ಜಮಖಂಡಿ 17: ಮಂಟೂರು ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಯಿಂದ ಗಲಗಲಿ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ಯಾರೇಜ್‌ವರೆಗೆ ಪೈಪ್‌ಲೈನ್ ಅಳವಡಿಸುವಂತೆ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಜಲ ಸಂಪನ್ಮೂಲ ಸಚಿವ ಡಿ,ಕೆ. ಶಿವಕುಮಾರ ಅವರಿಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಈಗಾಗಲೇ ಅಸ್ತಿತ್ವದಲ್ಲಿರುವ ಮಂಟೂರು ಏತ ನೀರಾವರಿ ಯೋಜನೆಯಿಂದ ಗಲಗಲಿ ಬ್ಯಾರೇಜ್‌ದವರೆಗೆ ಪೈಪ್‌ಲೈನ್ ಜೋಡಣೆ ಮಾಡುವುದರಿಂದ ಬೇಸಿಗೆಯ ದಿನದಲ್ಲಿ ರೈತರಿಗೆ, ಜನ-ಜಾನುವಾರುಗಳಿಗೆ ನೀರಿನ ತೊಂದರೆ ಕಡಿಮೆಯಾಗುತ್ತದೆ. ಇದರಿಂದ ಸುಮಾರು 50 ರಿಂದ 60 ಹೆಚ್ಚು ಗ್ರಾಮಗಳಿಗೆ ನೀರಿನ ಸೌಲಭ್ಯ ಕಲ್ಪಿಸಿದಂತಾಗುತ್ತದೆ , ಅಂದಾಜು 440 ಲಕ್ಷ ವೆಚ್ಚದ ಕಾಮಗಾರಿಗೆ ಹಣ ಖರ್ಚಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದರು, ಆದ್ದರಿಂದ ಕಾಮಗಾರಿಕೆಗೆ ಮಂಜೂರಾತಿ ನೀಡಬೇಕೆಂದು ಮನವಿ ಮಾಡಿದರು.
ಜಲಸಂಪನ್ಮೂಲ ಸಚಿವರು ಕಾಮಗಾರಿ ಪರೀಶೀಲಿಸಿ ವರದಿ ನೀಡಲು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.