ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜ ಸ್ಥಾಪನೆಗೆ ಮನವಿ
Appeal for establishment of a fully government medical college
ವಿಜಯಪುರ 01: ವಿಜಯಪುರದ ಸರಕಾರಿ ವೈದ್ಯಕೀಯ ಕಾಲೇಜನ್ನು ಖಾಸಗಿ ಸಹಭಾಗಿತ್ವದಲ್ಲಿ ಆರಂಭಿಸುವುದನ್ನು ವಿರೋಧಿಸಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ ನೇತೃತ್ವದಲ್ಲಿ ನಿಯೋಗದಲ್ಲಿ ತೆರಳಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಇವರನ್ನು ಕಲಬುರ್ಗಿಯಲ್ಲಿರುವ ಅವರ ಮನೆಗೆ ತೆರಳಿ ಮನವಿ ಸಲ್ಲಿಸಲಾಯಿತು.
ಪಿಪಿಪಿ ಮಾದರಿಗೆ ಜಿಲ್ಲೆಯ ಜನರ ತೀವ್ರ ವಿರೋಧವಿದ್ದು ಯಾವುದೇ ಕಾರಣಕ್ಕೂ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಬಾರದು ಎಂದು ಹೋರಾಟ ಸಮಿತಿಯ ನಿಯೋಗವು ಸಚಿವರನ್ನು ಆಗ್ರಹಿಸಿತು. ಸಕಾರಾತ್ಮಾಕವಾಗಿ ಸ್ಪಂದಿಸಿದ ಸಚಿವರು ನಿಯೋಗದ ಮಾತುಕತೆಗಳನ್ನು ಆಲಿಸಿದರು.
ನಿಯೋಗದಲ್ಲಿ ಹೋರಾಟ ಸಮಿತಿಯ ಮುಖಂಡರುಗಳಾದ ಬಿ.ಭಗವಾನ್ ರೆಡ್ಡಿ, ಅಕ್ರಮ ಮಾಶಾಳಕರ, ಅರವಿಂದ ಕುಲಕರ್ಣಿ, ಹೆಚ್ ಟಿ ಭರತಕುಮಾರ, ಅಲ್ಲಮ ಪ್ರಬು, ರೇಣುಕಾ, ಗುರುರಾಜ ದೇಶಪಾಂಡೆ,ಮನೊಜಕುಮಾರ ಗುದ್ದಿ ಮುಂತಾದವರು ಹಾಜರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 