ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಮನವಿ
Appeal for establishment of government medical college
ವಿಜಯಪುರ 31: ನಗರದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ ಪಾಟೀಲ ರವರಿಗೆ ‘ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ’ಯ ನೇತೃತ್ವದಲ್ಲಿಂದು ನಿಯೋಗದಲ್ಲಿ ತೆರಳಿ ಮನವಿ ಸಲ್ಲಿಸಲಾಯಿತು.
ಸರಕಾರದಿಂದ ಉದ್ದೇಶಿತ ಪಿಪಿಪಿ ಮಾದರಿಯಡಿ ಖಾಸಗಿ ಸಹಭಾಗಿತ್ವದಡಿ ವೈದ್ಯಕೀಯ ಕಾಲೇಜು ಆರಂಭಿಸುವ ಹುನ್ನಾರವನ್ನು ಕೈಬಿಟ್ಟು, ಸರ್ಕಾರವೇ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು. ಜೊತೆಗೆ ಸರಕಾರಿ ವೈದ್ಯಕೀಯ ಕಾಲೆಜು ಆರಂಭಿಸಲು ಮಾನ್ಯ ಮುಖ್ಯಮಂತ್ರಿಯವರ ಮೇಲೆ ಒತ್ತಡ ತರುವಂತೆ ಆಗ್ರಹಿಸಲಾಯಿತು.
ಈ ನಿಯೋಗದಲ್ಲಿ ಹೋರಾಟ ಸಮಿತಿಯ ಸಂಚಾಲಕ ಸಮಿತಿಯ ಸದಸ್ಯರುಗಳಾದ ಭಿ.ಭಗವಾನ್ ರೆಡ್ಡಿ, ಅರವಿಂದ ಕುಲಕರ್ಣಿ, ಅಕ್ರಮ ಮಾಷಾಳಕರ, ಲಲಿತಾ ಬಿಜ್ಜರಗಿ, ಮಲ್ಲಿಕಾರ್ಜುನ ಬಟಗಿ, ಮಲ್ಲಿಕಾರ್ಜುನ ಹೆಚ್ ಟಿ, ಸಿದ್ದಲಿಂಗ ಬಾಗೇವಾಡಿ, ಬಾಳು ಜೇವೂರ, ಪ್ರಭುಗೌಡ ಪಾಟೀಲ, ದಸ್ತಗಿರ ಉಕ್ಕಲಿ, ಭರತಕುಮಾರ ಹೆಚ್,ಟಿ ಗೀತಾ ಹೆಚ್, ಸಂಗಮೇಶ ಸಗರ, ಬಾಬುರಾವ್ ಬೀರಕಬ್ಬಿ, ಸಿದ್ರಾಮ ಹಿರೇಮಠ, ಶ್ರೀಕಾಂತ ಕೊಂಡಗೂಳಿ ಮುಂತಾದವರು ಭಾಗವಹಿಸಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 