ಯುವ ಪರಿವರ್ತನೆ ಯಾತ್ರೆಯ ಹಕ್ಕೊತ್ತಾಯಗಳನ್ನು ಸರ್ಕಾರ ಈಡೇರಿಸುವಂತೆ ಆಗ್ರಹಿಸಿ ಮನವಿ
Appeal demanding that the government fulfill the demands of the Youth Transformation Movement
ಲೋಕದರ್ಶನ ವರದಿ
ಯುವ ಪರಿವರ್ತನೆ ಯಾತ್ರೆಯ ಹಕ್ಕೊತ್ತಾಯಗಳನ್ನು ಸರ್ಕಾರ ಈಡೇರಿಸುವಂತೆ ಆಗ್ರಹಿಸಿ ಮನವಿ
ಗದಗ 07: ಕರ್ನಾಟಕ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷವನ್ನು ಸರಕಾರದ ಗಮನಕ್ಕೆ ತರಲು ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಾಥಾ ಹಮ್ಮಿಕೊಂಡು, ರಾಜ್ಯದಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ಉದ್ಯೋಗ, ಸಬಲೀಕರಣ ಮುಂತಾದ ಕ್ಷೇತ್ರಗಳಲ್ಲಿ ಅಭಿವೃದ್ಧಿಯನ್ನು ಕೈಗೊಳ್ಳಲು ಕರ್ನಾಟಕ ರಾಜ್ಯದ ಬೀದರಿಂದ ಪ್ರಾರಂಭಗೊಂಡು ಬೆಂಗಳೂರಿನ ವಿಧಾನಸೌಧದವರೆಗೂ 1200 ಕಿ.ಮೀ. "ಯುವ ಪರಿವರ್ತನೆ ಯಾತ್ರೆ"ಯನ್ನು ಜನಸಾಮಾನ್ಯರ ವೇದಿಕೆ ವತಿಯಿಂದ ಗದಗ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಜನಸಾಮಾನ್ಯರ ವೇದಿಕೆಯ ರಾಜ್ಯ ಸಂಚಾಲಕ ಯಲ್ಲಪ್ಪ ಹಗಡೆ ಅವರು ಮಾತನಾಡಿ, ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೀದರಿನಿಂದ ಬೆಂಗಳೂರಿನವರೆಗೆ ಯುವ ಪರಿವರ್ತನೆ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಪ್ರಮು ಬೇಡಿಕೆಗಳಾದ ರಾಜ್ಯದ ಪ್ರತಿಯೊಂದು ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಬೇಕು. ಪೂರ್ಣ ಪ್ರಮಾಣದ ವಿಷಯವಾರು ಶಿಕ್ಷಕರನ್ನು ನೇಮಕ ಮಾಡಬೇಕು.
ಕೆ.ಪಿ.ಎಸ್.ಸಿ. ಮತ್ತು ಇಲಾಖಾ ನೇಮಕಾತಿ ಪ್ರಾಧಿಕಾರಗಳು ಸಕಾಲಿಕ ನೇಮಕಾತಿ ಕ್ಯಾಲೆಂಡರ ಪ್ರಕಟಿಸಿ, ಪ್ರತಿ ಹಂತಗಳ ನಿಗದಿತ ವೇಳಾಪಟ್ಟಿಯನ್ನು ಮುಂದೂಡದೆ ಡಿಜಿಟಲ್ ಪಾರದರ್ಶಕತೆ ಅಳವಡಿಸಿಕೊಂಡು ಭ್ರಷ್ಟಾಚಾರ ಮುಕ್ತ ನೇಮಕಾತಿ ಕೈಗೊಳ್ಳಬೇಕು.
ಖಾಸಗಿ ಕೈಗಾರಿಕೆಗಳಲ್ಲಿ ಉದ್ಯೋಗ ಮೀಸಲಾತಿ ಮತ್ತು ಎಲ್ಲಾ ಹುದ್ದೆಗಳಲ್ಲಿ ಸ್ಥಳೀಯರಿಗೆ ಪ್ರಾಮುಖ್ಯತೆ ಕಲ್ಪಿಸಬೇಕು. ಖಾಲಿ ಇರುವ ಸರಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖಾವಾರು ವಾರ್ಷಿಕ ನೇಮಕಾತಿ ಕ್ಯಾಲೆಂಡರ ಪ್ರಕಟಿಸಬೇಕು. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಲ್ಟಿ ಸ್ಪೇಶಾಲಿಟಿ ಸೌಲಭ್ಯವುಳ್ಳ ಆಸ್ಪತ್ರೆಗಳ ನಿರ್ಮಾಣ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸುಸಜ್ಜಿತ ಆಸ್ಪತ್ರೆಗಳ ನಿರ್ಮಾಣ ಮಾಡಬೇಕು.
ರೈತರ ಪಂಪಸೆಟ್‌ಗಳಿಗೆ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ನೀಡುವುದು. ಸರ್ವ ಕೃಷಿ ಉತ್ಪನ್ನಗಳಿಗೆ ಸರ್ವ ಋತುಗಳಲ್ಲಿ ಖಾತ್ರಿ ಬೆಲೆಯನ್ನು ಒದಗಿಸುವುದು. ಋತು ಬದಲಾದರೂ ಬೆಲೆ ಬದಲಾಗದು. ಬಡ ರೈತರಿಗೆ (5 ಎಕರೆವರೆಗೆ) ಸರ್ಕಾರದಿಂದ ಉಚಿತವಾಗಿ ಪ್ರಮಾಣಿತ ಮತ್ತು ಪರೀಕ್ಷಿತ ಗುಣಮಟ್ಟದ ಬೆಳೆ ಆಧಾರಿತ ಬೀಜದ ಕಿಟ್‌ಗಳನ್ನು ಬಿತ್ತನೆಯ ಸಕಾಲದಲ್ಲಿ ಒದಗಿಸುವುದು. ಎಲ್ಲಾ ಜಿಲ್ಲೆಗಳಲ್ಲಿ ಕೃಷಿ ವಿಶ್ವವಿದ್ಯಾಲಯ ಹಾಗೂ ಸಂಸ್ಕರಣಾ ಘಟಕಗಳನ್ನು ನಿರ್ಮಿಸಿ, ಗ್ರಾಮೀಣ ಪ್ರದೇಶದಲ್ಲಿ ಕೃಷಿ ಉತ್ಪನ್ನಗಳಿಂದ ಆಹಾರ ತಯಾರಿಕಾ ತರಬೇತಿ ನೀಡಿ, ಮಾರುಕಟ್ಟೆಯಲ್ಲಿ ಬೆಂಬಲ ಬೆಲೆ ಒದಗಿಸಬೇಕು.
ಕೃಷ್ಣಾ ಮೇಲ್ದಂಡೆ ಯೋಜನೆ 3 ನೇ ಹಂತದ ಸಂತ್ರಸ್ಥರಿಗೆ ವೈಜ್ಞಾನಿಕ ಪರಿಹಾರ ಧನವನ್ನು ಒಂದೇ ಹಂತದಲ್ಲಿ ನೀಡಿ ಸಮಗ್ರ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಉತ್ತರ ಕರ್ನಾಟಕ ಭಾಗಕ್ಕೆ ಅಗತ್ಯ ರೈಲುಗಳ ಸಂಪರ್ಕ ಕಲ್ಪಿಸಿ, ಉತ್ತಮ ಗುಣಮಟ್ಟದ ಬಸ್ಸುಗಳನ್ನು ಒದಗಿಸುವ ಮೂಲಕ ಗ್ರಾಮೀಣರಿಗೆ ಶಿಕ್ಷಣ, ತಂತ್ರಜ್ಞಾನ ಹಾಗೂ ಮಾರುಕಟ್ಟೆಗಳಿಗೆ ಹತ್ತಿರವಾಗುವಂತಾಗಬೇಕು.
ಈಗಾಗಲೇ ಮೀಸಲಾತಿ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಎಸ್.ಸಿ./ಎಸ್.ಟಿ. ಮತ್ತು 2ಎ ವರ್ಗಕ್ಕೆ ನೀಡಲಾಗಿದೆ. ಸಮಗ್ರ ಅನುಷ್ಠಾನಕ್ಕೆ ಕಾಮಗಾರಿಯಲ್ಲಿ ಕೆಲಸಗಳ ಮತ್ತು ಸೇವಾ ಕಾರ್ಯಗಳನ್ನು ವೀಲೀನಗೊಳಿಸಿ ದೊಡ್ಡ ಪ್ಯಾಕೆಜಿಂಗ್ ಮಾಡಿ ಮೀಸಲಾತಿ ತಪ್ಪಿಸುವ ಕೆಲಸ ನಡೆದಿದ್ದು, ಎಲ್ಲ ಇಲಾಖೆಗಳಲ್ಲಿ ಟೆಂಡರ ಕರೆಯುವುದು ನಿಯಮ ಉಲ್ಲಂಘನೆ ಮತ್ತು ಮೀಸಲಾತಿ ವರ್ಗಕ್ಕೆ ಅನ್ಯಾಯವಾಗದಂತೆ ಸರಿಪಡಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 