ಸರ್ಕಾರದ ತಿರಸ್ಕರಿಸಿದ್ದರ ವಿರುದ್ಧ ಮೇಲ್ಮನವಿ ಅಂದೋಲನ ಅಕ್ಟೊಬರ್ 4 ರಿಂದ ಪ್ರಾರಂಭ: ಪೋಸ್ಟರ್ ಬಿಡುಗಡೆ
Appeal movement against government rejections to begin from October 4: Poster released
ಕಾರವಾರ 19 : ಅರಣ್ಯವಾಸಿಗಳ ಅರ್ಜಿಗಳನ್ನು ಕಾನೂನು ಪ್ರಕಾರ ಪುನರ್ ಪರೀಶೀಲನೆಯನ್ನು ಜರುಗಿಸದೇ, ಕೇಂದ್ರ ಸರ್ಕಾರಕ್ಕೆ ರಾಜ್ಯ ಸಲ್ಲಿಸಿದ ಪರಿಣಾಮ ಅತಿಕ್ರಮಣದಾರರ ಅರ್ಜಿ ತಿರಸ್ಕೃತವಾಗಿವೆ ಎಂದು ರಾಜ್ಯ ಅರಣ್ಯ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ತಿಳಿಸಿದರು.
ಅವರು ಶುಕ್ರವಾರ ಕಾರವಾರ ಪತ್ರಿಕಾ ಭವನದಲ್ಲಿ ಆಕ್ಷೇಪಣಾ ಮೇಲ್ಮನವಿಯ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು. ಅತಿಕ್ರಮಣದಾರರ ಅರ್ಜಿ ತಿರಸ್ಕೃತವಾದ ಕಾರಣ, ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಮಟ್ಟದ ಅರಣ್ಯ ಹಕ್ಕು ಉಸ್ತುವಾರಿ ಸಮಿತಿಗೆ ಕಾನೂನಾತ್ಮಕ ಆಕ್ಷೇಪಣಾ ಮೇಲ್ಮನವಿ ಸಲ್ಲಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು . ಶಿರಸಿಯಲ್ಲಿ ಅಕ್ಟೋಬರ್.4 ರಂದು ಈ ಆಂದೋಲನಕ್ಕೆ ಚಾಲನೆ ನೀಡಲಾಗುವುದು ಎಂದರು .ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಅರಣ್ಯವಾಸಿಗಳ ಅರ್ಜಿ ಪುನರ್ ಪರೀಶೀಲಿಸಬೇಕೆಂಬ ಸುಪ್ರಿಂ ಕೊರ್ಟನ ನಿರ್ದೆಶನವನ್ನ ಅನುಸರಿಸದೇ, ಸುಪ್ರೀಂಕೋರ್ಟ್ ಮತ್ತು ಕೇಂದ್ರ ಸರ್ಕಾರದ ಮಾರ್ಗದರ್ಶನಕ್ಕೆ ವ್ಯತಿರಿಕ್ತವಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ರಾಜ್ಯದಲ್ಲಿ 2,53, 269 ಅರಣ್ಯವಾಸಿಗಳ ಅರ್ಜಿ ತಿರಸ್ಕರಿಸಿದೆ ಎಂದು ಹೇಳಿದರು.
ವರದಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 73 206 ಅರ್ಜಿ ತಿರಸ್ಕರಿಸಿದ ಕಾರಣ ಪ್ರಸ್ತಾಪಿಸಲಾಗಿದೆ. ಈ ಹಿನ್ನಲೆಯಲ್ಲಿ ಪುನರ್ ಪರೀಶೀಲಿಸದೆ ,ಕಾನೂನು ಬಾಹಿರವಾಗಿ ಅರ್ಜಿ ತಿರಸ್ಕರಿಸಿರುವ ಹಿನ್ನಲೆಯಲ್ಲಿ, ಸರ್ಕಾರದ ಈ ಆದೇಶಕ್ಕೆ ರಾಜ್ಯಾದ್ಯಂತ ಅರಣ್ಯವಾಸಿಗಳಿಂದ ರಾಜ್ಯ ಸರ್ಕಾರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು. ಆಕ್ಷೇಪಣಾ ಪತ್ರದಲ್ಲಿ ರಾಜ್ಯದಲ್ಲಿ ಒಟ್ಟು ಅರ್ಜಿಗಳಲ್ಲಿ ಶೆ.87.77 ಅರಣ್ಯವಾಸಿಗಳ ಅರ್ಜಿಗಳು ತಿರಸ್ಕರಿಸಲ್ಪಟ್ಟಿದೆ. ರಾಜ್ಯದಲ್ಲಿ ಶೇ.3.2 ರಷ್ಟು ಅರ್ಜಿಗಳಿಗೆ ಸಾಗುವಳಿ ಹಕ್ಕು ದೊರಕಿದೆ ಎಂದು ವರದಿಯಲ್ಲಿ ಹೇಳಲಾಗಿದೆ ಎಂದು ಅವರು ತಿಳಿಸಿದರು.
*ಸರ್ಕಾರದ ಗಮನಕ್ಕೆ ತಂದಿಲ್ಲ :* ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ಸಂದರ್ಭದಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿಯವರು ಸರ್ಕಾರದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಸಚಿವರ ಗಮನಕ್ಕೆ ತರದೇ ವರದಿ ಸಲ್ಲಿಸಿರುವುದು ಗಮನಕ್ಕೆ ಬಂದಿದ್ದು, ಮುಖ್ಯ ಕಾರ್ಯದರ್ಶಿಯವರ ಈ ಕಾರ್ಯವು ವಿಷಾಧಕರ ಎಂದು ಅವರು ಹೇಳಿದರು. ಕಾನೂನಾತ್ಮಕ ಹೋರಾಟ : ಅರಣ್ಯ ಭೂಮಿ ಹಕ್ಕಿಗಾಗಿ ಅರಣ್ಯವಾಸಿಗಳು ಸುಪ್ರಿಂ ಕೊರ್ಟನಲ್ಲಿ ಪುನರ್ ಪರೀಶೀಲಿಸದೇ, ತಿರಸ್ಕರಿಸಿರುವ ಕುರಿತು ನ್ಯಾಯಾಂಗ ನಿಂದನೆ ಅರ್ಜಿ ಮೂಲಕ ಕಾನೂನಾತ್ಮಕ ಹೋರಾಟವನ್ನ ಮುಂದುವರೆಸಲಾಗುವುದು ಹಾಗೂ ಮುಖ್ಯ ಕಾರ್ಯದರ್ಶಿಯವರ ಏಕ ತೀರ್ಿನ ನಿರ್ಣಯವನ್ನು ಹೋರಾಟಗಾರರ ವೇದಿಕೆಯು ಪ್ರಭಲವಾಗಿ ಖಂಡಿಸುತ್ತದೆ ಎಂದು ಅದ್ಯಕ್ಷ ರವೀಂದ್ರ ನಾಯ್ಕ ಹೇಳಿದರು.ಪತ್ರಿಕಾ ಗೋಷ್ಠಿಯಲ್ಲಿ ಕುಮಟಾ ಅದ್ಯಕ್ಷ ಮಂಜುನಾಥ ಮರಾಠಿ, ಯಲ್ಲಾಪುರ ಅಧ್ಯಕ್ಷ ಭೀಮಸೀ ವಾಲ್ಮಕೀ, ಅಮೋಜ್ ಮಲ್ಲಾಪುರ, ಸಂಚಾಲಕ ರಾಘವೇಂದ್ರ ನಾಯ್ಕ ಕವಂಚೂರು, ಸುಬ್ರಾಯ ನಾಯ್ಕ ಮಂಕಿ, ಶಿವಾನಂದ ಜೋಯಿಡಾ ಮುಂತಾದವರು ಉಪಸ್ಥಿತರಿದ್ದರು......
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 