಈ ಹಿಂದೆ ಘೋಷಣೆ ಮಾಡಲಾಗಿರುವ ಕೊಳಗೇರಿ ಪ್ರದೇಶಗಳ ಅಭಿವೃಧ್ದಿಗಾಗಿ ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ನಿರಂತರ ಹೋರಾಟಗಳನ್ನು ನಡೆಸಲಾಗುತ್ತದೆ. ಅಘೋಷಿತ ಗುಡಿಸಲು ಪ್ರದೇಶಗಳನ್ನು ಘೋಷಣೆಗಾಗಿ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಗಿದೆ. ಆದರೆ ಈ ವರೆಗೊ ಸ್ಲಂ ಜನರ ಬೇಡಿಕೆಗಳಿಗೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಸ್ಲಂ ಬೋರ್ಡ ಅಧಿಕಾರಿಗಳು ಮನವಿ ಸ್ವಿಕರಿಸಿದ ನಂತರ ಸಮಿತಿ ಪದಾಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು. ಸಭೆಯಲ್ಲಿ ಗದಗ-ಬೆಟಗೇರಿ ನಗರದ ಕೊಳಗೇರಿ ಪ್ರದೇಶಗಳಲ್ಲಿ ವಸತಿ, ನಾಗರೀಕ ಸೌಲಭ್ಯ, ಹಕ್ಕುಪತ್ರ, ನೋಂದಣೆ ಪ್ರಕ್ರಿಯ ನಡೆಸುವುದು, ಸ್ಲಂಗಳಲ್ಲಿ ಮಹಿಳೆಯರ ಶೌಚಾಲಯಗಳ ನಿರ್ಮಾಣ, ವಸತಿ ಯೋಜನೆಯಲ್ಲಿ ನಡೆಯುತ್ತಿರುವ ಅವವ್ಯಹಾರ ಕುರಿತು ಚರ್ಚೆ ನಡೆಸಲಾಗಿದೆ. ಸ್ಲಂ ಬೋರ್ಡ ಅಧಿಕಾರಿಗಳು ಮಾತನಾಡಿ ಸ್ಲಂ ಜನರ ಬೇಡಿಕೆಗಳ ಕುರಿತು ಸುಧಿರ್ಘವಾಗಿ ಚರ್ಚೆ ನಡೆಸಲಾಗಿದೆ. ಸ್ಲಂ ಜನರ ಹಕ್ಕೋತ್ತಾಯಗಳಿಗೆ ಹಂತ-ಹಂತವಾಗಿ ಕೆಲಸ ಮಾಡಲಾಗುವುದೆಂದು ಭರವಸೆ ನೀಡಿದರು.
ಗದಗ ಜಿಲ್ಲಾ ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಸಮಿತಿ ಮುಖಂಡರಾದ ಇಬ್ರಾಹಿಂ ಮುಲ್ಲಾ, ಮೆಹರುನಿಸಾ ಡಂಬಳ, ಶರಣಪ್ಪ ಸೂಡಿ, ಮೌಲಾಸಾಬ ಗಚ್ಚಿ, ಮೆಹಬೂಬಸಾಬ ಬಳ್ಳಾರಿ, ಮಂಜುನಾಥ ಶ್ರೀಗಿರಿ, ಮೈಮುನ ಬೈರಕದಾರ. ಖಾಜಾಸಾಬ ಇಸ್ಮಾಯಿಲನವರ, ಸಾಕ್ರುಬಾಯಿ ಗೋಸಾಯಿ, ಸಲೀಂ ಹರಿಹರ, ಖಾಜಾಸಾಬ ಬಳ್ಳಾರಿ, ವೆಂಕಟೇಶ ಬಿಂಕದಕಟ್ಟಿ, ರಿಜ್ವಾನ ಮುಲ್ಲಾ, ಮಕ್ತುಮಸಾಬ ಮುಲ್ಲಾನವರ, ದಾದು ಗೋಸಾವಿ ಹಾಗೂ ಮುಂತಾದ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 