ಕೃತಕ ಅಭಾವದ ವದಂತಿಗಳಿಗೆ ಒಳಗಾಗಿ ಅಗತ್ಯಕ್ಕಿಂತ ಹೆಚ್ಚು ರಸಗೊಬ್ಬರ ಸಂಗ್ರಹಿಸಬಾರದು ಮನವಿ
Appeal not to stockpile more fertilizer than necessary due to rumors of artificial shortages
ಬ್ಯಾಡಗಿ 16 : ತಾಲೂಕಿನ ಬನ್ನಿಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಆಯೋಜಿಸಿದ್ದ ಧರ್ತಿ ಮಾತಾ ಬಚಾವೋ ಸಮಿತಿ( ಭೂಮಿ ತಾಯಿ ರಕ್ಷಣೆ ಕಣ್ಗಾವಲು ಸಮಿತಿ) ಸಭೆ ಉದ್ದೇಶಿಸಿ ಮಾತನಾಡಿದ ಅವರು ರಾಸಾಯನಿಕ ಗೊಬ್ಬರವನ್ನು ವಿಶೇಷವಾಗಿ ಕೈಗಾರಿಕೆಗಳಿಗೆ ಮತ್ತು ತಾಲೂಕಿನ ಗಡಿಯುದ್ದಕ್ಕೂ ಅಕ್ರಮವಾಗಿ ವರ್ಗಾಯಿಸುವ ವಿಷಯದ ಬಗ್ಗೆ ತಳಮಟ್ಟದಲ್ಲಿ ಕಣ್ಗಾವಲು ಮತ್ತು ಕ್ರಮಗಳ ಅಗತ್ಯವಿದೆ.
ಈ ಸವಾಲುಗಳನ್ನು ಎದುರಿಸಲು ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ಧರ್ತಿ ಮಾತಾ ಬಚಾವೋ ಸಮಿತಿ( ಭೂಮಿ ತಾಯಿ ರಕ್ಷಣೆ ಕಣ್ಗಾವಲು ಸಮಿತಿ) ರಚಿಸಲಾಗಿದೆ. ಗಡಿಯಾಚೆಗಿನ ರಸಗೊಬ್ಬರ ಸಾಗಣಿಕೆ ಅಥವಾ ಅನಧಿಕೃತ ರಸಗೊಬ್ಬರ ಮಾರಾಟ ಚಟುವಟಿಕೆಗಳು ಕಂಡುಬಂದರೆ ಸಮಿತಿಯು ಗ್ರಾಮ ಪಂಚಾಯತಿ ಅಥವಾ ತಾಲೂಕು ಮಟ್ಟದ ಕಚೇರಿಗೆ ತಿಳಿಸಬೇಕು ಎಂದರು.2026-27ರ ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ಯೂರಿಯಾ ಬಳಕೆಯನ್ನು ನಿಯಂತ್ರಿಸಲು ಕೃಷಿ ಇಲಾಖೆ ಹೊಸ ಮಾರ್ಗಸೂಚಿ ಜಾರಿಗೊಳಿಸಿದೆ. ಅದರಂತೆ ಪ್ರತಿ ಎಕರೆಗೆ ತಿಂಗಳಿಗೆ ಕೇವಲ ಒಂದು ಚೀಲ ಯೂರಿಯಾ ಮಾತ್ರ ವಿತರಿಸಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಗಣೇಶ್ ಕಮ್ಮಾರ್ ತಿಳಿಸಿದ್ದಾರೆ.
ಕೆ-ಕಿಸಾನ್ ತಂತ್ರಾಂಶದಡಿ ಗೊಬ್ಬರ ಪಡೆಯಲು ರೈತರು ಅಧಾರ್ ಹಾಗೂ ಪಹಣಿಯನ್ನು ಎಫ್‌ಐಡಿ(ಈಋ)ಗೆ ಜೋಡಣೆ ಮಾಡಿರುವುದು ಕಡ್ಡಾಯವಾಗಿದೆ. ಎಫ್‌ಐಡಿ ಹೊಂದಿರದ ರೈತರು ತಕ್ಷಣ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಕೃಷಿ ಪರಿಕರ ಮಾರಾಟಗಾರರು ಆಧಾರ್ ಪರೀಶೀಲನೆಯಿಲ್ಲದೆ ಗೊಬ್ಬರ ನೀಡಬಾರದು ಹಾಗೂ ರೈತರಿಗೆ ಬಿಲ್ ನೀಡುವುದು ಕಡ್ಡಾಯವಾಗಿದೆ. ಜೊತೆಗೆ ಅಂಗಡಿಗಳಲ್ಲಿ ದಾಸ್ತಾನು ಹಾಗೂ ಪರವಾನಗಿ ವಿವರಗಳನ್ನು ಸ್ಪಷ್ಟವಾಗಿ ಪ್ರದರ್ಶಿಸುವಂತೆ ಸೂಚಿಸಲಾಗಿದೆ.ಅನಧಿಕೃತವಾಗಿ ಮನೆಬಾಗಿಲಿಗೆ ಬರುವವರಿಂದ ಕೃಷಿ ಪರಿಕರಗಳನ್ನು ಖರೀದಿಸಬಾರದು.
ಬ್ಯಾಡಗಿ ತಾಲೂಕಿಗೆ 6500 ಮೆ.ಟನ್ ಯೂರಿಯಾ, 2500ಮೆ.ಟನ್ ಡಿ.ಎ.ಪಿ, 3500ಮೆ.ಟನ್ ಕಾಂಪ್ಲೆಕ್ಸ್ ರಸಗೊಬ್ಬರಗಳ ಬೇಡಿಕೆ ಇದ್ದು, ಸರ್ಕಾರದಿಂದ ಬೇಡಿಕೆಗೆ ಅನುಸಾರ ರಸಗೊಬ್ಬರ ಸಂಗ್ರಹ ಮಾಡುವುದರಿಂದ ಕೃತಕ ಅಭಾವದ ವದಂತಿಗಳಿಗೆ ಒಳಗಾಗಿ ಅಗತ್ಯಕ್ಕಿಂತ ಹೆಚ್ಚು ರಸಗೊಬ್ಬರ ಸಂಗ್ರಹಿಸಬಾರದು ಎಂದು ಮನವಿ ಮಾಡಲಾಗಿದೆ. ರೈತರು ಒಂದೇ ಸಂಸ್ಥೆ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ, ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯ ಹಾಗೂ ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಡಿ.ಎ.ಪಿ, ಗಂಧಕ ಒದಗಿಸುವ 20:20:0:13 ಹಾಗೂ ಪೊಟ್ಯಾಸಿಯಂ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 10:26:26, 15:15:15, 17:17:17, 19:19:19, 12:32:16 ರಸಗೊಬ್ಬರಗಳನ್ನು ಸಮತೋಲಿತವಾಗಿ ಬಳಸಬಹುದಾಗಿದೆ ಎಂದರು.ಸಭೆಯಲ್ಲಿ ಕೃಷಿ ಅಧಿಕಾರಿ ನಾಗರಾಜ ಬನ್ನಿಹಟ್ಟಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿದ್ಯಾವತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ವಾಹಕ ಅಧಿಕಾರಿ ಸುಭಾಷ್ ದ್ಯಾಮನಗೌಡರ, ಕೃಷಿ ಇಲಾಖೆ ಆತ್ಮ ಸಿಬ್ಬಂದಿ ಗುಡ್ಡಪ್ಪ ಅರಳಿಕಟ್ಟಿ, ಕೃಷಿ ಸಖಿ ಲಕ್ಷ್ಮಿ ಕೆರೆಕರ ಹಾಗೂ ಗ್ರಾಮದ ರೈತರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 