ಸ್ಥಳೀಯ ಸರ್ಕಾರಗಳಿಗೆ ಚುನಾವಣೆ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ

ಸ್ಥಳೀಯ ಸರ್ಕಾರಗಳಿಗೆ ಚುನಾವಣೆ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ Appeal to Chief Minister D.K. Shivakumar to hold elections for local governments

ಲೋಕದರ್ಶನ ವರದಿ 

ಹಾವೇರಿ 10 : ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾಒಕ್ಕೂಟ-ಹಾವೇರಿ ಜಿಲ್ಲಾ ಘಟಕದ ವತಿಯಿಂದ ಹಾವೇರಿ ಜಿಪಂಗೆ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಆಗಮಿಸಿದ ದಲ್ಜೀತ್‌ಕುಮಾರ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.ನಂತರ ಶೀಘ್ರವಾಗಿ ಸ್ಥಳೀಯ ಸರ್ಕಾರಗಳಿಗೆ ಚುನಾವಣೆ ಮಾಡುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ  ಹಾಗೂ ಜಿಲ್ಲಾಧಿಕಾರಿಗಳವರ ಮೂಲಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಹಾಒಕ್ಕೂಟದ ಜಿಲ್ಲಾಧ್ಯಕ್ಷರಾದ ಅನಂತರಾಜ ಹವಳಣ್ಣನವರ,ಒಕ್ಕೂಟದ ರಾಜ್ಯ ಮಾಧ್ಯಮ ಕಾರ್ಯದರ್ಶಿ ನಿಂಗಪ್ಪ ಆರೇರ,ಹಾನಗಲ್ ತಾಲ್ಲೂಕ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾಳೂರು,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಜೀವಪ್ಪ ಬಿ.ಕೆ. ಬಿಳ್ಳಳ್ಳಿ ಗ್ರಾಪಂ ಅಧ್ಯಕ್ಷರಾದ ಹನಮರಡ್ಡಿ ದಬಾಳಪ್ಪನವರ,ಮಹೇಶ ಜವಳಿ ಸೇರಿದಂತೆ ಅನೇಕರಿದ್ದರು.