ಬೆಳಗಾವಿ, ಖಾನಾಪೂರ ಅಕ್ರಮ ಗಣಿಗಾರಿಕೆ ದಂಧೆ ತಡೆಯುವಂತೆ ಡಿಸಿಗೆ ಮನವಿ
Appeal to DC to stop illegal mining in Belgaum and Khanapur
ಬೆಳಗಾವಿ 31: ಖಾನಾಪುರ, ಬೆಳಗಾವಿ ಭಾಗದಲ್ಲಿ ಅಕ್ರಮ ಗಣಿಗಾರಿಕೆ ತಡೆಯುವಂತೆ ಆಗ್ರಹಿಸಿ ಮಂಗಳವಾರ ರಾಜಕುಮಾರ ಟೋಪಣ್ಣವರ ಹಾಗೂ ಸುಜೀತ್ ಮುಳಗುಂದ್ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಬಾಕ್ಸೈಟ್, ಲೇಟರೈಟ್ ಮತ್ತು ಸಿಲಿಕಾ ಖನಿಜಗಳನ್ನು ವ್ಯಾಪಕವಾಗಿ ಅಕ್ರಮವಾಗಿ ತೆಗೆಯಲಾಗುತ್ತಿದೆ. ಬೆಳಗುಂಡಿ, ಬಕನೂರು, ಬೀಜಗರ್ಣಿ, ಗೋಳ್ಯಾಳಿ, ಅಮಟೆ, ಬೆಟಗೇರಿ, ಕಿಣಯೆ, ಇನಾಮ ಬಡಸ್ ಹಾಗೂ ಖಾನಾಪುರ ತಾಲೂಕಿನ ತೋರಳಿ ಗ್ರಾಮಗಳಲ್ಲಿ ಈ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಅಲ್ಲದೇ ರೈತರ ಅನುಮತಿ ಇಲ್ಲದೆ ಅವರ ಕೃಷಿಭೂಮಿಗಳಲ್ಲೇ ಗಣಿಗಾರಿಕೆ ನಡೆಸಲಾಗುತ್ತಿದ್ದು, ಇದರಿಂದ ಭೂಮಿ ಹಾನಿಗೊಳಗಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರದ ಸಮೀಪದ ಪ್ರದೇಶಗಳಿಗೆ ನೀಡಲಾದ ಗಣಿಗಾರಿಕೆ ಪಾಸ್ಗಳನ್ನು ದುರುಪಯೋಗಪಡಿಸಿಕೊಂಡು ಕರ್ನಾಟಕದ ಈ ಭಾಗಗಳಲ್ಲಿ ಖನಿಜಗಳನ್ನು ತೆಗೆಯಲಾಗುತ್ತಿದೆ. ಖನಿಜಗಳನ್ನು ಡಾಲ್ಮಿಯಾ ಸಿಮೆಂಟ್ ಹಾಗೂ ಚೆಟ್ಟಿನಾಡ್ ಸಿಮೆಂಟ್ ಕಂಪನಿಗಳಿಗೆ ಸಾಗಿಸಲಾಗುತ್ತಿದೆ ಎಂಬ ಶಂಕೆ ಇದೆ. ಅಕ್ರಮ ಗಣಿಗಾರಿಕೆ ಹೆಚ್ಚಾಗಿ ರಾತ್ರಿ 2 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ನಡೆಯುತ್ತಿದ್ದು, ಅಧಿಕಾರಿಗಳ ಗಮನ ತಪ್ಪಿಸಲು ಈ ರೀತಿಯ ಕಾರ್ಯಾಚರಣೆ ನಡೆಯುತ್ತಿದೆ. ಭಾರೀ ಲಾರಿಗಳ ಸಂಚಾರ ಬೆಳಗಾವಿ ಹಾಗೂ ಖಾನಾಪುರ ಭಾಗದ ಪಶ್ಚಿಮ ರಸ್ತೆಗಳ ಮೇಲೆ ಹೆಚ್ಚಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ ಎಂದು ರಾಜಕುಮಾರ್ ಟೋಪಣ್ಣವರ ಆರೋಪಿಸಿದರು.
ಈ ಭಾಗಗಳು ಪರಿಸರದ ದೃಷ್ಟಿಯಿಂದ ಸೂಕ್ಷ್ಮ ಪ್ರದೇಶಗಳಾಗಿದ್ದು, ಅಕ್ರಮ ಗಣಿಗಾರಿಕೆಯಿಂದ ಅರಣ್ಯ ನಾಶ, ಭೂಗರ್ಭ ಜಲಮಟ್ಟ ಕುಸಿತ, ಮಣ್ಣು ಕೊಚ್ಚಿಹೋಗುವಿಕೆ ಸೇರಿದಂತೆ ಗಂಭೀರ ಪರಿಸರ ಹಾನಿ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ದೂರಿನಲ್ಲಿ ತಕ್ಷಣ ತನಿಖೆ ನಡೆಸಿ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾಮಾಜೀಕ ಕಾರ್ಯಕರ್ತ ಸುಜೀತ್ ಮುಳಗುಂದ ಒತ್ತಾಯಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 