ಬಳ್ಳಾರಿ, ಫೆ. 22: ಬಳ್ಳಾರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಒಣ ಮೆಣಸಿನಕಾಯಿ ಮಾರುಕಟ್ಟೆಯನ್ನು ತ್ವರಿತವಾಗಿ ಪ್ರಾರಂಭಿಸಲು ಕೋರಿ ಎಪಿಎಂಸಿ ನಿರ್ದೇಶಕರಾದ ಶಿವಾನಂದ ಕಪಾಸಿ ಅವರನ್ನು ಹುಬ್ಬಳ್ಳಿಯಲ್ಲಿ ಭೇಟಿ ಮಾಡಿದ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಅವರ ನೇತೃತ್ವದಲ್ಲಿ ನಿಯೋಗ ಮನವಿ ಮಾಡಿದೆ.
ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು, ಬಳ್ಳಾರಿಗೆ ಭೇಟಿ ನೀಡಿದಾಗ ಬಳ್ಳಾರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಒಣ ಮೆಣಸಿನಕಾಯಿ ಮಾರುಕಟ್ಟೆಯನ್ನು ತ್ವರಿತವಾಗಿ ಪ್ರಾರಂಭಿಸಲು ಐದು ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದ್ದನ್ನು ನೆನಪಿಸಿದ, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮತ್ತು ಜಂಟಿ ಕಾರ್ಯದರ್ಶಿ ವಿ. ರಾಮಚಂದ್ರ ಅವರು ಈ ಮನವಿ ಸಲ್ಲಿಸಿದ್ದಾರೆ.
ಬಳ್ಳಾರಿ ಎಪಿಎಂಸಿ ಮಾರುಕಟ್ಟೆಯ ಸ್ಥಳಾಂತರ ಮತ್ತು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸೇವಾ ಕಾರ್ಯಗಳಿಗೆ ಸೂಕ್ತ ನಿವೇಶನ ನೀಡಲು ಕೋರಿದರು.