ರಾಜ್ಯದಲ್ಲಿ ಅಶಾಂತಿಗೆ ಪ್ರಚೋದಿಸುವ ಕೋಮುವಾದಿಗಳ ವಿರುದ್ಧ ಕ್ರಮಕ್ಕೆ ಮನವಿ
Appeal for action against communalists inciting unrest in the state
ಗದಗ-17, ಕರ್ನಾಟಕ ರಾಜ್ಯದಲ್ಲಿ ಎಲ್ಲಾ ಜಾತಿ ಮತ್ತು ಧರ್ಮದ ಸಮುದಾಯಗಳು ತಮ್ಮ-ತಮ್ಮ ಹಬ್ಬಗಳು-ಆಚರಣೆಗಳನ್ನು ಶಾಂತಿಯಿಂದ ಆಚರಿಸುತ್ತ ನೆಮ್ಮದಿಯಿಂದ ಜೀವನವನ್ನು ನಡೆಸುತ್ತಿದ್ದಾರೆ. ಎಲ್ಲಾ ಸಮುದಾಯಗಳು ತಮ್ಮ ಜಾತಿ ಧರ್ಮವನ್ನು ಮೀರಿ ಎಲ್ಲರೂ ನಮ್ಮ ದೇಶದ ಐಕತೆಯ ಸಂಸ್ಕ್ರಿತಿಯನ್ನು ಆಚರಿಸುತ್ತ ದೇಶದ ಎಲ್ಲಾ ಜಾತಿ ಸಮುದಾಯಗಳು ಒಂದೇ ಎಂದು ಭಾವಿಸುತ್ತ ಎಲ್ಲರೂ ಒಗ್ಗೂಡಿ ಬದುಕು ನಡೆಸುತ್ತಿದ್ದಾರೆ. ಆದರೆ ಇತ್ತಿಚಿಗೆ ಕೆಲವು ಜಾತಿವಾದಿಗಳು, ಕೋಮುವಾದಿಗಳು ಒಂದು ಸಮುದಾಯದ ವಿರುಧ್ದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತ ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಠಿಸುವ ಪ್ರಯತ್ನ ನಡೆಸುತ್ತಿರುವ ವಿರುಧ್ದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸ್ಲಂ ಜನಾಂದೋಲನ-ಕರ್ನಾಟಕ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸ್ಲಂ ಜನಾಂದೋಲನ-ಕರ್ನಾಟಕದ ರಾಜ್ಯ ಸಂಚಾಲಕರಾದ ಇಮ್ತಿಯಾಜ.ಆರ್.ಮಾನ್ವಿ ಮಾತನಾಡಿ ವಿಜಯಪೂರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಂಸದರಾದ ಪ್ರತಾಪಸಿಂಹ, ವಿಧಾನ ಪರೀಷತ್ ಸದಸ್ಯರಾದ ಸಿ.ಟಿ.ರವಿ ಹಾಗೂ ಕೆಲ ಜಾತಿವಾದಿಗಳು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಹಿರಂಗವಾಗಿ ಒಂದು ಸಮುದಾಯದ ಜನರ ಭಾವನೆಗೆ ಧಕ್ಕೆ ತರುವಂತ ಹೇಳಿಕೆಗಳನ್ನು ನೀಡಿ ನಮ್ಮ ನಾಡಿನ ಶಾಂತಿ, ಸೌಹಾರ್ದತೆಯ ವಾತಾವರಣವನ್ನು ಹಾಳು ಮಾಡುವ ಪ್ರಯತ್ನ ನಡೆಸುತ್ತಿರುವುದು ಖಂಡನೀಯವಾಗಿದೆ. ಒಂದು ಸಮುದಾಯದ ವಿರುಧ್ದ ದ್ವೇಷದ ಭಾವನೆ ಹಾಗೂ ಜಾತಿ, ಧರ್ಮಗಳ ಮಧ್ಯ ವಿಷಬೀಜ್ ಬಿತ್ತುವ ಜೊತೆಗೆ ನಾಡಿನ ಐಕತೆಯ ಸಂಸ್ಕ್ರತಿಯನ್ನು ಹಾಳು ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ.
ಮನವಿ ನೀಡುವ ಸಂದರ್ಭದಲ್ಲಿ ಗದಗ ಜಿಲ್ಲಾ ಸ್ಲಂ ಸಮಿತಿ ಉಪಾಧ್ಯಕ್ಷ ರವಿಕುಮಾರ ಬೆಳಮಕರ, ಕಾರ್ಯದರ್ಶಿ ಅಶೋಕ ಕುಸಬಿ, ಮುಖಂಡರಾದ ಮಹ್ಮದಯುಸುಫ ನಮಾಜಿ, ಬಾಬಾಜಾನ ಬಳಗಾನೂರ, ಉಮರಫಾರುಖ ಹುಬ್ಬಳ್ಳಿ, ಸ್ಲಂ ಸಮಿತಿ ಮಹಿಳಾ ಘಟಕದ ಸಂಚಾಲಕಿ ಪರವೀಬಾನು ಹವಾಲ್ದಾರ, ಮುಖಂಡರಾದ ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಮೆಹಬೂಬಸಾಬ ಬಳ್ಳಾರಿ, ವೆಂಕಟೇಶ ಬಿಂಕದಕಟ್ಟಿ, ಖಾಜಾಸಾಬ ಇಸ್ಮಾಯಿಲನವರ, ರವಿ ಗೋಸಾವಿ, ಖಾಜಾಸಾಬ ಬಳ್ಳಾರಿ, ಮಕ್ತುಮಸಾಬ ಮುಲ್ಲಾನವರ, ಸಾಕ್ರುಬಾಯಿ ಗೋಸಾವಿ, ಗೌಸಸಾಬ ಅಕ್ಕಿ, ಮಂಜುನಾಥ ಶ್ರೀಗಿರಿ, ಸಲೀಂ ಹರಿಹರ, ವಿಲಾಸ ಗೋಸಾವಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 