ಕೆಪಿಎಸ್ ಶಾಲೆಗೆ ಖಾನಾಪುರ ಹಾಗೂ ನಾಯಕನ ಹುಲಿಕಟ್ಟಿ ಶಾಲೆಯನ್ನು ವೀಲೀನಗೊಳಿಸದಂತೆ ಆಗ್ರಹಿಸಿ ಡಿಡಿಪಿಐ ಅಧಿಕಾರಿಗಳಿಗೆ ಮನವಿ
Appeal to DDPI officials not to merge Khanapura and Nayakana Hulikatti schools with KPS school
ಧಾರವಾಡ 15 : ಖಾನಾಪುರ ಹಾಗೂ ನಾಯಕನ ಹುಲಿಕಟ್ಟಿ ಗ್ರಾಮದ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವೀಲೀನಗೊಳಿಸಿದಂತೆ ಆಗ್ರಹಿಸಿ ಎಐಡಿಎಸ್‌ಒ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯಿಂದ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಡಿಡಿಪಿಐ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಐಡಿಎಸ್‌ಒ ಧಾರವಾಡ ಜಿಲ್ಲಾ ಸಮಿತಿಯ ಕಾರ್ಯದರ್ಶಿಗಳಾದ ಶಶಿಕಲಾ ಮೇಟಿ ಮಾತನಾಡಿ ಕರ್ನಾಟಕ ರಾಜ್ಯ ಸರ್ಕಾರವು ಬಜೆಟ್ ನಲ್ಲಿ ಘೋಷಿಸಿರುವಂತೆ ಜೂನ್ ನಿಂದಲೇ ಹೊಸ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ.
ಈ ಶಾಲೆಗಳ 3 ರಿಂದ 5 ಕಿ.ಮೀ ವ್ಯಾಪ್ತಿಯ ಶಾಲೆಗಳನ್ನು ವೀಲೀನಗೊಳಿಸಲಾಗುವುದೆಂದು 15 ಅಕ್ಟೋಬರ್ 2025ರ ಆದೇಶವು ತಿಳಿಸುತ್ತದೆ. ಈ ಕುರಿತು ಪಟ್ಟಿ ಕೂಡ ದೊರೆತಿದೆ. ನಮ್ಮೂರ ಶಾಲೆ ಉಳಿಯಬೇಕು ಮತ್ತು ಕೆಪಿಎಸ್ ಯೋಜನೆ ರದ್ದಾಗಬೇಕೆಂದು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಿಕೊಂಡು ಕಳೆದ 5 ತಿಂಗಳಿಂದ ಗ್ರಾಮಸ್ಥರು ಹಾಗೂ ಪೋಷಕರು ಹೋರಾಟ ನಡೆಸಿದ್ದಾರೆ. ಗ್ರಾಮ ಮಟ್ಟದಿಂದ ಆರಂಭಿಸಿ ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ವರೆಗೂ ಪ್ರತಿಭಟನೆ ಹಾಗೂ ಸಮಾವೇಶಗಳನ್ನು ನಡೆಸಿದ್ದಾರೆ.
ನಾಡಿನ ಹೆಸರಾಂತ ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರು ನಮ್ಮೊಂದಿಗೆ ಧ್ವನಿಗೂಡಿಸಿದ್ದಾರೆ. ನಮ್ಮೂರ ಶಾಲೆ ನಮ್ಮೂರ ಮಕ್ಕಳ ಜ್ಞಾನದ ಮಂದಿರವಾಗಿದೆ. ನಮ್ಮೂರ ಶಾಲೆಯನ್ನು ಮುಚ್ಚಲು/ವೀಲೀನಗೊಳಿಸಲು ನಮ್ಮ ಒಪ್ಪಿಗೆಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೇ ಸರ್ಕಾರವು 1ನೇ ತರಗತಿಯಿಂದಲೇ ಕನ್ನಡ ಮಾಧ್ಯಮದೊಂದಿಗೆ ಇಂಗ್ಲಿಷ್ ಮಾಧ್ಯಮ ಕೂಡ ಆರಂಭಿಸುತ್ತಿದೆ. ಕೆಲವು ಕಡೆ ತಿಳಿದು ಬಂದಿರುವ ಮಾಹಿತಿಯಂತೆ, ದ್ವಿಭಾಷಾ ಮಾಧ್ಯಮದ ಹೆಸರಲ್ಲಿ ಕೇವಲ ಇಂಗ್ಲಿಷ್ ಮಾಧ್ಯಮ ಕಲಿಸಲು ತಯಾರಿ ನಡೆಸಲಾಗುತ್ತಿದೆ.
ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ತೆಗೆದುಹಾಕುವುದನ್ನು ಒಪ್ಪಲು ಸಾಧ್ಯವಿಲ್ಲ. ಮಾಧ್ಯಮದ ಆಯ್ಕೆ ಸ್ವಾತಂತ್ವವನ್ನು ಪೋಷಕರಿಗೆ ನೀಡಬೇಕು ಎಂದು ಹೇಳಿದರು. ಆದ್ದರಿಂದ ನಮ್ಮೂರ ಶಾಲೆಗೆ ಸಮರ್ಕ ಸೌಲಭ್ಯ ಹಾಗೂ ಶಿಕ್ಷಕರನ್ನು ನೀಡಿ ಅಭಿವೃದ್ಧಿ ಪಡಿಸಬೇಕೆಂಬುದು ನಮ್ಮೆಲ್ಲರ ಒಕ್ಕೊರಲ ಆಗ್ರಹವಾಗಿದೆ. ಯಾವುದೇ ಕಾರಣಕ್ಕೂ ನಮ್ಮೂರ ಶಾಲೆ ಮುಚ್ಚಬಾರದೆಂದು ಮನವಿ ಮೂಲಕ ಆಗ್ರಹಿಸಲಾಯಿತು.
*ಬೇಡಿಕೆಗಳು:*
* ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹಿಂಪಡೆಯಿರಿ.
* ಖಾನಾಪುರ ಹಾಗೂ ನಾಯಕನ ಹುಲಿಕಟ್ಟಿ ಶಾಲೆ ವೀಲೀನ ಕೈಬಿಡಿ.
* ಶಾಲೆಗೆ ಸಮರ್ಕ ಸೌಲಭ್ಯ ನೀಡಿ ಬಲ ಪಡಿಸಿ.
ಈ ಸಂದರ್ಭದಲ್ಲಿ ಎಐಡಿಎಸ್‌ಒ ರಾಜ್ಯ ಸೆಕ್ರೆಟರಿಯಟ್ ಸದಸ್ಯರಾದ ವಿನಯ ಚಂದ್ರ, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಅಧ್ಯಕ್ಷರಾದ ಮಲ್ಲೇಶ್ ಕಟಗಿ, ಗ್ರಾಮ ಕಾರ್ಯದರ್ಶಿಗಳಾದ ಕರಿಬಸಪ್ಪ ಸದಸ್ಯರಾದ ಸಂಗಪ್ಪ ಕುಂಬಾರ್,ಚಂದ್ರು ಖಾನಾಪುರ, ರೆಹಮಾನ್,ಹಾಗೂ ಪೋಷಕರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 