ಸರ್ಕಾರಿ ಪ್ರೌಢ ಶಾಲೆ ಮಂಜೂರಿಗೆ ಆಗ್ರಹಿಸಿ ಮನವಿ
ಲೋಕದರ್ಶನ ವರದಿ
ಘಟಪ್ರಭಾ 13: ದುಪದಾಳ ಗ್ರಾಮಕ್ಕೆ ಕೂಡಲೇ ಸರ್ಕಾರಿ ಪ್ರೌಢ ಶಾಲೆಯನ್ನು ಮಂಜೂರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕದ ವತಿಯಿಂದ ಗ್ರಾಮದ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂದಿನ ಮುಖ್ಯ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿ ನಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ತಾಲೂಕಾ ಸಂಚಾಲಕ ರೆಹಮಾನ ಮೊಕಾಶಿ, ಮಾತನಾಡಿ ಪ್ರತಿ ವರ್ಷ ಸುಮಾರು 80 ಕ್ಕೂ ಹೆಚ್ಚು ವಿದ್ಯಾರ್ಥಿ -ವಿದ್ಯಾರ್ಥಿನಿಯರು 8 ನೇ ತರಗತಿ ಪಾಸಾಗುತ್ತಾರೆ. ಮುಂದಿನ ವ್ಯಾಸಂಗಕ್ಕೆ ಗ್ರಾಮದಲ್ಲಿ ಪ್ರೌಢ ಶಾಲೆ ಇಲ್ಲರಿರುವುದರಿಂದ ಬೇರೆ ಊರಕ್ಕೆ ಹೋಗೋಕೆ ಆಗದೇ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಬಿಡುತ್ತಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಗ್ರಾಮಕ್ಕೆ ಪ್ರೌಢ ಶಾಲೆಯನ್ನು ಮಂಜೂರ ಮಾಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಗೋಕಾಕ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಿಗಾರ, ಗ್ರಾಮಕ್ಕೆ ಸಕರ್ಾರಿ ಶಾಲೆ ಮಂಜೂರು ಮಾಡುವ ಕುರಿತು ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಯೋಗ್ಯ ಕ್ರಮ ಕೈಗೊಳ್ಳಲಾವುದು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕರವೇ ಘಟಕ ಅಧ್ಯಕ್ಷ ಶೆಟ್ಟೆಪ್ಪಾ ಗಾಡಿವಡ್ಡರ, ರವಿ ನಾವಿ, ಅಮಿರಖಾನ ಜಗದಾಳ, ಸುನೀಲ ಕೊಟಬಾಗಿ, ನೇಮಿನಾಥ ಬೊಮ್ಮಣ್ಣವರ, ಭರತೇಷ ಪರಪ್ಪನವರ, ರಾಮ ಗಾಡಿವಡ್ಡರ, ಇಸಾಕ ಕೋತವಾಲ, ಶಾಕೀಬ ಮುಲ್ಲಾ, ವಿಠ್ಠಲ ಗಾಡಿವಡ್ಡರ, ಲಗಮಣ್ಣಾ ಗಾಡಿವಡ್ಡರ, ಹಣಮಂತ ಗಾಡಿವಡ್ಡರ, ಅಮೃತ ಜಿರಳಿ, ಮಾರುತಿ ಕುರಬೇಟ, ಮುಬಾರಕ ಜಮಕಂಡಿ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 